Friday, April 17, 2026
Homeಜಿಲ್ಲೆಗಡಿ ಭದ್ರತಾ ಪಡೆ ಮೃತ ಯೋಧನಿಗೆ ಗೌರವ ಸಮರ್ಪಣೆ

ಗಡಿ ಭದ್ರತಾ ಪಡೆ ಮೃತ ಯೋಧನಿಗೆ ಗೌರವ ಸಮರ್ಪಣೆ

ಮಂಡ್ಯ :- ಗಡಿ ಭದ್ರತಾ ಪಡೆಯಲ್ಲಿ ಸೇವಾ ನಿರತರಾಗಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಜಿಲ್ಲೆಯ ಯೋಧನ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಲಾಯಿತು.
ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ  ಮೈದಾನದಲ್ಲಿ ಮೃತ ಯೋಧ ಎಂ ಬಿ ಮಾದೇಗೌಡರ ಪಾರ್ಥಿವ ಶರೀರಕ್ಕೆ  ಪುಷ್ಪಗುಚ್ಛ ಇರಿಸಿ ಶಾಸಕ  ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ  ಗೌರವ ಸಮರ್ಪಿಸಿದರು, ಇದೇ ವೇಳೆ  ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ಯೋಧನಿಗೆ ಗೌರವ ನಮನ ಸಲ್ಲಿಸಿದರು.
ಮಂಡ್ಯದ ತಾವರೆಗೆರೆ ನಿವಾಸಿ ಎಂ.ಬಿ.ಮಾದೇಗೌಡ (44)  ಗಡಿ ಭದ್ರತಾ ಪಡೆ  ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು,ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು,
ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು 2000 ರಲ್ಲಿ ಮೈಸೂರಿನಲ್ಲಿ ನಡೆದ BSF ಸೇನಾ ನೇಮಕಾತಿ ರ‌್ಯಾಲಿಯಲ್ಲಿ ಆಯ್ಕೆಯಾಗಿ BSF ಸೇನೆಗೆ ಸೇರಿದ್ದರು. ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು.
ಮೃತ ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚ  ಇರಿಸಿ ಜಿಲ್ಲಾಡಳಿತದಿಂದ ಗೌರವ ಸಮರ್ಪಿಸಿದ ನಂತರ  ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments