ಮಂಡ್ಯ :- ಕಾವೇರಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಳವಾಗಿದೆ.
124.80 ಸಾಮರ್ಥ್ಯದ ಜಲಾಶಯದಲ್ಲಿ ನೀರಿನ ಮಟ್ಟ 90.30 ಅಡಿಗೆ ತಲುಪಿದೆ. ಅಣೆಕಟ್ಟೆಗೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, 13437 ಕ್ಯೂಸೆಕ್ ಒಳ ಹರಿವು ಇದ್ದರೆ,478 ಕ್ಯೂಸೆಕ್ ಹೊರ ಬಿಡಲಾಗಿದೆ.
ಕಾವೇರಿಯ ಉಗಮ ಸ್ಥಳ ಕೊಡಗು ಜಿಲ್ಲೆಯಲ್ಲಿ ಸತತ ಮಳೆ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಇದರಿಂದ ಒಂದೇ ದಿನದಲ್ಲಿ ಎರಡು ಅಡಿ ನೀರು ಬಂದಿದ್ದು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿದೆ.