ಮಂಡ್ಯ :- ಮಳವಳ್ಳಿ ಪಟ್ಟಣದಲ್ಲಿ ನಡೆಯುವ ಪಟ್ಟಿದಲಮ್ಮ ಸಿಡಿ ಹಬ್ಬದ ಪ್ರಯುಕ್ತ ಮಳವಳ್ಳಿ ಟೌನ್ ಮತ್ತು ಸುತ್ತಮುತ್ತಲಿನ ಐದು ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಫೆ.7 ನೇ ಗುರುವಾರ ಬೆಳಗ್ಗೆ 6 ರಿಂದ 9ನೇ ಭಾನುವಾರ ಬೆಳಗ್ಗೆ 10 ರವರೆಗೆ ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶಿಸಿದ್ದಾರೆ.
ಮಳವಳ್ಳಿ ಪಟ್ಟಣದಲ್ಲಿ ಪಟ್ಟಲದಮ್ಮ ಸಿಡಿ ಹಬ್ಬವನ್ನು ಆಚರಿಸಲಿರುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರಲಿದ್ದು ಪಟ್ಟಣವು ಕೋಮು ಅತೀ ಸೂಕ್ಷ್ಮ ಪ್ರದೇಶವಾಗಿರುವುದರಿಂದ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ತರಹದ ಮದ್ಯದ ಅಂಗಡಿಗಳು, ಬಾರ್ ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಾಣಿಕೆಯನ್ನು ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸುವಂತೆ ಪೊಲೀಸ್ ಅಧೀಕ್ಷಕರು ಕೋರಿದ್ದರು,
ಆಮೇರೆಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರನ್ವಯ ಮಳವಳ್ಳಿ ಟೌನ್ ಹಾಗೂ ಸುತ್ತಮುತ್ತಲ ಐದು ಕಿ.ಮೀ ವ್ಯಾಪ್ತಿಯಲ್ಲಿ ಮಧ್ಯ ಮಾರಾಟ, ಸಾಗಾಣಿಕೆ ಹಾಗೂ ಶೇಖರಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.