ಮಂಡ್ಯ :- ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ಮತ್ತು ಗೋವು ವಿರೋಧಿ ನೀತಿ ಖಂಡಿಸಿ ಬಿಜೆಪಿ ಪಕ್ಷದ ರೈತ ಮೋರ್ಚಾ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪ್ರತಿಭಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಮುಖವಾಡಕ್ಕೆ ಸಗಣಿ ಬಳಿಯುವಾಗ ಪೋಲಿಸರು ತಡೆಯಲು ಮುಂದಾದರು ಈ ವೇಳೆ ಪ್ರತಿಭಟನಾಕಾರರು ಮತ್ತು ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು
ಭಾರತೀಯ ಸಂಸ್ಕೃತಿಯಲ್ಲಿ ಗೋವು ಆಧಾರಿತ ಕೃಷಿ ಬಹು ಮುಖ್ಯವಾದ ವಿಚಾರ ವಾಗಿದೆ,ಗೋವು, ಮುನುಷ್ಯ ಹಾಗೂ ಪ್ರಕೃತಿಗೆ ಅವಿನಾಭಾವ ಸಂಬಂಧ ಇದ್ದು ಭಾರತೀಯ ಪರಂಪರೆಯಲ್ಲಿ ಗೋ ಮಾತೆಗೆ ತನ್ನದೆ ಆದ ವಿಶಿಷ್ಟ ಸ್ಥಾನವಿದೆ. ದೇಶದಲ್ಲಿ ಕೃಷಿ ಉಳಿದಿದ್ದರೆ,ಅದು ಗೋ ಮಾತೆಯ ಕಾಣಿಕೆ ಯಾಗಿದೆ ಆದರೆ ರಾಜ್ಯದ ಕೋಟ್ಯಾಂತರ ಜನರ ಭಾವನೆಗಳೊಂದಿಗೆ ಬೆರೆತಿರುವ ಗೋ ಮಾತೆಯನ್ನು ಸಂರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಸಡ್ಡೆ ತೋರ್ಪಡಿಸುತ್ತಿದೆ,ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಹಸುವಿನ ಕೆಚ್ಚಲು ಕತ್ತರಿಸಿರುವ ಪ್ರಕರಣದಲ್ಲಿ ದೊಡ್ಡ ಗ್ಯಾಂಗ್ ಕೈವಾಡವಿದೆ ಆದರೆ ಪೊಲೀಸ್ ಇಲಾಖೆ ಒಬ್ಬ ವ್ಯಕ್ತಿಯನ್ನು ಬಂಧಿಸಿ ಕಸ್ಟಡಿಗೂ ಪಡೆಯದೆ ಏಕಾಏಕಿ ಜೈಲಿಗಟ್ಟಿರುವುದು ಹಲವು ಅನುಮಾನ ಮೂಡಿಸುತ್ತಿದೆ,ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲಾ ದುರುಳರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಡಳಿತ ದಲ್ಲಿದ್ದಾಗ 15 ಜಿಲ್ಲೆಗಳಲ್ಲಿ ಗೋ ಶಾಲೆ ಪ್ರಾರಂಭಿಸಿತ್ತು ಆದರೆ ಕಾಂಗ್ರೆಸ್ ಸರ್ಕಾರಬಹು ಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುವ ಉದ್ದೇಶದಿಂದ ಗೋ ಶಾಲೆಗಳಿಗೆ ಅನುದಾನ ಕಡಿತಗೊಳಿಸಿ ಅದರ ಮೂಲ ಉದ್ದೇಶಗಳಿಗೆ ತೊಂದರೆಕೊಡುವ ಮೂಲಕ ಗೋ ಶಾಲೆಗಳನ್ನು ಮುಚ್ಚಲು ಹೊರಟಿರುವುದು ರಾಜ್ಯದ ಮತದಾರರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ 1.19 ಕೋಟಿ ಜಾನುವಾರುಗಳಿದ್ದು, ಇವುಗಳ ಸಂರಕ್ಷಣೆ ಮಾಡಲು ಮತ್ತು ಹಾಲು ಉತ್ಪಾದಕರಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರವು ಸಾಕಷ್ಟು ಪುರಸ್ಕೃತ ಯೋಜನೆಗಳನ್ನು ರೂಪಿಸಿದೆ. ಇಂತಹ ಯೋಜನೆಗಳನ್ನು ಅನುಷ್ಠಾನ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ, ಆದರೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲ ವಾಗಿದೆ ಇದು ರಾಜ್ಯ ಸರ್ಕಾರದ ನಿಷ್ಕ್ರಿಯತೆಯನ್ನು ಎತ್ತಿ ತೋರಿಸುತ್ತದೆ,ಗೋ ಶಾಲೆಗಳನ್ನು ಮುಚ್ಚುವ ಮೂಲಕ ಗೋ ಕಳ್ಳ ನಾಗಣೆಯನ್ನು ಉತ್ತೇಜನ ನೀಡುತ್ತಿದೆ ಎಂದು ದೂರಿದರು.
ರಾಜ್ಯದ ಎಲ್ಲೆಡೆ ಗೋ ಶಾಲೆಗಳನ್ನು ಪುನರಾರಂಭಿಸಬೇಕು,ಗೋ ಶಾಲೆಗಳಿಗೆ ವಿಶೇಷ ಅನುದಾನವನ್ನು ನೀಡಬೇಕು,ಕೇಂದ್ರ ಪುರಸ್ಕೃತ ಗೋ ಆಧಾರಿತ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು, ಬಹು ಸಂಖ್ಯಾತರಭಾವನೆಗಳಿಗೆ ಧಕ್ಕೆಯಾಗದ ರೀತಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಜಯರಾಮ್, ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಕಾರ್ಯದರ್ಶಿ ಆನಂದ್, ನಾಗಮಂಗಲ ನರಸಿಂಹಮೂರ್ತಿಗೌಡ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್ ಆರ್. ಅಶೋಕ್ ಮಳವಳ್ಳಿ, ಡಾ.ಸಿದ್ದರಾಮಯ್ಯ,ರಮೇಶ್ ವಿಶ್ವಕರ್ಮ, ನಿಂಗರಾಜು,ಶಿವಕುಮಾರ್ ಆರಾಧ್ಯ ಸಿ.ಟಿ ಮಂಜುನಾಥ್, ಗ್ರಾಮಾಂತರ ಅಧ್ಯಕ್ಷ ಭೀಮೇಶ್, ಜವರೇಗೌಡ , ಮದ್ದೂರ್ ಸತೀಶ್, ಜೋಗಿಗೌಡ, ಎಚ್ ಆರ್ ಅರವಿಂದ್, ಪಿ.ಹಳ್ಳಿ ರಮೇಶ್ ನೇತೃತ್ವ ವಹಿಸಿದ್ದರು.