ಕೆ.ಆರ್.ಪೇಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಜಯನಗರ ಬಡಾವಣೆಯ ಶಿಕ್ಷಕಿ ಅನಿತಾರ ಮನೆಯಲ್ಲಿ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿವೆ.
ಶನಿವಾರ ತಡರಾತ್ರಿ ಮಳೆ ಸುರಿಯುತ್ತಿದ್ದ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಡ್ಜ್ ಗೆ ಬೆಂಕಿ ಹೊತ್ತಿಕೊಂಡಿದ್ದು. ಬೆಂಕಿಯ ಕೆನ್ನಾಲಿಗೆಗೆ ಗಡಿಯಾರ,ಬಟ್ಟೆ-ಬರೆಗಳು ಸೇರಿದಂತೆ ಮನೆಯ ಹಲವು ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ಮನೆಯಲ್ಲಿ ಯಾರು ಇಲ್ಲದ ಹಿನ್ನೆಲೆಯಲ್ಲಿ ಬೆಳಿಗ್ಗೆ ವೇಳೆ ಸ್ಥಳೀಯರು ಹೊಗೆ ಬರುತ್ತಿರುವುದನ್ನು ಗಮನಿಸಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಠಾಣಾಧಿಕಾರಿ ಶಿವಣ್ಣ ನೇತ್ರತ್ವದ ತಂಡ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸಿದ್ದಾರೆ.
ಚೆಸ್ಕಾಂ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಷ್ಟದ ಬಗ್ಗೆ ಅಂದಾಜಿಸಿದ್ದಾರೆ.