ಮಂಡ್ಯ :- ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡಿರುವ ಘಟನೆ ಹನಕೆರೆ ಗ್ರಾಮದ ಸಮೀಪದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಕೇರಳ ಮೂಲದ ಮೂವರಿಗೆ ಗಂಭೀರ ಗಾಯವಾಗಿದೆ. ಕೇರಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹೈವೆಯಲ್ಲಿ ಉರುಳಿಬಿದ್ದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.