-0.7 C
New York
Saturday, February 1, 2025

Buy now

spot_img

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದರೆ ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಿ

ಮಂಡ್ಯ :- ಮೈಕ್ರೋ ಫೈನಾನ್ಸ್ ಗಳು ಸಾಲ ವಸೂಲಾತಿ ಸಂದರ್ಭದಲ್ಲಿ ಕಿರುಕುಳ ನೀಡಿದರೆ 08232- 224655 ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಜಿಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಕಂಪನಿಗಳ ಸಭೆ ನಡೆಸಿ ಮಾತನಾಡಿದರು. ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಸಮಾಜದಲ್ಲಿ ಅವಕಾಶವಿಲ್ಲ. ಸಾಲ ಮರುಪಾವತಿ ಮಾಡದೆ ಇರುವವರನ್ನು ಅವಾಚ್ಯ ಪದಗಳಿಂದ ನಿಂದಿಸುವುದು, ಮನೆಯ ಮೇಲೆ ಅವಮಾನವಾಗುವ ರೀತಿ ಮನೆ ಅಡಮಾನ ಮಾಡಿಕೊಳ್ಳಲಾಗಿದೆ ಎಂದು ಬರೆಯುವ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಅವರು ನೇರವಾಗಿ ಸ್ವಯಂ ಹಿತಶಕ್ತಿಯಿಂದ ಎಫ್‌.ಐ.ಆರ್ ದಾಖಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಮೈಕ್ರೋ ಫೈನಾನ್ಸ್ ಬಗ್ಗೆ ಬರುವ ದೂರುಗಳನ್ನು ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ತಾಲ್ಲೂಕು‌ ಮಟ್ಟದಲ್ಲಿ ಸಹ ತಾಲ್ಲೂಕು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು.
ಸಾಲ ವಸೂಲಾತಿ ಮಾಡಲು ಆರ್.ಬಿ.ಐ ನಿಯಮಗಳಿವೆ. ನಿಯಮ ಉಲ್ಲಂಘಿಸಿದರೆ ಮೈಕ್ರೋ ಫೈನಾನ್ಸ್ ವಿರುದ್ಧ ಸ್ಥಳೀಯವಾಗಿ ದೂರು ದಾಖಲಿಸುವುದರ ಜೊತೆಗೆ ಕ್ರಮ ಕೈಗೊಳ್ಳುವಂತೆ ಆರ್.ಬಿ.ಐ ಗೆ ಪತ್ರ ಬರೆಯಲಾಗುವುದು ಎಂದರು
ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಅವರು ಸಭೆ ನಡೆಸಿ ಸ್ಥಳೀಯವಾಗಿ ಮೈಕ್ರೋ ಫೈನಾನ್ಸ್ ಹಾಗೂ ಸಾಲ ಪಡೆದವರ ನಡುವೆ ಯಾವುದಾದರೂ ದೂರು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಾಲ ನೀಡುವಾಗ ಸಾಲ ಮರುಪಾವತಿ ಸಾಮಥ್ಯ ದ ಬಗ್ಗೆ ತಿಳಿದುಕೊಳ್ಳದೇ ಸಾಲ ನೀಡುವುದು, ಮೂರು ಅಥವಾ ನಾಲ್ಕು ಮೈಕ್ರೋ ಫೈನಾನ್ಸ್ ಗಳು ಒಬ್ಬರಿಗೇ ಸಾಲ ನೀಡುವುದು ತಪ್ಪು‌. ಮೈಕ್ರೋ ಫೈನಾನ್ಸ್ ಗಳಿಗೆ 2 ಲಕ್ಷ ರೂ ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ನೀಡುವ ಸಂದರ್ಭದಲ್ಲಿ ಅರ್ಜಿ ಹಾಗೂ ಷರತ್ತುಗಳು ಕನ್ನಡ ಭಾಷೆಯಲ್ಲಿರಬೇಕು ಸಾಲ ನೀಡುವ ಸಂದರ್ಭದಲ್ಲಿ ಸಾಲ ಪಡೆಯುವವರಿಗೆ ಸಾಲ ಮರುಪವಾತಿಯ ಷರತ್ತುಗಳನ್ನು ವಿವರಿಸಿ, ಅದರ ವಿಡಿಯೋ ಮಾಡಿಕೊಳ್ಳಬೇಕು ಎಂದರು.
ಸಾಲ ವಸೂಲಾತಿಗೆ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅವಕಾಶವಿದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿ ಸಾಲ ವಸೂಲಾತಿಗೆ ತೆರಳಬೇಕು, ಸೌಜನ್ಯದಿಂದ ವರ್ತಿಸಬೇಕು ಈ ಬಗ್ಗೆ ಮೈಕ್ರೋ ಫೈನಾನ್ಸ್ ಮುಖ್ಯಸ್ಥರು ಸಿಬ್ಬಂದಿಗಳಿಗೆ
ತರಬೇತಿ ನೀಡುವಂತೆ ತಿಳಿಸಿದರು.
ಜಿಲ್ಲಾಡಳಿತ ಈ ಹಿಂದೆ ಎರಡು ಬಾರಿ ಮೈಕ್ರೋ ಫೈನಾನ್ಸ್ ಗಳ ಮುಖ್ಯಸ್ಥರ ಸಭೆ ಕರೆದು ಸಲಹೆ ಗಳನ್ನು ನೀಡಿತ್ತು. ಅದರೂ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಲವಾರು ದೂರುಗಳು ಬರುತ್ತಿದ್ದು, ಮೈಕ್ರೋ ಫೈನಾನ್ಸ್ ಗಳು ತಮ್ಮ ಕಾರ್ಯವೈಖರಿಯನ್ನು ‌ಬದಲಾಯಿಸಿಕೊಳ್ಳಬೇಕು ಇಲ್ಲವಾದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಮಾತನಾಡಿ ಪ್ರತಿ ವಾರ ಸಾಲ ವಸೂಲಾತಿ ಮಾಡಿದರೆ ಸಾಲ ಪಡೆದವರಿಗೂ ಸಾಲ ವಾಪಸ್ಸು ನೀಡುವುದು ಕಷ್ಟಕರ. ಇದನ್ನು ಮಾಸಿಕ ನಿಯಮಕ್ಕೆ ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.
ಕಷ್ಟದಲ್ಲಿದ್ದಾಗ ಅದರ ಪರಿಹಾರಕ್ಕೆ ಸಾಲ ಪಡೆದುಕೊಳ್ಳುತ್ತಾರೆ. ನೀವು ನೀಡಿದ ಸಾಲದ ಮೊತ್ತದಿಂದಲೇ ಒಂದು ಅಥವಾ ಎರಡು ಕಂತನ್ನು ಮರುಪಾವತಿ ಮಾಡುತ್ತಾರೆ. ಮೈಕ್ರೋ ಫೈನಾನ್ಸ್ ಗಳು ಸಹ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಗಳನ್ನು ನೋಡಿ ಸಾಲ ನೀಡಬೇಕು ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿ.ಒ.ಎಸ್.ಪಿ ಮುರುಳಿ, ಕೃಷ್ಣಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಮುಖ್ಯಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles