Friday, May 9, 2025
Homeಜಿಲ್ಲೆಮುಖ್ಯಮಂತ್ರಿ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಕದಸಂಸ ಕಾರ್ಯಕರ್ತರ ಬಂಧನ

ಮುಖ್ಯಮಂತ್ರಿ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಕದಸಂಸ ಕಾರ್ಯಕರ್ತರ ಬಂಧನ

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ  ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ ಬೇಟಿ  ಹಿನ್ನಲೆಯಲ್ಲಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಬಿಸುತ್ತ ಮುಖ್ಯಮಂತ್ರಿ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಎಚ್ಚೆತ್ತ ಪೊಲೀಸರು ಮುಖ್ಯಮಂತ್ರಿ ಆಗಮನಕ್ಕೆ ಮುನ್ನ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಕೆ ಎಂ ಅನಿಲ್ ಕುಮಾರ್, ಬಿ ಆನಂದ್, ಮಹದೇವು, ಕರಿಯಪ್ಪ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ಸಮುದಾಯಗಳನ್ನು ನಿರಂತರ ವಂಚಿಸುತ್ತಾ ಬಂದಿದ್ದಾರೆ,ರಾಜ್ಯದ ದಲಿತ, ಹಿಂದುಳಿದ ಅಲ್ಪಸಂಖ್ಯಾತ,ಬಹುಜನ ತಳ ಸಮುದಾಯಗಳ ಅಭಿವೃದ್ಧಿಗಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡುವುದಾಗಿ ನುಡಿದ ಸಿದ್ದರಾಮಯ್ಯ, ನುಡಿದಂತೆ ನಡೆಯಲಿಲ್ಲ ಏಕೆ ಎಂದು ಪ್ರಶ್ನಿಸಿದರು. ಶೋಷಿತ ತಳ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿಯ ಹೆಚ್.ಕಾಂತರಾಜು ಆಯೋಗದ ವರದಿಯನ್ನು ಆರು ತಿಂಗಳ ಕಾಲಮಿತಿಯೊಳಗೆ ಜಾರಿಗೊಳಿಸದೆ 10 ವರ್ಷಗಳಿಂದಲೂ  ಸ್ವಾರ್ಥ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಅಧಿಕಾರ ಉಂಡ ಮುಖ್ಯಮಂತ್ರಿ ಸಿದ್ದರಾಮಯ್ಯ  ಅಹಿಂದ ಸಮುದಾಯಗಳಿಗೆ ಮಾಡಿದ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶೋಷಿತ ತಳ ಸಮುದಾಯಗಳ ಹೆಸರಲ್ಲಿ ಅಧಿಕಾರಕ್ಕೇರಲು ತಾತ್ಕಾಲಿಕ ಪರಿಹಾರಗಳಾಗಿ ಐದು ಗ್ಯಾರಂಟಿಗಳನ್ನು ನೀಡಿದರೇ ಹೊರತು ತಳ ಸಮುದಾಯಗಳಿಗೆ ಭೂಮಿ, ಮನೆ, ಉದ್ಯೋಗ, ಶಿಕ್ಷಣ, ಕಂಪನಿ ಸ್ಥಾಪನೆಯಂತಹ ಅವಕಾಶಗಳನ್ನು ನೀಡಿ ಆಮೂಲಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವಾಗಲಿಲ್ಲ,ಶೋಷಿತ ತಳ ಸಮುದಾಯಗಳ ಹೆಸರಿಗೊಂದು ಅಭಿವೃದ್ಧಿ ನಿಗಮ ಮಾಡಿದರೇ ಹೊರತು ಈ ನಿಗಮಗಳಿಗೆ ಸಮರ್ಪಕ ಅನುದಾನ ಕಲ್ಪಿಸಿ ನೇರಸಾಲ, ಸ್ವಯಂ ಉದ್ಯೋಗ ಸೃಷ್ಟಿಸಲಿಲ್ಲ ಅಷ್ಟೇ ಅಲ್ಲದೆ  ನಿಗಮಗಳಿಗೆ ನೀಡಿದ ಅಲ್ಪ ಅನುದಾನವನ್ನು ಚುನಾವಣೆಯಲ್ಲಿ ಹೆಂಡ ಹಂಚಲು ಅಕ್ರಮ ಬಳಕೆಗೆ ಅವಕಾಶ ಕೊಟ್ಟು,  ಸಮುದಾಯಗಳ ನಿರುದ್ಯೋಗಿಗಳಿಗೆ ಘೋರ ಅನ್ಯಾಯ ಮಾಡಿದ್ದು ಜನರ ಕಣ್ಣ ಮುಂದೆ ಇಲ್ಲವೇ ಎಂದು ಕಿಡಿಕಾರಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments