Home ತಾಲೂಕುಕೆ ಆರ್ ಪೇಟೆ I ಕೆರೆಗೆ ಹಾರಿ ರೈತ ಆತ್ಮಹತ್ಯೆ

ಕೆ ಆರ್ ಪೇಟೆ I ಕೆರೆಗೆ ಹಾರಿ ರೈತ ಆತ್ಮಹತ್ಯೆ

by M S MURTHY

ಕೆ ಆರ್ ಪೇಟೆ :- ಸಾಲಬಾಧೆ ತಾಳಲಾರದೆ ರೈತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ
ಪಟ್ಟಣದ ದೇವೀರಮ್ಮಣ್ಣಿ ಕೆರೆಗೆ ಹಾರಿ ಕರೋಟಿ ಗ್ರಾಮದ ವೆಂಕಟೇಶ ಮಗ ದೇವರಾಜು (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೇಸಾಯ ಮಾಡುತ್ತಿದ್ದ ದೇವರಾಜು ಜಮೀನಿನಲ್ಲಿ ಕಬ್ಬು ಮತ್ತು ಭತ್ತದ ಬೆಳೆಯನ್ನು ಬೆಳೆಯುತ್ತಿದ್ದರು, ಕೃಷಿ ಚಟುವಟಿಕೆಗೆ ವಿವಿಧ ಸಂಘ ಸಂಸ್ಥೆ ಸೇರಿದಂತೆ ಖಾಸಗಿ ವ್ಯಕ್ತಿಗಳಿಂದ 10.ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು.
ಸಾಲ ಮರುಪಾವತಿಸಲು ಸಾಧ್ಯವಾಗಿರಲಿಲ್ಲ, ಸಾಲಗಾರರ ಕಿರುಕುಳದಿಂದ ಬೇಸತ್ತಿದ್ದ ದೇವರಾಜು ಮನನೊಂದು ದೇವಿರಮ್ಮಣ್ಣಿ ಕೆರೆಗೆಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು. ಕುಟುಂಬಕ್ಕೆ ಆಧಾರವಾಗಿದ್ದ ದೇವರಾಜು ಕಳೆದುಕೊಂಡ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ನೂತನ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ
ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.

You may also like

Leave a Comment