12.1 C
New York
Tuesday, April 22, 2025

Buy now

spot_img

ರಿಕ್ಕಿ ರೈ ಮೇಲೆ ಗುಂಡಿನ ದಾಳಿ :ಆರೋಪಿಗಳ ಬಂಧನಕ್ಕೆ ಆಗ್ರಹ

ಮಂಡ್ಯ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು.
ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಪತ್ರ ರವಾನಿಸಿ ಕೃತ್ಯ ಎಸಗಿದವರ ವಿರುದ್ದ ಕಾನೂನು ಕ್ರಮ ಜರುಗಿಸಿ  ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ರಿಕ್ಕಿ ರೈ ಗೆ ಸರ್ಕಾರದಿಂದ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ಭಯಬೀತಿಯಿಂದ ಬದುಕುವ ಪರಿಸ್ಥಿತಿ ರಾಜ್ಯದ ಜನರಿಗೆ ಎದುರಾಗಿದೆ. ತಕ್ಷಣವೇ ಕಾನೂನು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವರು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ, ರವೀಂದ್ರ, ಬಸವರಾಜ, ಅಭಿ, ಪುಟ್ಟಸ್ವಾಮಿ, ಅಕ್ಷಯ್ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles