21.3 C
New York
Saturday, October 5, 2024

Buy now

spot_img

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಕದಸಂಸ ತಮಟೆ ಚಳವಳಿ

ಮಂಡ್ಯ :- ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸರ್ವೋಚ್ಚ ನ್ಯಾಯಾಲಯ ನೀಡಿರುವ ಐತಿಹಾಸಿಕ ತೀರ್ಪನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಡ್ಯದಲ್ಲಿ ತಮಟೆ ಚಳವಳಿ ನಡೆಸಿದರು.
ನಗರದ ಸರ್ ಎಂ ವಿ ಪ್ರತಿಮೆ ಬಳಿಯಿಂದ ತಮಟೆ ಸದ್ದಿನೊಂದಿಗೆ ಮೆರವಣಿಗೆ ಹೊರಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚಳವಳಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಪತ್ರ ರವಾನಿಸಿದರು.
ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಸಂವಿಧಾನ ಬದ್ಧ ಅಧಿಕಾರ ಇದೆ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿರುವುದು ಸ್ವಾಗತಾರ್ಹ ವಾಗಿದೆ ಅಲ್ಲದೆ ಇದುವರೆಗೆ ಒಳ ಮೀಸಲಾತಿ ವಿಚಾರದಲ್ಲಿ ಇದ್ದ ಗೊಂದಲ ಪರಿಹಾರವಾಗಿದೆ, ಆದರೆ ತೀರ್ಪು ಬಂದು ಒಂದು ತಿಂಗಳು ಆಗಿದ್ದರೂ ರಾಜ್ಯ ಸರ್ಕಾರ ಆದೇಶ ಅನುಷ್ಠಾನ ಮಾಡದೆ ನಿರ್ಲಕ್ಷ್ಯ ತೋರಿದೆ ಎಂದು ಕಿಡಿಕಾರಿದರು.
ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿ ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ ಬಿ ಕೃಷ್ಣಪ್ಪರ ಜನ್ಮದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬೇಕು ಮತ್ತು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ಗೌರವ ಸಮರ್ಪಿಸಬೇಕು, ಬಾಕಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು, ಒಳ ಮೀಸಲು ಜಾರಿವರೆಗೆ ಹೊಸ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಬೇಕು, ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು, ತಲೆಮಾರುಗಳಿಂದ ಮೂರು, ನಾಲ್ಕು ಎಕರೆ ಅರಣ್ಯ ಭೂಮಿ ಸಾಗುವಳಿ ಮಾಡುತ್ತಾ ಉಪಜೀವನ ಮಾಡುತ್ತಿರುವ ಕೃಷಿ ಕಾರ್ಮಿಕರಿಗೆ ಪರ್ಯಾಯ ಭೂಮಿ ನೀಡಬೇಕು, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ, ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲ ದಡಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಗೊಳಿಸಬೇಕು ಎಂದು ಒತ್ತಾಯಿಸಿದರು.
ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ಶಿವರಾಜ್ ಮರಳಿಗ, ಜಿಲ್ಲಾ ಸಂಚಾಲಕ ಮದ್ದೂರು ಶ್ರೀನಿವಾಸ್, ಪ್ರಕಾಶ್ ನಿಡಘಟ್ಟ, ಪುಟ್ಟ ಲಿಂಗಯ್ಯ ಬೂದಗುಪ್ಪೆ, ಶಂಕರ್ ನಿಡಘಟ್ಟ, ವೆಂಕಟರಾಮು, ಸವಿತಾ,ಸೌಭಾಗ್ಯ, ಮಾದೇವಿ , ಗುರುಲಿಂಗಯ್ಯ, ಶೇಖರ್ ಸಿ.ಡಿ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles