ಮಂಡ್ಯ :- ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲ್ಕತ್ತಾದಲ್ಲಿ ವ್ಯೆದ್ಯೆ ಅತ್ಯಾಚಾರ,ಕೊಲೆ ಹಾಗೂ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ವಿರೋಧಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ನ್ಯಾಯಾಲಯದ ಕಲಾಪದಿಂದ ಹೊರಗುಳಿದ ವಕೀಲರು ಸಂಘದ ಆವರಣದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಹಿಂದೂಯೇ ತರರ ಮೇಲೆ ದೌರ್ಜನ್ಯ ನಡೆಸುವ ಮೂಲಕ ಕಾನೂನು ವಿರೋಧಿ ಚಟುವಟಿಕೆ ಹೆಚ್ಚಾಗಿದೆ, ದೌರ್ಜನ್ಯ ಹೆಚ್ಚಳದಿಂದ ಪ್ರಾಣ ಹಾನಿಯೂ ಸಂಭವಿಸಿದೆ, ಅಮಾನುಸ ದೌರ್ಜನ್ಯ ತಡೆಯಲು ಅಲ್ಲಿನ ಸರ್ಕಾರ ವಿಫಲವಾಗಿದೆ, ಕೇಂದ್ರ ಸರ್ಕಾರ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗ್ಯೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತವಾಗಿದೆ, ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು, ದೇಶದ ವಿವಿದೆಡೆ ವಕೀಲರ ಮೇಲೆ ಹಲ್ಲೆ,ದೌರ್ಜನ್ಯ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ಟಿ ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಡಿ.ಎಂ ಮಹೇಶ್, ಶೋಭಾ, ಜಿ.ಬಿ ಬಸವರಾಜು, ಮರಿಗೌಡ, ತಿರುಮಲ ಸ್ವಾಮಿ, ನಂದೀಶ್, ಎಂ ರೂಪ ನೇತೃತ್ವ ವಹಿಸಿದ್ದರು.