17.6 C
New York
Sunday, September 8, 2024

Buy now

spot_img

ನೀರು ಬಿಡುವ ತೀರ್ಮಾನ ಮಾಡಿ ಮೇಲ್ಮನವಿಯಂತೆ : ಸರ್ವ ಪಕ್ಷ ನಿರ್ಣಯದ ವಿರುದ್ಧ ಆಕ್ರೋಶ

ಮಂಡ್ಯ :- ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ ಎಂಟು ಸಾವಿರ ಕ್ಯೂಸೆಕ್ ನೀರು ಬಿಡಲು ಸರ್ವ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಿರುವುದು ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸೂಚನೆಯನ್ನು ಒಪ್ಪಿಕೊಂಡಂತಾಗಿದೆ, ಆದೇಶ ಪಾಲನೆ ಮಾಡಿದ ನಂತರ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವುದು ಎಲ್ಲಿಂದ ಬಂತು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕೆ ಟಿ ಶ್ರೀಕಂಠೇಗೌಡ ಪ್ರಶ್ನಿಸಿದರು.
ನಗರದ ಸರ್ ಎಂ ವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹೋರಾಟದಲ್ಲಿ ಮಾತನಾಡಿದ ಅವರು ಸರ್ಕಾರ ಆದೇಶ ಪಾಲನೆ ಮಾಡಿ ನೀರು ಬಿಟ್ಟ ನಂತರ ಮೇಲ್ಮನವಿ ಸಲ್ಲಿಸಿ ಏನು ಮಾಡಲಿದೆ, ಸರ್ಕಾರದ ನಿಲುವಿನಲ್ಲಿ ವೈರುಧ್ಯತೆ ಇದೆ, ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದರು.
ತಮಿಳುನಾಡಿಗೆ ನಿರಂತರ ನೀರು ಹರಿಸಿದರೆ ಕೃಷ್ಣರಾಜಸಾಗರದಲ್ಲಿ ನೀರಿನ ಪ್ರಮಾಣ ಕುಸಿತ ಕಾಣಲಿದೆ, ಕುಡಿಯುವ ನೀರು ಮತ್ತು ಬೆಳೆಗಳಿಗೆ ನೀರು ಕೊಡಲು ಹೇಗೆ ಸಾಧ್ಯ, ಈಗಾಗಲೇ ಕಳೆದ ಬಾರಿ ಬೆಳೆ ಬೆಳೆಯಲು ಸಾಧ್ಯವಾಗದೆ ರೈತರು ಸಂಕಷ್ಟದಲ್ಲಿದ್ದಾರೆ ಮುಂದಿನ ಮೂರು ವರ್ಷಗಳ ಕಾಲ ಸಮೃದ್ಧವಾಗಿ ಬೆಳೆ ಬೆಳೆದರೆ ಸಂಕಷ್ಟದಿಂದ ಹೊರಬರಲು ಸಾಧ್ಯ ಆದರೆ ನೀರು ಬಿಡುವ ಸರ್ಕಾರದ ತೀರ್ಮಾನ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ವಿಧಾನಮಂಡಲ ಅಧಿವೇಶನದಲ್ಲಿ ಕಾವೇರಿ ಚರ್ಚೆ ಸಾಧ್ಯತೆ ಕಡಿಮೆ, ಸರ್ಕಾರದ ಆಭರಣಗಳ ವಿರುದ್ಧ ಚರ್ಚೆಗೆ ಪ್ರತಿಪಕ್ಷಗಳು ಹೆಚ್ಚಿನ ಆಸಕ್ತಿ ತೋರಲು ಮುಂದಾಗಿದೆ ಹಾಗಾಗಿ ನಿಲುವಳಿ ಸೂಚನೆಯಲ್ಲಿ ಕಾವೇರಿ ಚರ್ಚೆ ನಡೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.
ರಾಜಕೀಯ ಪಕ್ಷಗಳಿಗೆ ರೈತರ ಹಿತ ಕಾಪಾಡುವ ಕಾಳಜಿ ಇಲ್ಲ, ಇಚ್ಛಾ ಶಕ್ತಿ ಕೊರತೆಯಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ, ಸರ್ವಸಪಕ್ಷಗಳ ಸಭೆಯಲ್ಲಿ ಕೈಗೊಂಡಿರುವ ನೀರು ಬಿಡುವ ತೀರ್ಮಾನವನ್ನು ಒಪ್ಪಲು ಸಾಧ್ಯ ಇಲ್ಲ, ಈ ಕೂಡಲೇ ಸರ್ವಪಕ್ಷ ಸಭೆಯ ನಿರ್ಣಯವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಮ್ ಮಾತನಾಡಿ ರಾಜ್ಯದ ಮೂರು ರಾಜಕೀಯ ಪಕ್ಷಗಳು ಕಾವೇರಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ ಅವರ ಇಚ್ಛಾ ಶಕ್ತಿ ಕೊರತೆಯಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ, ನೀರು ಬಿಡುವ ನಿರ್ಣಯವನ್ನು ಒಪ್ಪುವುದಿಲ್ಲ ಎಂದು ಹೇಳಿದರು,
ಸದನದಲ್ಲಿ ಚರ್ಚೆ ಮಾಡಬೇಕಾಗಿರುವುದು ಕಾವೇರಿ ಕೊಳ್ಳಬಾಗದ ಜನಪ್ರತಿನಿಧಿಗಳ ಜವಾಬ್ದಾರಿ, ಕಾವೇರಿ ವಿಚಾರದಲ್ಲಿ ನಿರ್ಲಕ್ಷ ವಹಿಸುವುದು ಸರಿಯಲ್ಲ ಈ ಬಗ್ಗೆ ಸಮಗ್ರ ಚರ್ಚೆ ನಡೆಸಿ ರೈತರ ಕಾಪಾಡಲು ಮುಂದಾಗ ಬೇಕೆಂದರು.
ಕಾವೇರಿ ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಪ್ರತಿಯೊಬ್ಬ ರ ಜವಾಬ್ದಾರಿ, 8 ಜಿಲ್ಲೆಗಳ ಜನತೆ ಬೀದಿಗಿಳಿದು ಹೋರಾಟ ಮಾಡಬೇಕು, ಇಲ್ಲದಿದ್ದರೆ ಮುಂದಿನ ಸಂಕಷ್ಟ ಕಾಲಕ್ಕೆ ಅವರೇ ಹೊಣೆ ಎಂದು ಎಚ್ಚರಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ಬೋರಯ್ಯ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಶಿವಳ್ಳಿ ಚಂದ್ರಶೇಖರ್, ಎಚ್ ಡಿ ದೇವೇಗೌಡ ಹುಲಿಗೆರೆಪುರ, ಜೈ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್ ನಾರಾಯಣ್, ಬಸವರಾಜ್, ಸುಶೀಲಮ್ಮ, ವೀಣಾಂಬ, ಇಂದಿರಾ, ಮಂಜುಳಾ, ವನಜಾಕ್ಷಿ, ಬಿ ಪುಟ್ಟಸ್ವಾಮಿ, ನಾಗೇಶ್, ಪ್ರಸಾದ್, ನಾರಾಯಣಸ್ವಾಮಿ, ಕೆಂಪೇಗೌಡ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್ ಸಿ ಮಂಜುನಾಥ್, ಮಹಾಂತಪ್ಪ,ಪತ್ರಕರ್ತ ಬಸವೇಗೌಡ, ಎಂ.ಎಲ್ ತುಳಸೀಧರ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles