ಮಂಡ್ಯ : ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ಹಿನ್ನಲೆಯಲ್ಲಿ ದೇಶಾದ್ಯಂತ ಜನರ ಸಂರಕ್ಷಣಾ ತಾಲಿಮು ಮೂಲಕ ಜಾಗೃತಿ ನಡೆದ ನಂತರ ಜಿಲ್ಲೆಯ ರೈತರ ಜೀವನಾಡಿ ಕೃಷ್ಣರಾಜಸಾಗರದಲ್ಲಿ ಆಪರೇಷನ್ ಅಭ್ಯಾಸ್ ಅಣಕು ಪ್ರದರ್ಶನ ಯಶಸ್ವಿಯಾಗಿ ನಡೆಯಿತು
ಜಿಲ್ಲಾಡಳಿತದ ವತಿಯಿಂದ ಬೋಟಿಂಗ್ ಸಂದರ್ಭದಲ್ಲಿ ಅವಘಡ ನಡೆದ ಸಂದರ್ಭದಲ್ಲಿ ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ, ಆರೋಗ್ಯ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳು ಸಮನ್ವಯ ಕೆಲಸಗಳು ಹಾಗೂ ಸಾರ್ವಜನಿಕರು ವಹಿಸಬೇಕಾದ ಎಚ್ಚರಿಕೆ ಕುರಿತು ಅಣುಕು ಪ್ರದರ್ಶನವನ್ನು ಅನಾವರಣಗೊಳಿಸಲಾಯಿತು.
ಕೆ.ಆರ್.ಎಸ್ ಉದ್ಯಾನವನದಲ್ಲಿರುವ ಬೋಟಿಂಗ್ ಪಾಯಿಂಟ್ ನಲ್ಲಿ ಬೋಟ್ ಮಗಚಿಕೊಂಡ ಸಂದರ್ಭದಲ್ಲಿ ಕಂಟ್ರೋಲ್ ರೂಂ ಗೆ ಘಟನೆ ವಿವರ ಬಂದ ತಕ್ಷಣ ಕಂಟ್ರೋಲ್ ರೂಂ ನಿಂದ ವಿವಿಧ ಇಲಾಖೆಗಳಿಗೆ ಮಾಹಿತಿ ನೀಡಿ ಎಚ್ಚರಿಸಲಾಯಿತು.
ಅಗ್ನಿಶಾಮಕ ದಳದವರು ಮೊದಲು ನೀರಿನಲ್ಲಿ ಮುಳುಗುತ್ತಿರುವ ವ್ಯಕ್ತಿಗಳ ರಕ್ಷಣೆಗಾಗಿ ತಮ್ಮ ಇಲಾಖೆ ಬೋಟ್, ರಕ್ಷಣಾ ಸಲಕರಣೆಗಳನ್ನು ಬಳಸಿಕೊಂಡು ಮುಳುಗುತ್ತಿರುವ ವ್ಯಕ್ತಿಗಳನ್ನು ದಡಕ್ಕೆ ಕರೆತರುತ್ತಾರೆ. ಪೊಲೀಸ್ ಇಲಾಖೆಯವರು ಸಾರ್ವಜನಿಕರನ್ನು ನಿಯಂತ್ರಿಸಲು ಹಾಗೂ ಅಗ್ನಿಶಾಮಕ ಇಲಾಖೆ ವಾಹನಗಳು ಹಾಗೂ ಅಂಬ್ಯೂಲೆನ್ಸ್ ಗಳ ಚಲನ- ವಲನ ಗಳಿಗೆ ತೊಂದರೆಯಾಗದಂತೆ ಬಂದೋಬಸ್ತ್ ಒದಗಿಸುತ್ತಾರೆ.ಆರೋಗ್ಯ ಇಲಾಖೆ ವತಿಯಿಂದ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಅವಶ್ಯಕವಿರುವವರನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
ಬೆಂಕಿ ದುರಂತದ ಜಾಗೃತಿ : ಪೊಲೀಸ್ ಗೆಸ್ಟ್ ಹೌಸ್ ನಲ್ಲಿ ಬೆಂಕಿ ಅವಘಡವಾದ ತಕ್ಷಣ ಸೈರನ್ ಶಬ್ದ ಚಾಲನೆ ಮಾಡಿ ಎಚ್ಚರಿಕೆ ನೀಡಲಾಯಿತು. ಕಂಟ್ರೋಲ್ ರೂಂಗೆ ವಿಷಯ ರವಾನಿಸಿ ಎಲ್ಲಾ ಇಲಾಖೆಗಳನ್ನು ಎಚ್ಚರಿಸಲಾಯಿತು
ಪೊಲೀಸ್ ಗೆಸ್ಟ್ ಹೌಸ್ ನಲ್ಲಿ ಬೆಂಕಿ ಅನಾಹುತದಲ್ಲಿ ಸಿಲುಕಲಾಗಿದ್ದ ವ್ಯಕ್ತಿಗಳನ್ನು ರಕ್ಷಿಸುವ ಅಣುಕು ಪ್ರದರ್ಶನದಲ್ಲಿ ಮೊದಲನೇ ಮಹಡಿಯಿಂದ ಗಯಾಳುಗಳನ್ನು ಕೆಳಗೆ ಇಳಿಸಿ ಚಿಕಿತ್ಸೆ ನೀಡುವುದು ವಿಶೇಷವಾಗಿತ್ತು
ಬಾಂಬ್ ಸ್ಪೋಟದ ಅವಘಡ : ಬಾಂಬ್ ಸ್ಪೋಟ್ ವಾದ ತಜ್ಷಣ ಸೈರನ್ ಮೂಲಕ ಎಚ್ಚರಿಕೆ ನೀಡಿ ಕಂಟ್ರೋಲ್ ರೂಂಗೆ ವಿಷಯ ರವಾನಿಸಿ ಎಲ್ಲಾ ಇಲಾಖೆಗಳಿಗೆ ಕ್ರಮಕ್ಕೆ ಮಾಹಿತಿ ನೀಡಲಾಯಿತು.
ಬಾಂಬ್ ನಿಷ್ಕ್ರಿಯ ತಂಡ ಶ್ವಾನ ದಳದೊಂದಿಗೆ ಆಗಮಿಸಿ ಉದ್ಯಾನವನದ ಪರಿಶೀಲನೆ ಪ್ರಾರಂಭಿಸಲಾಯಿತು.ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಎನ್.ಸಿ.ಸಿ ವಿದ್ಯಾರ್ಥಿಗಳು, ಅಪಘಾತಕ್ಕೀಡದವರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರೆ. ವೈದ್ಯರ ತಂಡ ಪ್ರಥಮ ಚಿಕಿತ್ಸೆ ನೀಡುವ ಕಾರ್ಯದಲ್ಲಿ ತೊಡಗಲಾಯಿತು
ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ ಆಪರೇಷನ್ ಅಭ್ಯಾಸ್ ಮೂಲಕ ಇಲಾಖೆಗಳ ಸಮನ್ವಯ ಹಾಗೂ ತುರ್ತು ಸಂದರ್ಭಗಳಲ್ಲಿ ಮಾಡಿಕೊಳ್ಳಬೇಕಿರುವ ಸಿದ್ಧತೆ ಕುರಿತು ಇಂದು ನಡೆಸಿದ 4 ಸನ್ನಿವೇಶಗಳ ಮೂಲಕ ಅವಲೋಕಿಸಲಾಗಿದೆ ಎಂದರು.
ಅಭ್ಯಾಸ್ ಅಣುಕು ಪ್ರದರ್ಶನವನ್ನು ಅವಲೋಕಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಯಾವ ಸನ್ನಿವೇಶದಲ್ಲಿ ಜಿಲ್ಲಾಡಳಿತ ಮತ್ತು ಇಲಾಖೆಗಳು ಬಲಪಡಿಸಿಕೊಳ್ಳಬೇಕು ಎಂದು ಸಲಹೆಗಳನ್ನು ಪಡೆದು ತುರ್ತು ಸಂದರ್ಭಗಳಲ್ಲಿ ಇನ್ನೂ ಪರಿಣಾಮಕಾರಿಯಾಗಿ ಕೆಲಸ ಮಾಡಲು ಜಿಲ್ಲಡಳಿತ ಸಜ್ಜುಗೊಳ್ಳಲಿದೆ ಎಂದರು.
ಅಣುಕು ಪ್ರದರ್ಶನದಲ್ಲಿ ವಿವಿಧ ಇಲಾಖೆಗಳಿಂದ ಭಾಗವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗಂಗಾಧರ್, ಅಗ್ನಿಶಾಮಕ ಅಧಿಕಾರಿ ರಾಘವೇಂದ್ರ, ಉಪವಿಭಾಗಾಧಿಕಾರಿ ಶಿವಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಆರೋಗ್ಯ, ಪೊಲೀಸ್, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಎನ್.ಎಸ್.ಎಸ್ ವಿದ್ಯಾರ್ಥಿಗಳು, ಗೃಹರಕ್ಷಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು
ಕೆ ಆರ್ ಎಸ್ ನಲ್ಲಿ ಆಪರೇಷನ್ ಅಭ್ಯಾಸ್
Recent Comments
on Hello world!
