Home ಜಿಲ್ಲೆಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ರಿಂದ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ : ಚೆಲುವರಾಯಸ್ವಾಮಿ

ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ರಿಂದ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ : ಚೆಲುವರಾಯಸ್ವಾಮಿ

by M S MURTHY

ಮಂಡ್ಯ :- ಶ್ರೀರಂಗಪಟ್ಟಣ ದಸರಾ  ಮಹೋತ್ಸವವನ್ನು ಚಲನಚಿತ್ರ ನಿರ್ದೇಶಕ, ನಟ ಟಿ ಎಸ್ ನಾಗಾಭರಣ ಉದ್ಘಾಟಿಸಲಿದ್ದಾರೆ
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೆ. 25 ರಿಂದ 28ರ ವರೆಗೆ ನಡೆಯುವ ದಸರಾ ಮಹೋತ್ಸವದ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ದಸರಾ ಮಹೋತ್ಸವ ಉದ್ಘಾಟಕರ ಹೆಸರನ್ನು ಘೋಷಿಸಿದರು.
ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ  ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು,  ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್ ನಾಗಾಭರಣ ಉದ್ಘಾಟಿಸಲ್ಲಿದ್ದಾರೆ ಎಂದು ತಿಳಿಸಿದರು.
ಈ ಬಾರಿಯ ದಸರಾ ಉತ್ಸವವನ್ನು ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು ಉದ್ಘಾಟನೆ ಹಾಗೂ 28 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಶಾಸಕ ರಮೇಶ್‌ ಬಾಬು ಬಂಡಿಸಿದ್ದೇಗೌಡ,  ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಇತರರಿದ್ದರು

You may also like

Leave a Comment