3.5 C
New York
Saturday, December 28, 2024

Buy now

spot_img

ಕನ್ನಡಿಗರಿಗೆ ಉದ್ಯೋಗಕ್ಕಾಗಿ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಮಂಡ್ಯ :- ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡಲು ಡಾಕ್ಟರ್ ಸರೋಜಿನಿ ಮಹಿಷಿ ಪರಿಸ್ಕೃತ ವರದಿಯನ್ನು ಕಾಯ್ದೆಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು.
ನಗರದ ಮಹಾವೀರ ವೃತ್ತದಲ್ಲಿ ಸೈನ್ಯದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಕಲ್ಪಿಸಲು ಕಾಯ್ದೆ ರೂಪಿಸಿ ವಿಧಾನಮಂಡಲದಲ್ಲಿ ಮಂಡನೆ ಮಾಡಿ ಜಾರಿಗೆ ತರಲು ವಿಫಲವಾಗಿರುವ ಆಳುವ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು,
ಖಾಸಗಿ ವಲಯಕ್ಕೆ ಕನ್ನಡ ನಾಡಿನಲ್ಲಿ ಭೂಮಿ. ನೀರು, ತೆರಿಗೆ ವಿನಾಯಿತಿ ಹಾಗೂ ಮೂಲ ಸೌಲಭ್ಯ ಕಲ್ಪಿಸಿದ್ದರೂ ಸಹ ಕನ್ನಡಿಗರಿಗೆ ಉದ್ಯೋಗ ವಂಚನೆ ಮಾಡಲಾಗುತ್ತಿದೆ ಈ ನಿಟ್ಟಿನಲ್ಲಿ ಸರ್ಕಾರ ಸಂವಿಧಾನಬದ್ಧ ಕಾನೂನು ರೂಪಿಸಿ ಉದ್ಯೋಗ ದೊರಕಿಸಿಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಹಿಂದಿ ಭಾಷಿಕರಿಗೆ ಹೆಚ್ಚಿನ ಪ್ರಮಾಣದ ಉದ್ಯೋಗ ದೊರಕುತ್ತಿದ್ದು ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ರಾಜ್ಯ ಸರ್ಕಾರ ಹಿಂದಿ ಹೇರಿಕೆ ವಿರುದ್ಧ ದನಿಯತ್ತೆ ತ್ರಿ ಬಾಷೆ ಸೂತ್ರ ವಿರೋಧಿಸಿ ದ್ವಿ ಭಾಷೆ ಸೂತ್ರ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಬೇಕು, ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ವೈಜ್ಞಾನಿಕ ಸಂಕಷ್ಟ ಸೂತ್ರ ರಚಿಸಲು ಪ್ರಾಧಿಕಾರ, ಮಂಡಳಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಪ್ರೀಂ ಕೋರ್ಟ್ ಮೊರೆವಾಗಬೇಕು,  ಅನ್ಯ ರಾಜ್ಯಗಳ ಕಾರ್ಮಿಕರ ವಲಸೆ ತಡೆದು ಕನ್ನಡಿಗರ ಹಿತ ಕಾಪಾಡಬೇಕು, ಕಳಸಾ,ಬಂಡೂರಿ, ಮಹಾದಾಯಿ ನದಿ ನೀರಿನ ವಿಚಾರದಲ್ಲಿ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಅನುಮತಿ ಪಡೆದು ಕಾಮಗಾರಿ ಆರಂಭಕ್ಕೆ ಮುಂದಾಗಬೇಕು, ಕಪ್ಪತಗುಡ್ಡ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿದರು.
ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಡಾ.ದೇವನಹಳ್ಳಿ ದೇವರಾಜ್, ಎಸ್ ಶಿವಕುಮಾರ್, ಎನ್ ಸಿ ಕಾಂಬಳೆ, ಉಮ್ಮಡಹಳ್ಳಿ ನಾಗೇಶ್,  ಬಿ ಶಿವಕುಮಾರ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles