ಮಂಡ್ಯ :- ಬಾರ್ ಅಂಡ್ ರೆಸ್ಟೋರೆಂಟ್ ಪರವಾನಗಿ ನೀಡಲು ಅಬಕಾರಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ..
ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ರವಿಶಂಕರ್ ಹಾಗೂ ಇನ್ ಸ್ಪೆಕ್ಟರ್ ಶಿವಶಂಕರ್ ವಿರುದ್ಧ ಬಾರ್ ಪರವಾನಿಗಾಗಿ ಅರ್ಜಿ ಸಲ್ಲಿಸಿದ್ದ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ದೂರು ಸಲ್ಲಿಕೆ ವೇಳೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯವನ್ನು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ರಾಜ್ಯಮಟ್ಟದಲ್ಲಿ ಸದ್ದು ಮಾಡಿದ್ದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಕರ್ಮಕಾಂಡ ಬಯಲಾಗಿರುವುದು ಇಲಾಖೆಯಲ್ಲಿನ ಭ್ರಷ್ಟತೆಯನ್ನು ಬಟಾಬಯಲು ಮಾಡಿದೆ.
ಮದ್ದೂರು ತಾಲೂಕು ಚಂದೂ ಪುರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪುನೀತ್ ಸಿ ಎಲ್ 7 ಪರವಾನಗಿ ಪಡೆದು ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ತಮ್ಮ ತಾಯಿ ಲಕ್ಷ್ಮಮ್ಮರ ಹೆಸರಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಆದರೆ ಅಬಕಾರಿ ಇಲಾಖೆ ಅಧಿಕಾರಿಗಳು ಅರ್ಜಿಯನ್ನು ತಿರಸ್ಕರಿಸಿದ್ದರು. ಅನಂತರ ಖುದ್ದಾಗಿ ಇಲಾಖೆಗೆ ತೆರಳಿ ಅರ್ಜಿ ಸಲ್ಲಿಕೆ ಮಾಡಿದ್ದು ಈ ವೇಳೆ ನಲವತ್ತು ಲಕ್ಷ ಲಂಚ ನೀಡಲು ಅಧಿಕಾರಿಗಳು ಬೇಡಿಕೆ ಇಟ್ಟಿದ್ದು ಕೊನೆಯಲ್ಲಿ 20 ಲಕ್ಷವನ್ನಾದರೂ ನೀಡಬೇಕು ಎಂದು ಒತ್ತಡ ಹಾಕಿದ್ದಾರೆ. ಇದರಿಂದ ಬೇಸತ್ತ ಪುನೀತ್ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ರವಿಶಂಕರ್ ಹಾಗೂ ಇನ್ ಸ್ಪೆಕ್ಟರ್ ಶಿವಶಂಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ದೂರುದಾರ ಪುನೀತ್ ಮಾತನಾಡಿ ಮದ್ದೂರು ತಾಲೂಕು ಚಂದೂಪುರ ಗ್ರಾಮದ ಬಳಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ತಾಯಿ ಲಕ್ಷ್ಮಮ್ಮರ ಹೆಸರಿನಲ್ಲಿ ಪರವಾನಿಗೆಗಾಗಿ ಅಬಕಾರಿ ಇಲಾಖೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದೇ ಆದರೆ ಇಲಾಖೆಯ ಅಧಿಕಾರಿಗಳ ಅನುಮತಿ ಪಡೆದು ಅರ್ಜಿ ಸಲ್ಲಿಸಿಲ್ಲ ಎಂದು ತಿರಸ್ಕೃತ ಮಾಡಿದ್ದರು, ಅನಂತರ ಖುದ್ದಾಗಿ ಅರ್ಜಿ ಸಲ್ಲಿಕೆ ಮಾಡಿದ್ದೆ ಇನ್ ಸ್ಪೆಕ್ಟರ್ ಶಿವಶಂಕರ್ ಅಧಿಕಾರಿಗಳು ಮಾಮೂಲು ನೀಡಬೇಕಾಗುತ್ತದೆ ಎಂದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು, ಅಬಕಾರಿ ಜಿಲ್ಲಾ ಅಧಿಕಾರಿ ರವಿಶಂಕರ್ ಸಿಬ್ಬಂದಿಗಳಿಗೆ ಏನು ನೀಡಬೇಕು ಅದನ್ನು ನೀಡಿ ಅನಂತರ 40 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟರು, ಅದಕ್ಕೆ ಒಪ್ಪದಿದ್ದಾಗ 30 ಲಕ್ಷ ಆನಂತರ 20 ಲಕ್ಷ ನೀಡು ಎಂದು ಹೇಳಿದ್ದರು ಇದಕ್ಕೆ ಒಪ್ಪದಿದ್ದಾಗ ನನ್ನ ಅರ್ಜಿಯನ್ನು ತಿರಸ್ಕಾರ ಮಾಡಿದ್ದಾರೆ, ಇದೀಗ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದು ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.