ಮಂಡ್ಯ : – ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ರವರ 94ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರು ವಿದ್ಯಾನಗರದ ಗಣಪತಿ ದೇವಸ್ಥಾನದಲ್ಲಿ ಹೆಚ್.ಡಿ.ದೇವೇಗೌಡರ ಆರೋಗ್ಯ ವೃದ್ಧಿಗಾಗಿ ಮೃತುಂಜಯ ಹೋಮ, ನವಗ್ರಹ ಶಾಂತಿ ಹೋಮ ನಡೆಸಿದರು.
ಪಕ್ಷದ ಮುಖಂಡ ಬಿ ಆರ್ ರಾಮಚಂದ್ರ ಮಾತನಾಡಿ ರಾಷ್ಟ್ರೀಯ ನಾಯಕರು ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬವನ್ನು ಹಬ್ಬದ ರೀತಿ ಆಚರಿಸುತ್ತಿದ್ದೇವೆ ಹೆಚ್.ಡಿ.ದೇವೇಗೌಡ ಅವರ ಹೆಸರಲ್ಲಿ ಆರೋಗ್ಯ ವೃದ್ಧಿಗಾಗಿ ಹೋಮ ಮಾಡಿಸಲಾಗಿದೆ. ದೇವರು ಅವರಿಗೆ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ.ರಾಷ್ಟ್ರದ ಜನರ ಆಶೀರ್ವಾದ ಅವರ ಮೇಲಿರಲಿ ಎಂದು ಪ್ರಾರ್ಥಿಸಿದರು.
ಮುಖಂಡ ಸಿದ್ದರಾಮೇಗೌಡ ಮಾತನಾಡಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ರಾಜ್ಯಸಭಾ ಸದಸ್ಯತ್ವ ಅವಧಿ ಬರುವ ಜೂ.25ಕ್ಕೆ ಮುಕ್ತಾಯವಾಗುವುದರಿಂದ ಮತ್ತೊಮ್ಮೆ ರಾಜ್ಯಸಭೆ ಪ್ರವೇಶಿಸಲು ಮೈತ್ರಿ ಪಕ್ಷ ಅವರಿಗೆ ಅವಕಾಶ ಕೊಟ್ಟು ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಕೊಡುಗೆಯಾಗಿ ಪ್ರಧಾನಿ ನರೇಂದ್ರ ಮೋದಿ ಯವರು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಜಿಲ್ಲಾದ್ಯಕ್ಷ ಡಿ.ರಮೇಶ್,ನಗರ ಘಟಕದ ಅಧ್ಯಕ್ಷ ಬೋರೇಗೌಡ,ನಗರಸಭೆ ಮಾಜಿ ಅಧ್ಯಕ್ಷ ನಾಗೇಶ್, ಸಾತನೂರು ಜಯರಾಮ್, ಮಂಜುನಾಥ್ ಇತರರಿದ್ದರು.
ಹುಟ್ಟುಹಬ್ಬದ ಉಡುಗೊರೆಯಾಗಿ ದೇವೇಗೌಡರಿಗೆ ರಾಜ್ಯಸಭೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಿ
268

