ಮಂಡ್ಯ :- ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪಕ್ಷದ ರೈತ ಮೋರ್ಚಾ ನೇತೃತ್ವದಲ್ಲಿ ಕಾರ್ಯಕರ್ತರು ಹಸುಗಳ ಹಾಲು ಕರೆದು ಪ್ರತಿಭಟಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ, ರೈತ ವಿದ್ಯಾನಿಧಿ, ಭೂ ಸಿರಿ ಕಾಯ್ದೆ, ಗೋಶಾಲೆ, ಕಿಸಾನ್ ಸಮ್ಮಾನ್ ಸೇರಿದಂತೆ ಹಲವು ಯೋಜನೆಗಳನ್ನು ಸ್ಥಗಿತ ಮಾಡುವ ಮೂಲಕ ರೈತರ ಶಕ್ತಿ ಕುಗ್ಗಿಸಲು ಮುಂದಾಗಿದೆ ಎಂದು ಆರೋಪಿಸಿದರು.
ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರೆಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳುವ ಮೂಲಕ ದ್ರೋಹ ಮಾಡಲಾಗಿದೆ, ಹಾಲಿನ ಪ್ರೋತ್ಸಾಹ ಧನವನ್ನ ಪಶುಪಾಲನ ಇಲಾಖೆ ಸೇರಿದಂತೆ ವಿವಿಧ ಇಲಾಖೆಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಿಡಿಕಾರಿದರು
ಪೆಟ್ರೋಲ್ – ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ, ಹಾಲಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ಕಳೆದ ಆರು ತಿಂಗಳಿಂದ ನೀಡಿಲ್ಲ, ರೈತರು, ಕಾರ್ಮಿಕರು, ಜನಸಾಮಾನ್ಯರು ಅಷ್ಟೇ ಅಲ್ಲದೆ ಕನ್ನಡಿಗರ ವಿರೋಧಿ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರಿಗೆ ಹಾಲಿನ ಪ್ರೋತ್ಸಾಹ ಧನವನ್ನು ಪಾವತಿಸಬೇಕು, ಪೆಟ್ರೋಲ್ ಡೀಸೆಲ್ ದರ ಇಳಿಕೆ ಮಾಡಬೇಕು,ರೈತಪರ ಯೋಜನೆಗಳನ್ನ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಅಶೋಕ್ ಜಯರಾಮ್, ಪಕ್ಷದ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಡಾ. ಸಿದ್ದರಾಮಯ್ಯ, ಹನಿಯಂಬಾಡಿ ನಾಗರಾಜು.ವಿವೇಕ್, ಸಿ. ಟಿ ಮಂಜುನಾಥ್, ಸಿದ್ದರಾಜು ಗೌಡ, ನಾಗಾನಂದ, ಶಶಿಕುಮಾರ್, ಸತೀಶ್, ಭೀಮೇಶ್,ನಾಗರಾಜು, ಲಿಂಗರಾಜು, ಜವರೇಗೌಡ ,ವೈರಮುಡಿ ,ವಿನಯ್ ನೇತೃತ್ವ ವಹಿಸಿದ್ದರು.