ಮಂಡ್ಯ :- ಮಾಜಿ ಪ್ರಧಾನ ಮಂತ್ರಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ನಿಧರರಾಗಿರುವ ಹಿನ್ನೆಲೆಯಲ್ಲಿ ಮೃತರ ಗೌರವಾರ್ಥ ರಾಜ್ಯಾದ್ಯಂತ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಸರ್ಕಾರಿ ಕಚೇರಿಗಳು ಮತ್ತು ಶಾಲಾ -ಕಾಲೇಜು ಹಾಗೂ ಸರ್ಕಾರದ ಅಂಗ ಸಂಸ್ಥೆ ಒಳಗೊಂಡಂತೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.
ಭಾರತದ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ರವರ ನಿಧನಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದ್ದು,.ದಿವಂಗತರ ಗೌರವಾರ್ಥವಾಗಿ :27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ.
ಅದೇ ರೀತಿ ಡಿ.26.ರಿಂದ ಜ.:01. ರವರೆಗೆ ಒಟ್ಟುಎಳು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ.