-10 C
New York
Tuesday, January 21, 2025

Buy now

spot_img

ಜ.10 ರಿಂದ ಕೆ ಆರ್ ಎಸ್ ನಿಂದ ನಾಲೆಗೆ ನೀರು

ಮಂಡ್ಯ:- ಕೃಷ್ಣರಾಜಸಾಗರದಿಂದ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು.
ಕೆ ಆರ್ ಎಸ್ ನಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕೃಷ್ಣರಾಜಸಾಗರ ವ್ಯಾಪ್ತಿಯ ನಾಲೆಗಳಿಗೆ ಜ10 ರಿಂದ 18 ದಿನ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗವುದು ಎಂದು ಮಾಹಿತಿ ನೀಡಿದರು.
ಜ10 ರಿಂದ 18 ದಿನಗಳ ಕಾಲ ನೀರು ಹರಿಸಲಾಗುವುದು ಅನಂತರದ 12 ದಿನಗಳ ಕಾಲ ನೀರು ನಿಲುಗಡೆ ಮಾಡಲಾಗುವುದು ಇದೇ ಮಾದರಿಯಲ್ಲೆ ನಾಲ್ಕು ಬಾರಿ ನೀರು ಬೆಳೆಗಳಿಗೆ ನೀಡಲಾಗುವುದು ಎಂದರು.
ಜಿಲ್ಲೆಯ ಮಳವಳ್ಳಿ ಹಾಗೂ ಮದ್ದೂರು ತಾಲ್ಕೂಕಿನ ಕೊನೆಯ ಭಾಗಕ್ಕೂ ನೀರು ಹರಿಸಲಾಗುವುದು. ರೈತರು ಅಲ್ಪವಧಿ ಬೆಳೆಗಳ ನಾಟಿ ಕೆಲಸವನ್ನು ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು .
ಕೃಷಿ ಹಾಗೂ ನೀರಾವರಿ ಇಲಾಖೆ ಸಹಕಾರದೊಂದಿಗೆ ರೈತರು ಎರಡು ಬೆಳೆಗಳನ್ನು ಬೆಳೆಯಬೇಕು. ಇಲಾಖೆಗಳು ನೀಡುವ ಸಲಹೆ ಹಾಗೂ ಸೂಚನೆಗಳನ್ನು ಪಾಲಿಸಿ ಎಂದರು.
ಇತಿಹಾಸದಲ್ಲಿ ಇದೇ ಮೊದಲು 92 ವರ್ಷಗಳ ನಂತರ 156 ದಿನಗಳ ಕಾಲ ಕೆ.ಆರ್.ಎಸ್. ಅಣೆಕಟ್ಟು 124.48 ಅಡಿ ತುಂಬಿದೆ. ಇದು ಟೀಕೆ ಟಿಪ್ಪಣಿ ಮಾಡುವವರಿಗೆ ಉತ್ತರ ನೀಡಿದೆ. ಜುಲೈ ನಿಂದ ಡಿಸೆಂಬರ್ ಯವರೆಗೂ ಬೆಳೆಗಳಿಗೆ ನಿರಂತರವಾಗಿ ನೀರು ನೀಡಲಾಗಿದೆ ಎಂದರು.
ಸಭೆಯಲ್ಲಿ ವಿಧಾನಸಭಾ ಶಾಸಕರಾದ ಎ.ಬಿ ರಾಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿಕುಮಾರ್, ಉದಯ್ , ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ‌ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles