ಮಂಡ್ಯ :- ಮಂಡ್ಯ ವಿಶ್ವವಿದ್ಯಾನಿಲಯ ಸೇರಿದಂತೆ ರಾಜ್ಯದ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತು
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಗಳಿಗೆ ಪ್ರತಿ ವರ್ಷ 50,000 ಕೋಟಿ ನೀಡುತ್ತಿದೆ. ಅದರಲ್ಲಿ ಶೇ 15 ರಷ್ಟಾದ 500 ಕೋಟಿಯನ್ನು ವಿಶ್ವವಿದ್ಯಾಲಯಗಳಿಗೆ ನೀಡಿದರೆ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಸ್ಥಿತಿ ಸುಧಾರಣೆಯಾಗಲಿದೆ ಆದರೆ ಕಳೆದ ಹತ್ತು- ಹದಿನೈದು ವರ್ಷಗಳಿಂದ ವಿಶ್ವವಿದ್ಯಾಲಯಗಳಿಗೆ ಅನುದಾನಗಳನ್ನು ನೀಡಿರುವುದಿಲ್ಲ,ಎಲ್ಲಾ ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ,ಮರು ಎಣಿಕೆ, ಮರು ಮೌಲ್ಯಮಾಪನ ಶುಲ್ಕ ಹಾಗೂ ಆಂತರಿಕ ಹಣಕಾಸು ಉತ್ಪಾದನೆಯ ಮೂಲಕ ಮುನ್ನಡೆಯುತ್ತಿರುವುದು ಅವಮಾನಕರ ಸಂಗತಿಯಾಗಿದೆ ಎಂದು ಕಿಡಿಕಾರಿದರು.
ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಗೌರವ,ಹೆಗ್ಗಳಿಕೆ ಇದೆ, ಆದರೆ ಕೇವಲ ಹಣಕಾಸಿನ ದೃಷ್ಟಿಯಿಂದ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೋರಟಿರುವುದುಸರ್ಕಾರಕ್ಕೆ ಶೋಭೆ ತರುವಂತಹ ಕಾರ್ಯವಲ್ಲ,ಹಿಂದಿನ ರಾಜ್ಯ ಸರಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಪ್ರಾರಂಭಿಸಿದರೆ ಗ್ರಾಮೀಣ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹೊಸದಾಗಿ ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ, ನೃಪತುಂಗ ವಿಶ್ವವಿದ್ಯಾಲಯ ಹಾಗೂ ಬೀದರ್‌ನಲ್ಲಿ ವಿಶ್ವವಿದ್ಯಾನಿಲಯ ಪ್ರಾರಂಭಿಸುವುದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಆದರೆ ಪ್ರಸ್ತುತ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯಗಳಿಗೆ ಅನುದಾನ ನೀಡಿ, ಅಭಿವೃದಿಪಡಿಸದೆ ಅವುಗಳನ್ನು ಮುಚ್ಚುವುದಕ್ಕೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ನಿರ್ಧರಿಸಿ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿರುವುದನ್ನು ಪ್ರತಿಭಟನಾ ನಿರತರು ಖಂಡಿಸಿದರು.
ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಿಷ್ಟಗೊಳಿಸುವ ಕಾಳಜಿ ಮತ್ತು ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇತ್ತೀಚಿಗೆ ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವುದರಿಂದ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ.ಉಚಿತ ಗ್ಯಾರಂಟಿ ಯೋಜನೆಗೆ ಸಾವಿರಾರು ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ನೀಡಲಾಗಿದ್ದು ಆದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಲು ಮುಂಭಾಗದ ವಿಶ್ವವಿದ್ಯಾನಿಯಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ ಎಂದರು.
ಯಾವ ಶಿಕ್ಷಣ ತಜ್ಞರ ಶಿಫಾರಸ್ಸಿನ ಮೇಲೆ ವಿಶ್ವವಿದ್ಯಾನಿಲಯಗಳನ್ನು ಮುಚ್ಚುತ್ತಿದ್ದೀರಾ ಎಂಬುದನ್ನು ತಿಳಿಸಬೇಕು,ರಾಜ್ಯದ ಉನ್ನತ ಶಿಕ್ಷಣ ಪರಿಷತ್ ಶಿಫಾರಸ್ಸು ಮಾಡಿರುವ ಹಣವನ್ನು ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾನಿಲಯಗಳಿಗೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಪ್ರಜ್ವಲ್ ಹೆಚ್.ಬಿ,ಮೈಸೂರು ಮಹಾನಗರ ಸಹ ಕಾರ್ಯದರ್ಶಿ ಚಂದನ್. ವಿದ್ಯಾರ್ಥಿ ಮುಖಂಡರಾದ ದರ್ಶನ್.ರೋಹಿತ್.ಪ್ರಶಾಂತ್.ಹರ್ಷ.ಬಿ.ಎಂ ನೇತೃತ್ವ ವಹಿಸಿದ್ದರು