21.6 C
New York
Saturday, July 27, 2024

Buy now

spot_img

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಿಶೇಷ ಕ್ಯಾಮೆರಾ

ಬೆಂಗಳೂರು :- ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹಾಗೂ ಸಾವು-ನೋವು ಕಡಿಮೆ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೃತಕ ಬುದ್ದಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ.
ಮಿತಿ ಮೀರಿ ವೇಗವಾಗಿ ಚಲಿಸುವ ವಾಹನಗಳ ಮೇಲೆ ನಿಗಾ ಇಡಲು ಕೃತಕ ಬುದ್ದಿಮತ್ತೆ (ಎಐ) ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆ‌ರ್) ಕ್ಯಾಮೆರಾಗಳನ್ನು ಬೆಂಗಳೂರು-ನಿಡಘಟ್ಟ ಹಾಗೂ ನಿಡಘಟ್ಟ-ಮೈಸೂರು ಮಾರ್ಗಗಳ ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗುತ್ತಿದೆ.
ಮೊದಲಿಗೆ 118 ಕಿಲೋಮೀಟರ್ ಉದ್ದಕ್ಕೂ ಪ್ರತಿ 10 ಕಿಲೋಮೀಟರ್ ದೂರಕ್ಕೆ ಒಂದು ಕ್ಯಾಮೆರಾವನ್ನು ಅಳವಡಿಸಲು ಯೋಜಿಸಲಾಗಿತ್ತು. ಇದೀಗ ಪ್ರತಿ 2 ಕಿಲೋಮೀಟರೆ ಒಂದರಂತೆ 60ಕ್ಕೂ ಹೆಚ್ಚು ಎಐ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯು ಸಂಚಾರಕ್ಕೆ ಮುಕ್ತವಾದ 9 ತಿಂಗಳಲ್ಲಿ ಅಪಘಾತದಿಂದ 185 ಜನರು ಮೃತಪಟ್ಟಿದ್ದರು. ಹೆದ್ದಾರಿಯ ಸುರಕ್ಷತೆ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದರು. ಈ ಹಿನ್ನಲೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles