ಮಂಡ್ಯ: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮರಿತಿಬ್ಬೇ ಗೌಡ ಮೇಲ್ಮನೆಯ ಸಭಾಪತಿಯಾಗುವ ಎಲ್ಲಾ ಅವಕಾಶಗಳಿವೆ. ಹಾಗಾಗಿ ಮತ್ತೊಮ್ಮೆ ಅವರನ್ನು ಶಿಕ್ಷಕ ಬಂಧುಗಳು ಬೆಂಬಲಿಸುವಂತೆ ಶಾಸಕ ಪಿಎಂ ನರೇಂದ್ರಸ್ವಾಮಿ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ,ಮರೆತಿಬ್ಬೇಗೌಡರು ನಾಲ್ಕು ಬಾರಿ ಮೇಲ್ಮನೆ ಪ್ರವೇಶಿಸಿದ್ದು ಹಿರಿಯ ನಾಯಕರಾಗಿದ್ದಾರೆ. ಅವರು ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಆದ್ದರಿಂದ ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಿ ಸೇವೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.
ಬಿಜೆಪಿ ಮತ್ತು ಜೆಡಿಎಸ್ ನೇತೃತ್ವದ ಸರಕಾರ ಇದ್ದ ಸಂದರ್ಭದಲ್ಲಿ ಶಿಕ್ಷಕರ ಸಮಸ್ಯೆಗಳು ಬಗೆಹರಿದಿಲ್ಲಾ. ಹಳೆ ಪಿಂಚಣಿ ನೀತಿ ಬಗ್ಗೆ ಹೋರಾಟ ಮಾಡಲಾಗಿತ್ತು. ನಾವು ಹಳೆ ಪಿಂಚಣಿ ಯೋಜನೆಯ ಬೇಡಿಕೆಯನ್ನು ಘೋಷಣೆ ಮಾಡಿದ್ದೇವೆ .ಈಗ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದರು.
ಎಪಿಎಂಸಿ ಕಾಯ್ದೆ ವಿಚಾರದಲ್ಲಿ ಬಿಜೆಪಿ ರೈತ ವಿರೋಧಿ ನೀತಿ ಅನುಸರಿಸಿತ್ತು. ಆದರೆ ಕಾಂಗ್ರೆಸ್ ಪಕ್ಷ ರೈತ ಪರ ನಿಂತ ಸರ್ಕಾರವಾಗಿದ್ದು ,ಮರಿ ತಿಬ್ಬೇ ಗೌಡರು ಮತ್ತೆ ಸ್ಪರ್ಧಿಸುತ್ತಿದ್ದಾರೆ. ಆದ್ದರಿಂದ ಶಿಕ್ಷಕರು ದಯಮಾಡಿ ಅವರನ್ನು ಆಶೀರ್ವದಿಸಬೇಕು ಎಂದು ವಿನಂತಿಸಿದರು.
ಶಿಕ್ಷಕರ ಸೇವಾ ಭದ್ರತೆಯನ್ನು ಮುಂದೆ ಸರಿಪಡಿಸಲಿದ್ದು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದೆ .ಆದ್ದರಿಂದ ಮರಿ ತಿಬ್ಬೇಗೌಡರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು