9.1 C
New York
Wednesday, March 19, 2025

Buy now

spot_img

ಅಮೇರಿಕಾದಲ್ಲಿ ಭಾರತೀಯರ ಮೇಲಿನ ದೌರ್ಜನ್ಯ ತಡೆಯದ ಕೇಂದ್ರದ ವಿರುದ್ಧ ಪ್ರತಿಭಟನೆ

ಮಂಡ್ಯ :- ಅಮೆರಿಕಾದಲ್ಲಿ ಟ್ರಂಪ್ ನೇತೃತ್ವದ ಸರ್ಕಾರ ಭಾರತೀಯ ವಲಸಿಗರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯ, ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಅಮೇರಿಕಾದಲ್ಲಿ ಭಾರತೀಯರನ್ನು ಅಕ್ರಮ ನಿರಾತ್ರಿಶರ ಹೆಸರಿನಲ್ಲಿ ಕೈ ಕೋಳ ಹಾಕಿ ಕರೆ ತರುವುದನ್ನು ಖಂಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಮಾತನಾಡಿ ಅಮೇರಿಕಾದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದಡಿ ಅಮೆರಿಕದಿಂದ ಗಡೀಪಾರಾಗಿರುವ ಭಾರತೀಯರ ಕೈಗೆ ಕೋಳ ತೊಡಿಸಿ ಕಳಹಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದರೂ ಸಹ ಕೇಂದ್ರದ ಮೋದಿ ಸರ್ಕಾರ ಕೈ ಕಟ್ಟಿ ಕುಳಿತಿದೆ ಎಂದರು.
ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಗಡೆ ಅವರನ್ನು ನಡೆಸಿಕೊಂಡ ರೀತಿಗೆ ಅಂದಿನ ಯುಪಿಎ ಸರ್ಕಾರ ಖಡಕ್ ಸಂದೇಶವನ್ನು ಅಮೆರಿಕಕ್ಕೆ ರವಾನಿಸಿತ್ತು,ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಸ್ಥಾನಮಾನಕ್ಕಿಂತ ತನ್ನ ವೈಯಕ್ತಿಕ ಪ್ರತಿಷ್ಠೆ ಹೆಚ್ಚು ಮುಖ್ಯವಾಗಿದೆ.ರಾಷ್ಟೀಯತೆ ಹೆಸರಿನಲ್ಲಿ ಜನರ ಸೇವೆ ಮಾಡುವಲ್ಲಿ ವಿಫಲವಾಗಿರುವ ಮೋದಿಯವರು ಈಗಲಾದರೂ ಅನಾಗರಿಕ ನಡವಳಿಕೆ ನಿಲ್ಲಿಸಲು ಟ್ರಂಪ್ ಜೊತೆ ಮಾತನಾಡಿ ಭಾರತ ದೇಶದ ವಿಮಾನ ಕಳುಹಿಸಿ ನಾಗರಿಕರನ್ನು ಗೌರವಯುತವಾಗಿ ಕರೆತರಲಿ ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶೈಲೇಂದ್ರ, ಸಿಎಂ ದ್ಯಾವಪ್ಪ, ಸಾತನೂರು ಕೃಷ್ಣ, ಚಂದಗಾಲು ವಿಜಯಕುಮಾರ್, ಅಜ್ಜಹಳ್ಳಿ ರಾಮಕೃಷ್ಣ, ಜಯರಾಮ್, ಚಿನಕುರಳಿ ರಮೇಶ್, ಅಂಜನಾಶ್ರೀಕಾಂತ್ ,ದ್ಯಾವಣ್ಣ, ಉದಯ್ ಕುಮಾರ್, ಕೆಎಂ ರಾಮಕೃಷ್ಣ,ನಾಗರಾಜು, ನವೀನ್, ಶಕುಂತಲಾ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles