ಮಂಡ್ಯ :- ದೇಶದಲ್ಲಿ ಜನಗಣತಿಯೊಂದಿಗೆ ಜಾತಿಗಣತಿ ನಡೆಸುವುದಾಗಿ ಹೇಳಿರುವ ಕೇಂದ್ರ ಸರ್ಕಾರ ಗಣತಿಗೆ ಸಮಯ ನಿಗದಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ತೂಬಿನಕೆರೆ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಗಣತಿಯೊಂದಿಗೆ ಜಾತಿ ಗಣತಿ ಮಾಡುವುದಾಗಿ ಹೇಳಲಾಗಿದೆ ಆದರೆ ಯಾವಾಗ ಗಣತಿ ಮಾಡುತ್ತೇವೆ ಎಂಬುದನ್ನು ಹೇಳಿಲ್ಲ, ಮೂರು ತಿಂಗಳಲ್ಲಿ ಅಥವಾ 4 ತಿಂಗಳಲ್ಲಿ ಮಾಡುತ್ತಾರಾ ಎಂಬುದನ್ನು ಹೇಳಬೇಕೆಂದರು.
ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ, ಬದ್ಯತೆಯೂ ಇಲ್ಲ, ಇತಿಹಾಸವನ್ನು ನೋಡುತ್ತಾ ಬನ್ನಿ ನೂರು ವರ್ಷಗಳಿಂದಲೂ ವಿರೋಧ ಮಾಡುತ್ತಾ ಬಂದಿದ್ದಾರೆ, ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಮಿಲ್ಲರ್ ಕಮಿಷನ್ ರಚಿಸಿದಾಗಿ ನಿಂದಲೂ ಇವತ್ತಿನವರೆಗೂ ವಿರೋಧ ಮಾಡುತ್ತಿದ್ದಾರೆ ಆರ್ ಎಸ್ ಎಸ್ ಗೆ ನೂರು ವರ್ಷ ತುಂಬಿದೆ ಅಂದಿನಿಂದಲೂ ಅವರು ಮೀಸಲಾತಿ ಒಪ್ಪಿಲ್ಲ ಎಂಬುದನ್ನ ಅರಿಯಬೇಕು ಎಂದರು.
ದೇಶದಲ್ಲಿ ಜಾತಿ ಗಣತಿ ನಡೆಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಎನ್ ಡಿ ಎ ಸರ್ಕಾರದ ಮೇಲೆ ಒತ್ತಡ ಹಾಕುತ್ತಾ ಬಂದಿದ್ದರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಪತ್ರ ಬರೆದಿದ್ದರು, ಇದೀಗ ಜಾತಿ ಗಣತಿ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ ಆದರೆ ಯಾವಾಗ ಗಣತಿ ನಡೆಸುತ್ತೇವೆ ಎಂಬುದನ್ನು ತಿಳಿಸಿಲ್ಲ ಆದಷ್ಟು ಶೀಘ್ರ ಗಣತಿಯ ಸಮಯ ನಿಗದಿ ಮಾಡಲು ಮುಂದಾಗ ಬೇಕಾಗಿದೆ ಎಂದರು.
ಮೀಸಲಾತಿ ಪ್ರಮಾಣ ಶೇ 50ರಷ್ಟು ಮೀರಾಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ, ಜನಸಂಖ್ಯೆವಾರು ಮೀಸಲಾತಿ ಕಲ್ಪಿಸಬೇಕಾಗಿರುವುದು ಅನಿವಾರ್ಯ, ಹಾಗಾದಾಗ ಮಾತ್ರ ಸಾಮಾಜಿಕ ಆರ್ಥಿಕ, ಶೈಕ್ಷಣಿಕವಾಗಿ ಮುನ್ನಡೆಯಲು ಸಾಧ್ಯ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸಂವಿಧಾನ ತಿದ್ದುಪಡಿ ಮೂಲಕ ಮೀಸಲಾತಿ ಪ್ರಮಾಣ ಮಿತಿಯನ್ನು ತೆಗೆದು ಹಾಕಬೇಕು ಅದೇ ರೀತಿ ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ಕಲ್ಪಿಸಬೇಕು, ರೋಹಿಣಿ ಕಮಿಷನ್ ವರದಿಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು ರೌಡಿಶೀಟರ್ ಅಂತ ಮಾಹಿತಿ ಬಂದಿದೆ ಹೆಚ್ಚಿನ ಮಾಹಿತಿ ಇಲ್ಲ, ಕಾನೂನು ಸುವ್ಯವಸ್ಥೆ ಎಡಿಜಿಪಿ ರವರನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ, ಯಾರದೇ ಕೊಲೆಯಾಗಿರಲಿ ಮನುಷ್ಯನ ಪ್ರಾಣ ಮುಖ್ಯ, ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸುವಂತೆ ಸೂಚನೆ ನೀಡಲಾಗಿದೆ, ಬಿಜೆಪಿ ಪಕ್ಷದವರಿಗೆ ಇಂತಹ ದುಷ್ಕೃತ್ಯ ನಡೆಯಲಿ ಎಂದು ಕಾಯುತ್ತಿರುತ್ತಾರೆ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗುತ್ತಾರೆ, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ಮಾಡಿ ಅಮಾಯಕರ ಪ್ರಾಣ ತೆಗೆದಿದ್ದಾರೆ, ಘಟನೆ ನಡೆದು ವಾರ ಕಳೆದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೋಗಿದ್ದಾರಾ, ಇನ್ನು ಸಹ ಸ್ಥಳಕ್ಕೆ ಹೋಗಿಲ್ಲ, ದಾಳಿ ನಡೆದಿರುವುದು ಭದ್ರತಾ ವೈಫಲ್ಯ ಅಲ್ಲವೇ, ನೂರಾರು ಪ್ರವಾಸಿಗರು ಸೇರುವ ಕಡೆ ಒಬ್ಬನೇ ಒಬ್ಬ ಪೊಲೀಸ್ ಇಲ್ಲ ಅಂದರೆ ಹೇಗೆ, ಪ್ರವಾಸಿ ಸ್ಥಳದಲ್ಲಿ ಭದ್ರತೆಯೇ ಇಲ್ಲ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದರು.
ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಬೆದರಿಕೆ ಕರೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿ ನನಗೂ ಬೆದರಿಕೆ ಕರೆ ಬಂದಿದೆ, ಈಗಾಗಲೇ ಪೊಲೀಸರಿಗೆ ಬೆದರಿಕೆ ಕರೆಗಳ ಬಗ್ಗೆ ತನಿಖೆ ನಡೆಸಿ ಪತ್ತೆ ಹಚ್ಚುವಂತೆ ಸೂಚಿಸಿದ್ದೇನೆ, ಮದ್ಯದ ದರ ಹೆಚ್ಚಳ ಮಾಡುತ್ತಿರುವುದು ಜನತೆ ಕಡಿಮೆ ಕುಡಿಯಲು ಎಂದು, ದುಡ್ಡು ಹೆಚ್ಚಳ ಮಾಡಿದರೆ ಕಡಿಮೆ ಕುಡಿಯಲಿದ್ದಾರೆ ಎಂದು ಮದ್ಯದ ದರ ಹೆಚ್ಚಳ ಸಮರ್ಥಿಸಿಕೊಂಡರು.
ಜನಗಣತಿ ಜೊತೆ ಜಾತಿ ಗಣತಿಗೆ ಕೇಂದ್ರ ಸರ್ಕಾರ ಸಮಯ ನಿಗದಿ ಮಾಡಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
RELATED ARTICLES
Recent Comments
Hello world!
on