18.4 C
New York
Monday, September 16, 2024

Buy now

spot_img

ಮುಖ್ಯಮಂತ್ರಿ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಕದಸಂಸ ಕಾರ್ಯಕರ್ತರ ಬಂಧನ

ಮಂಡ್ಯ :- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿರಿಸಿದ್ದ ಎಸ್ ಸಿ ಎಸ್ ಪಿ ಹಾಗೂ ಟಿ ಎಸ್ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನ ಪೊಲೀಸರು ಮಂಡ್ಯದಲ್ಲಿ ಬಂಧಿಸಿದರು.
ಕೃಷ್ಣರಾಜಸಾಗರದಲ್ಲಿ ಕಾವೇರಿ ಮಾತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ  ಸಮರ್ಪಣೆ ಕಾರ್ಯಕ್ರಮ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  ಕಪ್ಪು ಬಾವುಟ ಪ್ರದರ್ಶಿಸಲು ಸಮಿತಿ ಕಾರ್ಯಕರ್ತರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ್ದರು, ಆದರೆ ಪೊಲೀಸರು ತಕ್ಷಣ  ಬಂಧಿಸಿದ್ದಾರೆ
ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ,  ಜಿಲ್ಲಾಧ್ಯಕ್ಷ ಬಿ ಆನಂದ್,  ಸಿದ್ದಯ್ಯ ದೊಡ್ಡಬೂವಹಳ್ಳಿ,  ಸುಶ್ಮಿತಾ, ಎನ್ ಸಿ ರಾಜು ನಿಡಘಟ್ಟ ಸೇರಿದಂತೆ ಒಟ್ಟು 18 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪರಿಶಿಷ್ಟರ  ಮೀಸಲು ಎಸ್ ಸಿ ಎಸ್ ಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ 25.282ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದಲ್ಲದೆ ರಾಜ್ಯ ಸರ್ಕಾರ 105.469 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ, ಅದೇ ರೀತಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ನಡೆಸಿ ಹಣ ಗುಳುಂ ಮಾಡಲಾಗಿದೆ,ಆರ್ಥಿಕ ಅಶಿಸ್ತಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಉಪಯೋಜನಾ ಕಾಯ್ದೆಯಡಿ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ್ದ ಅನುದಾನ ದುರ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಕಲಂ 7 (ಸಿ ) (ಡಿ ) ಸೇರಿಸಲಾಗಿದೆ, ಇದೊಂದು ನಯ ವಂಚನೆ ಕ್ರಮವಾಗಿದ್ದು,ಇಂತಹ ಅನ್ಯಾಯ ತಡೆಯಲು ವಿಫಲವಾಗಿರುವ ಸಮುದಾಯದ ಸಚಿವರು,ಶಾಸಕರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಗ್ಯಾರಂಟಿ ಯೋಜನೆಗೆ ಪಡೆದಿರುವ 25,282 ಕೋಟಿ, ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ಮತ್ತು ಕಳೆದ ಹತ್ತು ವರ್ಷದಲ್ಲಿ ಆಳುವ ಸರ್ಕಾರಗಳು ವಾಪಸ್ ಪಡೆದಿರುವ 80.000 ಕೋಟಿ ಹಣವನ್ನು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ಹಂಚಿಕೆ ಮಾಡಬೇಕು, ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಅನುದಾನ ಸದ್ಬಳಕೆ ಮಾಡದೆ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿ ಮತ್ತು ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು, ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿ ನಾಟಕ ನಿಲ್ಲಿಸಿ ಹೊರಗುತ್ತಿಗೆ ಪದ್ಧತಿ ರದ್ದು ಮಾಡಿ ಸರ್ಕಾರಿ ಸೇವಾ ನೇಮಕಾತಿಯಂತೆ ನೇಮಕ ಪ್ರಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದ ಮುಕ್ತಿಗಾಗಿ ಸಂವಿಧಾನಾತ್ಮಕವಲ್ಲದ ಎಲ್ಲಾ ನ್ಯಾಯಾಲಯ ಪ್ರಾಧಿಕಾರ ತೀರ್ಪನ್ನು ತಿರಸ್ಕರಿಸಬೇಕು, ಸಂವಿಧಾನದತ್ತವಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಜಲನೀತಿ ರೂಪಿಸುವವರೆಗೆ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರು ಇದ್ದಾಗ ಮಾತ್ರ ತಮಿಳುನಾಡಿಗೆ ನೀರು ಹರಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles