0.6 C
New York
Tuesday, December 3, 2024

Buy now

spot_img

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಗಳ ಸಹಕಾರ ಇರಲಿ

ಮಂಡ್ಯ :- ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಡಿ.20.21.22 ರಂದು ಮೂರು ದಿನಗಳ ಕಾಲ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಎಲ್ಲರ ಸಹಕಾರ, ಬೆಂಬಲ ಅತ್ಯವಶ್ಯಕ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.
ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ  ಮಂಡ್ಯ ಜಿಲ್ಲೆಯ ಸಾಹಿತಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಡ್ಯದ ಆತಿಥ್ಯ, ಸತ್ಕಾರವನ್ನು ಎಲ್ಲರೂ ನೆನೆಯಬೇಕು. ಆ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಮಂಡ್ಯಕ್ಕೆ ತನ್ನದೇ ಆದ ಸೊಗಡಿದೆ. ವೈಶಿಷ್ಟ್ಯ ಇದೆ. ನೂರಕ್ಕೆ ನೂರು ಈ ಸಮ್ಮೇಳನ ಯಶಸ್ವಿಯಾಗಲಿದೆ ಎಲ್ಲರ ಸಲಹೆ, ಮಾರ್ಗದರ್ಶನ, ಅಭಿಪ್ರಾಯ ಪಡೆಯಲಾಗುತ್ತಿದೆ. ಜನಸಾಮಾನ್ಯರಾದಿಯಾಗಿ ಎಲ್ಲರ ಸಲಹೆಗಳನ್ನು ಸ್ವೀಕರಿಸಿ, ಸಮಿತಿಯೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಸಾಹಿತ್ಯ ಸಮ್ಮೇಳನದ ಕುರುಹು ಉಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಕಲಾಮಂದಿರ ದುರಸ್ತಿ ಕಾರ್ಯ ವಾರದಲ್ಲಿ ಪೂರ್ಣಗೊಳ್ಳಲಿದೆ. ಅಂಬೇಡ್ಕರ್ ಭವನ ರೆಡಿಯಾಗಲಿದೆ. ರೈತ ಭವನಕ್ಕೆ ಚಾಲನೆ ನೀಡಲಾಗಿದೆ.ಶಿವಪುರ ಧ್ವಜ ಸತ್ಯಾಗ್ರಹ ಪ್ರತಿಷ್ಠಾನ ರಚನೆ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿ ಇದೆ. ಮೂವತ್ತು ವರ್ಷದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ.ಕೃಷಿ ವಿವಿ, ಸಕ್ಕರೆ ಕಾರ್ಖಾನೆ ಪುನರಾರಂಭಿಸಲಾಗಿದೆ. ನೂತನ ಸಕ್ಕರೆ ಕಾರ್ಖಾನೆ ಬಗ್ಗೆ ಸಂಪುಟದ ಚರ್ಚೆಗೆ ಕಳುಹಿಸಲಾಗಿದೆ. ಅಭಿವೃದ್ಧಿ ನಿರಂತರ, ಸಾಹಿತ್ಯ ಸಮ್ಮೇಳನ ವಿಶೇಷ. ಮೂವತ್ತು ವರ್ಷಗಳ ನಂತರ ನಡೆಯುತ್ತಿರುವ ಈ ಸಮ್ಮೇಳನವನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ನೆರವೇರಿಸಲಾಗುವುದು. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನವಲ್ಲ ಇದು ಎಲ್ಲಾ ಕನ್ನಡಿಗರ ಮನ ಮನೆಯ ಸಮ್ಮೇಳನ,ಎಲ್ಲಾ ಕನ್ನಡಿಗರ ಮನಸ್ಸುಗಳು ಸೇರಿ ನಾವೆಲ್ಲ ಒಂದು ಎಂಬ ಅಭಿಮಾನ ಮೂಡಿಸಲು ಸರ್ವರ ಸಹಕಾರದ ಅವಶ್ಯಕತೆ ಇದ. ಸಮ್ಮೇಳನದಲ್ಲಿ ಸಾಹಿತಿಗಳ ಸಹಕಾರ ಬಹಳ ಮುಖ್ಯ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಸಮ್ಮೇಳನದ ಪ್ರತಿಯೊಂದು ಕೆಲಸದಲ್ಲೂ ಮಾರ್ಗದರ್ಶನ ಸಹಕಾರ ನೀಡುತ್ತಾ ಬಂದಿದ್ದಾರೆ. 28 ಸಮಿತಿಗಳು ಈಗಾಗಲೇ  ರಚನೆ ಮಾಡಿಕೊಂಡಿದ್ದು ಎಲ್ಲಾ ಸಮಿತಿಯವರು ಕೂಡ ಸುಮಾರು 5 ರಿಂದ 6 ಭಾರಿ ಸಭೆ ನಡೆಸಿ ಈಗಾಗಲೇ ಕ್ರಿಯಾಯೋಜನೆ ರೂಪಿಸಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಬಹುಮುಖಿ ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ,ಮಂಡ್ಯ ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆ. ಸಮ್ಮೇಳನದಲ್ಲಿ ಜಿಲ್ಲೆಯ ಸಾಂಸ್ಕೃತಿಕ, ಶ್ರೀಮಂತ ಪರಂಪರೆ ಬಿಂಬಿಸಬೇಕು. ರಾಜ್ಯಮಟ್ಟದಲ್ಲಿ ಮಂಡ್ಯ ಜಿಲ್ಲೆ ಪ್ರತಿನಿಧಿಸಬೇಕು,ಯಕ್ಷಗಾನ ಕಲೆಯ ಮೂಲ ಮಂಡ್ಯ. ಯಕ್ಷಗಾನದ ತವರು ಮಂಡ್ಯ. ಕೆಂಪಣ್ಣಗೌಡ ಮೊದಲ ಕವಿ. ಮೂಡಲಪಾಯ ಕಲೆ ಮತ್ತೆ ಬೆಳಕಿಗೆ ಬರಬೇಕು. ಮಂಡ್ಯ ಜಿಲ್ಲೆಯ ಕೊಡುಗೆಗಳನ್ನು ಕೇಂದ್ರವಾಗಿಟ್ಟುಕೊಂಡು  ಚರ್ಚೆಯಾಗಬೇಕು. ರಾಜ್ಯಮಟ್ಟದ ವಿದ್ವಾಂಸರನ್ನು ಕರೆಸಬೇಕು ಎಂದು ಸಲಹೆ ನೀಡಿದರು.
ಕೃಷಿ ಸಂಸ್ಕೃತಿಗೆ ಮಂಡ್ಯ ಕೊಡುಗೆ ಅಪಾರ.  ನೇಗಿಲಯೋಗಿ ಪರಿಕಲ್ಪನೆ ಚರ್ಚೆಯಾಗಬೇಕು. ಸಮ್ಮೇಳನಕ್ಕೆ ಘನತೆಯೇ ಗೋಷ್ಠಿ. ಗೋಷ್ಠಿ ಬಗ್ಗೆ ಚರ್ಚೆ ಆಗಬೇಕು. ಸಾಹಿತ್ಯ, ಕೃಷಿ, ಸಂಸ್ಕೃತಿ ಮತ್ತು ಜಾನಪದ ಗೋಷ್ಠಿಯಾಗಬೇಕು. ಅನುವಾದ ಗೋಷ್ಠಿ ಆರಂಭಿಸುವ ಮೂಲಕ ಅನುವಾದ ಗೋಷ್ಠಿ  ಮೊದಲು ಮಾಡಿದ ಕೀರ್ತಿ ಮಂಡ್ಯ ಸಮ್ಮೇಳನಕ್ಕೆ ಸಲ್ಲಬೇಕು ಎಂದರು.
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ,ಮಂಡ್ಯ ಮಾದರಿ ಇಟ್ಟುಕೊಂಡು ಸಮ್ಮೇಳನ ಆಯೋಜಿಸಲಿ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕು. ಜಿ.ನಾರಾಯಣ್, ಶಂಕರೇಗೌಡ್ರು,
ಸಾಹುಕಾರ್ ಚೆನ್ನಾಯ್ಯ, ಶೀಂಕಠೇಗೌಡ್ರ ಹೆಸರನ್ನು ಮಹಾದ್ವಾರಗಳಿಗೆ ಇಡಬೇಕು. ಜಿಲ್ಲೆಯ ಮಹನೀಯರನ್ನು ನೆನೆಯಬೇಕು ಎಂದು ಹೇಳಿದರು.
ಸಮ್ಮೇಳನದಲ್ಲಿ ಬಹುಮುಖ್ಯವಾಗಿ ಜನರು ಗ್ರಹಿಸುವುದು ಸಮ್ಮೇಳನದ ಧ್ವನಿ ಏನು? ಎಂಬುದು. ಸಮ್ಮೇಳನದ ಬಗ್ಗೆ ಜನರ ಗ್ರಹಿಕೆ ಏನು ಎಂಬುದು ಮುಖ್ಯ. ಅತಿ ದೊಡ್ಡ ಕಾರ್ಯಕ್ರಮ ಇದಾಗಿದ್ದು,
ಸುಸಂಸ್ಕೃತದ ಸಮ್ಮೇಳನ ಇದಾಗಲಿ.ಫ್ರೊ.ಕೃಷ್ಣೇಗೌಡ ಅಭಿಪ್ರಾಯ ಪಟ್ಟರು.
.ಪ್ರಜಾಪ್ರಭುತ್ವ ಅಡಿಯಲ್ಲಿ ಕೆಲಸ ಮಾಡಬೇಕಿದೆ. ಸರ್ಕಾರದ ಸಹಕಾರ ಸಹಭಾಗಿತ್ವ, ಸಮನ್ವಯತೆ ಸಮಾಲೋಚನೆ ಮುಖ್ಯ. ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಜಿಲ್ಲಾಡಳಿತ ಅತಿ ಉತ್ಸಾಹದಿಂದ ಕೆಲಸ ಮಾಡುತ್ತಿದೆ. ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಬೆಂಬಲ ಮುಖ್ಯ ಎಂದು ಡಾ. ಮಹೇಶ್ ಜೋಷಿ ಮನವಿ ಮಾಡಿದರು.
ಇದೇ ವೇಳೆ ಸಮಾಲೋಚನಾ ಸಭೆಯಲ್ಲಿ ಮಂಡ್ಯ ಜಿಲ್ಲೆಗೆ ಪ್ರತ್ಯೇಕ ಗೋಷ್ಠಿ ಮೀಸಲಿರಿಸಬೇಕು. ನಾಡು, ನುಡಿ, ನೀರಿಗಾಗಿ ಹೋರಾಟ ಮಾಡಿದವರ ನೆನೆಯುವ ಗೋಷ್ಠಿ ಇರಬೇಕುಯುವ ಸಾಹಿತ್ಯ, ಮಕ್ಕಳ ಸಾಹಿತ್ಯದ ಬಗ್ಗೆ ಚರ್ಚೆಯಾಗಬೇಕು. ಮಹಿಳೆಯರಿಗೆ ಆದ್ಯತೆ ನೀಡಬೇಕು. ಮಹಾಕಾವ್ಯಗಳ ಬಗ್ಗೆ ಗೋಷ್ಠಿಯಾಗಬೇಕು.ಉಪವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮುದ್ರಣಕಾರರಿಗೆ ಸಹಾಯಹಸ್ತ ನೀಡಬೇಕು
ನಶಿಸುತ್ತಿರುವ ತೊಗಲುಬೆಂಬೆ ಕಲೆ ಪ್ರದರ್ಶನಕ್ಕೆ ಒತ್ತು ಕೊಡಬೇಕು. ತೊಗಲುಬೊಂಬೆ ಶ್ರೀಮಂತಿಕೆ ಪರಿಚಯಿಸಬೇಕು.ಜಿಲ್ಲೆಯ ಎಲ್ಲಾ ಲೇಖಕರ ಪುಸ್ತಕ ಪ್ರದರ್ಶನ ಏರ್ಪಾಡು ಮಾಡಿ ಮಂಡ್ಯ ಜಿಲ್ಲಾ ಸಾಹಿತ್ಯ ಪುಸ್ತಕ ಪ್ರದರ್ಶನ ಮಾಡಬೇಕು.ಮುದ್ರಣಗೊಳ್ಳುವ ಪುಸ್ತಕಗಳಲ್ಲಿ ಸಾಹಿತಿಗಳ ಫೋಟೋ ಮಾತ್ರ ಇರಬೇಕು.ಕಾಲೇಜು, ಹೈಸ್ಕೂಲ್ ಗಳಿಗೆ ಸಂಚಾಲಕರನ್ನು ನೇಮಿಸಿ ಕನ್ನಡ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಬೇಕುಎಲ್ಲಾ ವರ್ಗದ ವಚನಕಾರರ ವಚನಗೋಷ್ಠಿ ಇರಬೇಕು. ಸಮ್ಮೇಳನ ನೆನಪಿಗೆ 87 ಪುಸ್ತಕಗಳನ್ನು ಬಿಡುಗಡೆ ಮಾಡಬೇಕು ಎಂದು ಸಾಹಿತಿಗಳು ಸಲಹೆ ನೀಡಿದರು.
ಸಭೆಯಲ್ಲಿ  ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕರಾದ ಮೀರಾ ಶಿವಲಿಂಗಯ್ಯ,  ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಕೃಷ್ಣೇಗೌಡ ಹುಸ್ಕೂರು, ವಿ ಹರ್ಷ ಸೇರಿದಂತೆ ಹಿರಿಯ ಸಾಹಿತಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles