21.5 C
New York
Thursday, June 20, 2024

Buy now

spot_img

ಡೆಂಗ್ಯೂ ತಡೆಗೆ ಪರಿಸರ ಸ್ವಚ್ಛತೆ ಮುಖ್ಯ

ಮಂಡ್ಯ :- ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಪ್ರತಿಯೊಬ್ಬರು ತಮ್ಮ ಮನೆ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.
ನಗರದ ಸಂಜಯ್ ವೃತ್ತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಜಾಗೃತಿ ಜಾಥಾ
ಉದ್ಘಾಟಸಿ ಮಾತನಾಡಿ
ಡೆಂಗ್ಯೂ ನಿಯಂತ್ರಣದ ಜಾಗೃತಿ ಜಾಥಾ ಕಾರ್ಯಕ್ರಮ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತಹ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಾರ್ವಜನಿಕರು ಡೆಂಗ್ಯೂ ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಮುನ್ನಚ್ಚರಿಕಾ ಕ್ರಮಗಳನ್ನು ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದರು.
ರೋಗ ಬರುವುದಕ್ಕೂ ಮುಂಚಿತವಾಗಿ ನಾವುಗಳು ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ ವಾಗಿಟ್ಟುಕೊಂಡರೆ ರೋಗ ಹರಡುವುದಿಲ್ಲ ಎಂದರು.
ಜಿಲ್ಲಾ ಆರೋಗ್ಯಧಿಕಾರಿ ಡಾ ಕೆ ಮೋಹನ್ ರವರು ಮಾತನಾಡಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಈ ಬಾರಿ ಸಮುದಾಯದೊಂದಿಗೆ ಸೇರಿ ಡೆಂಗ್ಯೂ ನಿಯಂತ್ರಿಸೋಣ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಡೆಂಗ್ಯೂ ಜ್ವರವು ಸೊಳ್ಳೆಯಿಂದ ಹರಡುವಂತಹದ್ದು ಒಬ್ಬರಿಂದ ಮತ್ತೊಬ್ಬರಿಗೆ ಬರುವಂತಹ ಖಾಯಿಲೆ ಇದು ಆದ್ದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಸುತ್ತ-ಮುತ್ತ ಸ್ವಚ್ಛತಾ ಕಾಪಾಡಿಕೊಳ್ಳಿಬೇಕು ಎಂದರು.
ತೀವ್ರ ಜ್ವರ, ಕಣ್ಣು ಹಿಂಭಾಗ ನೋವು, ತೀರ ಮೈ-ಕೈ ನೋವು ಡೆಂಗ್ಯೂ ರೋಗದ ಲಕ್ಷಣಗಳು. ಈ ರೋಗ ಬರದಂತೆ ತಡೆದುಕೊಳ್ಳುವುದೇ ಮೂಲ ಉದ್ದೇಶವಾಗಿರುತ್ತದೆ, ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಳ್ಳುವುದು, ಮನೆ ಆವರಣದಲ್ಲಿ ನೀರು ನಿಲ್ಲದಂತೆ ಸ್ವಚ್ಛತಾ ಕಾಪಾಡಿಕೊಳ್ಳಬೇಕು ಹಾಗೂ ಈ ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು.
ಮಲೇರಿಯಾ ನಿಯಂತ್ರಣಾಧಿಕಾರಿ ಡಾ ಕಾಂತರಾಜ, ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ ಕೆ ಸೋಮಶೇಖರ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಮ್.ಎನ್ ಆಶಾಲತಾ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles