ಮದ್ದೂರು: ಶಿವಾರ ಗುಡ್ಡದ ಜವಾಹರ ನವೋದಯ ವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳಾದ ಶಿವಾಲಿ ಹಾಗೂ ರುಚಿತಾ ಉತ್ತರ ಭಾರತದ ವಿವಿಧ ಸ್ಥಳಗಳಲ್ಲಿ ನಡೆದ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಲೆಯ ವತಿಯಿಂದ ಅಭಿನಂದಿಸಲಾಯಿತು.
ಪ್ರಾಂಶುಪಾಲರಾದ ಪಾರ್ಥಿಬನ್ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಅದರ ಅಂಗವಾಗಿ ಉತ್ತರ ಭಾರತದ ವಿವಿಧ ಸ್ಥಳಗಳಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದ ಚೆಸ್ ಸ್ಪರ್ಧೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಅದರಂತೆ ಶಾಲೆಯ ಇತರೆ ವಿದ್ಯಾರ್ಥಿಗಳು ಸಹ ಭಾಗವಹಿಸಿ ಗಮನ ಸೆಳೆದಿರುವುದು ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಶಿವಾಲಿ ಹಾಗೂ ರುಚಿತಾ ಸೇರಿದಂತೆ ಕಬಡ್ಡಿ, ಬ್ಯಾಸ್ಕೆಟ್ ಬಾಲ್ , ರೋಕ್ಸ್ ಸ್ಕಿಪ್ಪಿಂಗ್, ಅಥ್ಲೆಟಿಕ್ಸ್ ಸ್ಪರ್ಧಿಸಿದ್ದ 13 ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.
ವಿದ್ಯಾಲಯದ ಉಪ ಪ್ರಾಂಶುಪಾಲ ಸತ್ಯಲಿಂಗಂ, ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಕುಮಾರ್, ಸಂಗೀತ ಹಾಗೂ ವಿದ್ಯಾರ್ಥಿಗಳ ಪೋಷಕರು ಅಭಿನಂದಿಸಿದರು.
ಶಿವಾರಗುಡ್ಡ ನವೋದಯ ಶಾಲೆ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಅಭಿನಂದನೆ
Recent Comments
on Hello world!
