ಬೆಂಗಳೂರು :- ರಾಜ್ಯ ಕಾಂಗ್ರೆಸ್ ಸರ್ಕಾರದ ಯೋಜನಾ ಮತ್ತು ಸಾಂಖಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (62) ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಮುಂಜಾನೆ 3-15 ಸಮಯದಲ್ಲಿ ಕೊನೆಯುಸಿರೆಳೆದರು.
ಮಂಡಿ ಚಿಪ್ಪು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದಲ್ಲಿದ್ದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಶ್ವಾಸಕೋಶದ ಸೋಂಕು ತಗಲಿತ್ತು.ಯಶವಂತಪುರ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು. ತಜ್ಞ ವೈದ್ಯರ ಸತತ ಚಿಕಿತ್ಸೆ ನಂತರವೂ ಅವರು ಚೇತರಿಸಿಕೊಂಡಿರಲಿಲ್ಲ..
ಡಿ ಸುಧಾಕರ್ ಅವರು .1961 ಮಾರ್ಚ್ 28 ರಂದು ಜನಿಸಿದ್ದರು,2004ರಲ್ಲಿ ಪ್ರಥಮ ಬಾರಿಗೆ ಚಳ್ಳಕೆರೆಯಿಂದ ಶಾಸಕರಾಗಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದರು,ಚಳ್ಳಕೆರೆ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕಾರಣ ಅವರು ಸಾಮಾನ್ಯ ಕ್ಷೇತ್ರವಾಗಿ ಬದಲಾದ ಹಿರಿಯೂರು ಕ್ಷೇತ್ರಕ್ಕೆ ವಲಸೆ ಬಂದು 2008ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿ ಬಿ.ಎಸ್. ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ಘೋಷಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಗಿದ್ದರು.
2013 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅವರು ಮತ್ತೆ ಆಯ್ಕೆಯಾದರು 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲು ಅನುಭವಿಸಿದರು,2023ರಲ್ಲಿ ಕಾಂಗ್ರೆಸ್ ನಿಂದ ಮರು ಆಯ್ಕೆಗೊಂಡು ಸಾಂಖಿಕ ಮತ್ತು ಯೋಜನಾ ಸಚಿವರಾದರು. ಜೈನ ಸಮುದಾಯದ ಇವರು ಇತರ ಸಮುದಾಯಗಳ ಪ್ರೀತಿ ಸಂಪಾದಿಸಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅಪಾರ ಜನರಿಗೆ ಸಹಾಯಾಸ್ತ ಚಾಚಿದ್ದರು. ‘ಬಡವರ ಬಂಧು’ ಎಂದೇ ಪ್ರಸಿದ್ಧಿ ಪಡೆದಿದ್ದರು.
ಚಿತ್ರದುರ್ಗ ಉಸ್ತುವಾರಿ ಸಚಿವ ಡಿ ಸುಧಾಕರ್ ನಿಧನ
198
previous post

