ಮಂಡ್ಯ :- ಕೆ ಆರ್ ಎಸ್ ವ್ಯಾಪ್ತಿಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡಸಿದರೆ ಜಲಾಶಯಕ್ಕೆ ಅಪಾಯವಿದೆ ಎಂಬ ಆತಂಕ ಎಲ್ಲರಲ್ಲೂ ಇದ್ದು ಟ್ರಯಲ್ ಬ್ಲಾಸ್ಟ್ ಸ್ಥಗಿತ ಗೊಳಿಸಲು ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದರು.
ನಗರದ ಸರ್ ಎಂ ವಿ ಪ್ರತಿಮೆ ಬಳಿ ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು ಕೃಷ್ಣರಾಜಸಾಗರ ಜನರ ಬದುಕಿನ ಪ್ರಶ್ನೆಯಾಗಿದೆ, ಈ ಭಾಗದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯಕ್ಕೆ ಅಪಾಯ ಎದುರಾಗಲಿದೆ ಎಂದು ಮೂರು ನಾಲ್ಕು ವರ್ಷದಿಂದ ಆತಂಕ ವ್ಯಕ್ತವಾಗುತ್ತಲೇ ಇದೆ, ಇದೀಗ ಟ್ರಯಲ್ ಬ್ಲಾಸ್ಟ್ ಮುಂದಾಗಿರುವ ಬಗ್ಗೆ ನ್ಯಾಯಾಲಯದ ಆದೇಶ ಇದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಅಷ್ಟೇ ಅಲ್ಲದೆ ಹೈ ಕೋರ್ಟ್ ನಲ್ಲಿ ವಿಚಾರಣೆ ಇವತ್ತೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ಟ್ರಯಲ್ ಬ್ಲಾಸ್ಟ್ ನಿಲ್ಲಿಸುವ ಬಗ್ಗೆ ಮೇಲಾಧಿಕಾರಿಗಳ ಜೊತೆ ಚರ್ಚೆ ಮಾಡಲಾಗುವುದು, ಜಲಾಶಯರ ಸುರಕ್ಷತೆ ದೃಷ್ಟಿಯಿಂದ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂಬ ನಿಮ್ಮ ಬೇಡಿಕೆಗೆ ನನ್ನ ಸಹಮತವಾಗಿದೆ, ನಿಮ್ಮ ಹೋರಾಟದ ಜೊತೆ ಇರಲಿದ್ದೇನೆ ಎಂದು ಭರವಸೆ ನೀಡಿದರು.