ಮಂಡ್ಯ:- ಮಂಡ್ಯದಲ್ಲಿ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಡಿ. 20 ರಿಂದ 22 ರ ವರೆಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಗರದ ಹೊರವಲಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು ಶಾಲಾ -ಕಾಲೇಜು ಮಕ್ಕಳು ಮತ್ತು ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲ ವಾಗುವಂತಹ ಶುಕ್ರವಾರ ಮತ್ತು ಶನಿವಾರ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕುಮಾರ ಆದೇಶ ಹೊರಡಿಸಿದ್ದಾರೆ ಮಂಡ್ಯ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ ಮತ್ತು ಅನುದಾನ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ (22/12/2024 ರಂದು ಭಾನುವಾರ ರಜೆ ಇರುತ್ತದೆ)
|