0.6 C
New York
Tuesday, December 3, 2024

Buy now

spot_img

ರೈತರ ಜಮೀನು ಕಬಳಿಸಲು ಷಡ್ಯಂತ್ರ : ವಕ್ಫ್‌ ಬೋರ್ಡ್‌ ವಿರುದ್ಧ ಬಿಜೆಪಿ ಪ್ರತಿಭಟನೆ

ಮಂಡ್ಯ :ರೈತರ ಜಮೀನು ಕಬಳಿಕೆ ಮಾಡುತ್ತಿರುವ ವಕ್ಫ್‌ ಬೋರ್ಡ್‌ಗೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು.
ನಗರದ ಸರ್ ಎಂ ವಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು.
ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಪ್ರತಿಭಟನಾ ಕಾರರು ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ, ಜನಸಾಮಾನ್ಯರ ಭೂಮಿಯನ್ನು ವಕ್ಫ್ ಬೋರ್ಡ್‌ಗೆ  ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡುತ್ತಿದೆ ಎಂದು ದೂರಿದರು.
ಕಾಂಗ್ರೆಸ್‌ ಸರ್ಕಾರ ರೈತರ ಜಮೀನುಗಳನ್ನು ಕಬಳಿಸುವ ಷಡ್ಯಂತ್ರ ಮಾಡುತ್ತಿದೆ. ಇದಕ್ಕೆ ಸಚಿವ ಜಮೀರ್‌ ಅಹಮ್ಮದ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಗೊಳಗೆ ಕುಮ್ಮಕ್ಕು ನೀಡುತ್ತಿದ್ದಾರೆ
ರಾಜ್ಯಾದ್ಯಂತ ವಕ್ಫ್ ಬೋರ್ಡ್ ಕಂದಾಯ ಇಲಾಖೆಯ ನಿಯಮ ಮೀರಿ ಕಂಡ ಕಂಡ ಜಾಗಗಳು,ಆಸ್ತಿಗಳು ತಮ್ಮವೆಂದು ಅಕ್ರಮವಾಗಿ ಮಾಡಿಕೊಳ್ಳಲು ಮುಂದಾಗಿದೆ. ಸರ್ಕಾರ ಮುಸ್ಲಿಮರ ಓಲೈಕೆ ಮಾಡಲು ಮೌನ ವಹಿಸಿದೆ. ಸರ್ಕಾರಕ್ಕೆ ರೈತರು, ಜನರ ಹಿತಕ್ಕಿಂತ ತುಷ್ಠೀಕರಣ ರಾಜಕಾರಣ ಮುಖ್ಯವಾಗಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಏನ್ ಡಿ ಎ ಸರ್ಕಾರ ದೇಶದ ಜನರ ಹಿತದೃಷ್ಟಿಯಿಂದ ವಕ್ಫ್‌ ಮಂಡಳಿಯಲ್ಲಿ ಅಕ್ರಮ ತಡೆಗಾಗಿ ವಕ್ಫ್  ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ,  ಸದರಿ ಕಾಯ್ದೆ ಕುರಿತು ಜಂಟಿ ಪಾರ್ಲಿಮೆಂಟರಿ ಬೋರ್ಡ್ ಪರಿಶೀಲನೆ ನಡೆಸುತ್ತಿದೆ, ಕಾಯ್ದೆಗೆ ತಿದ್ದುಪಡಿ ಖಚಿತವಾಗುತ್ತಿದ್ದಂತೆ ರಾಜ್ಯದಲ್ಲಿ  ವಕ್ಫ್ ಬೋರ್ಡ್ ಸಾರ್ವಜನಿಕರ ಆಸ್ತಿ ಕಾಪಾಡಿಸುವ ಹುನ್ನಾರಕ್ಕೆ ಮುಂದಾಗಿದೆ.  ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಹೇಳಿದರು.
ಬೆಳಗಾವಿ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಹುತೇಕ ಜಿಲ್ಲೆ, ತಾಲೂಕುಗಳಲ್ಲಿ ರೈತರು, ಮಠ ಮಾನ್ಯಗಳು, ಬಡವರ ಜಾಗಗಳ ಪಹಣಿಯಲ್ಲಿ ವಕ್ಫ್ ಎಂದು ಉಲ್ಲೇಖಿಸಲಾಗಿದೆ.  ಮಂಡ್ಯ ಜಿಲ್ಲೆಯಲ್ಲಿ ಬೆಳ್ಳೂರು, ಮಹದೇವಪುರ ಗ್ರಾಮದಲ್ಲಿಯು ಆಸ್ತಿ ಕಬಳಿಸಲು ಮುಂದಾಗಿದೆ, ಪೂರ್ವಜರಿಂದ ಬಂದ ಜಮೀನಿನಲ್ಲಿ ಬೇಸಾಯ ಮಾಡಿಕೊಂಡು ಬದುಕುತ್ತಿದ್ದ ರೈತರಿಗೆ ನೋಟಿಸ್ ಜಾರಿ ಮಾಡಲಾಗಿತ್ತು ಇದಕ್ಕೆ ಬಿಜೆಪಿ ಪಕ್ಷ ವ್ಯಾಪಕ ವಿರೋಧ ಮಾಡಿದ್ದರಿಂದ ನೋಟಿಸ್ ವಾಪಸ್ ಪಡೆಯಲಾಗುತ್ತಿದೆ, ರೈತರ ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದು ಮಾಡದಂತೆ ತಾತ್ಕಾಲಿಕವಾಗಿ ಕಾಂಗ್ರೆಸ್ ಸರ್ಕಾರ ತಡೆಹಿಡಿದಿರುವುದು ಚುನಾವಣಾ ತಂತ್ರಗಾರಿಕೆಯಾಗಿದ್ದು, ಇದೇ ತರ ತೆಲುಗು ಮುಂದುವರೆಸಿದರೆ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರ್ಕಾರ ನೇರಹೊಣೆ, ಮತ ಬ್ಯಾಂಕ್ ಗಾಗಿ ಮುಸ್ಲಿಮರ ಓಲೈಕೆಗಾಗಿ ಹಿಂದೂ ವಿರೋಧಿ ನಿರ್ಧಾರ ಕೈಗೊಳ್ಳುವ ಹಳೆ ಚಾಳಿಯನ್ನು ಕೈಬಿಡಬೇಕು,ವಕ್ಫ್‌ ಆಸ್ತಿ ಕುರಿತ ಗೆಜೆಟ್‌ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಸಿದ್ದರಾಮಯ್ಯ, ವಿವೇಕ್, ಸಿ.ಟಿ ಮಂಜುನಾಥ್, ಹಾಡ್ಯ ರಮೇಶ್ ರಾಜು,ಕ್ರಾಂತಿ ಮಂಜು,ಶಿವಕುಮಾರ್ ಆರಾಧ್ಯ,ನಾಗಾನಂದ ಎಂ ಕೆ, ನಿತ್ಯಾನಂದ, ಎಂ ಎಸ್ ನಂದೀಶ್, ಧನಂಜಯ ಎನ್ ಆರ್, ನರಸಿಂಹಾಚಾರ್, ಶಿವಲಿಂಗಯ್ಯ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles