ಮಂಡ್ಯ :- ಜಿಲ್ಲಾ ಕೇಂದ್ರದಲ್ಲಿ ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಾದ ಜಾಗ ನೀಡಲು ಸಿದ್ದ ಇರುವ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಶಾಸಕ ರವಿಕುಮಾರ್ ಗಣಿಗ ಪತ್ರ ಬರೆದಿದ್ದಾರೆ.
ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲೇ ಟ್ರಾಮಾ ಸೆಂಟರ್, ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂಬುದು ಜನರ ಬಯಕೆಯಾಗಿದೆ. ಅದಕ್ಕೆ ರಾಜ್ಯ ಸರ್ಕಾರ ಸೂಕ್ತ ಜಾಗ ನೀಡಬೇಕು. ತುರ್ತಾಗಿ ಪ್ರಸ್ತಾವನೆಯೊಂದನ್ನು ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು ಇದರ ಬೆನ್ನಲ್ಲೇ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿ ಆವರಣದ ಜಾಗವನ್ನು ನೀಡುವುದಾಗಿ ಘೋಷಿಸಿದ್ದಾರೆ
ಮಂಡ್ಯ ನಗರದಲ್ಲಿ ಟ್ರಾಮಾ ಸೆಂಟರ್ ಅನ್ನು ತೆರೆಯಲು ಜಾಗ ನೀಡಿದರೆ ಕೇಂದ್ರದಿಂದ ಅನುಮೋದನೆ ದೊರಕಿಸಿಕೊಡುವುದಾಗಿ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿರುವುದು ಸ್ವಾಗತಾರ್ಹ, ಮಿಮ್ಸ್ ಆಸ್ಪತ್ರೆಯ ಪಕ್ಕದಲ್ಲಿರುವ ತಮಿಳು ಕಾಲೋನಿಯ ಜಾಗದ ಸಂಬಂಧ ನ್ಯಾಯಾಲದಲ್ಲಿ ದಾವೆ ಇರುವುದರಿಂದ ಅ ಸ್ಥಳದಲ್ಲಿ ಟ್ರಾಮಾ ಸೆಂಟರನ್ನು ತೆರೆಯಲು ಸಾದ್ಯವಾಗುತ್ತಿಲ್ಲ. ಹಾಗಾಗಿ ಉದ್ದೇಶಿತ ಟ್ರಾಮಾ ಸೆಂಟರ್ ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳ ಕಛೇರಿಯ ಆವರಣದಲ್ಲಿ ತೆರೆಯಲು ಅವಶ್ಯವಾದ ಜಾಗದ ಲಭ್ಯತೆ ಇದ್ದು, ಅ ಜಾಗವನ್ನು ನೀಡಲು ಸಿದ್ದರಿದ್ದೇವೆ ಎಂದಿದ್ದಾರೆ.
ಸದರಿ ಜಾಗದಲ್ಲಿ ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಲು ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿಸಿ ಕೊಡುವಂತೆ ಪತ್ರದಲ್ಲಿ ಮನವಿ ಮಾಡಿರುವುದಾಗಿ ಶಾಸಕರು ತಿಳಿಸಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡಲು ಸಿದ್ದ : ಶಾಸಕ ರವಿಕುಮಾರ್ ಗಣಿಗ
Recent Comments
on Hello world!
