2.5 C
New York
Friday, December 20, 2024

Buy now

spot_img

ಮಾಜಿ ಮುಖ್ಯಮಂತ್ರಿ, ಮಂಡ್ಯ ಜಿಲ್ಲೆಯ ಸುಪುತ್ರ ಎಸ್.ಎಂ. ಕೃಷ್ಣ ನಿಧನ

ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಮಂಡ್ಯ ಜಿಲ್ಲೆಯ ಸುಪುತ್ರ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ಮುಂಜಾನೆ ನಿಧನರಾಗಿದ್ದಾರೆ.
ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು.ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.
ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles