ಮಂಡ್ಯ :- ಇಂಗಳೇ ಫೌಂಡೇಶನ್, ಅಂಬೇಡ್ಕರ್ ವಿವಿದ್ದೊದ್ದೆಶಸಹಕಾರ ಸಂಘ ಮತ್ತು ವಿಸ್ಪಜ್ಞಾನಿ ನೌಕರರ ಅಭಿವೃದ್ಧಿ ಸಹಕಾರ ಸಂಘದ ಆಶ್ರಯದಲ್ಲಿ 2568 ನೇ ವೈಶಾಖ ಬುದ್ಧ ಪೂರ್ಣಿಮೆ ಯನ್ನು ಮೇ.26 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೆ.ವಿ ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷ ,ವಕೀಲ ಎಂ ಬಿ ಹರಿಪ್ರಸಾದ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳಂದ ಬುದ್ಧ ವಿಹಾರದ ಬೋಧಿ ರತ್ನ ಬಂತೇಜಿ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ ಕೃಷ್ಣಮೂರ್ತಿ ಉದ್ಘಾಟಿಸಲಿದ್ದು ಕರ್ನಾಟಕ ಬೌದ್ಧ ಸಮಾಜದ ರಾಜ್ಯಾಧ್ಯಕ್ಷ ಹ. ರಾ..ಮಹೇಶ್ ಹಾಗೂ ಎವಿಎಸ್ಎಸ್ ಸಂಘಟನೆ ರಾಜ್ಯಾಧ್ಯಕ್ಷ ತುಂಬಲ ರಾಮಣ್ಣ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು ಮುಖ್ಯ ಅತಿಥಿಗಳಾಗಿ ನಿವೃತ್ತ ಅಧೀಕ್ಷಕ ಅಭಿಯಂತರ ಚಂದ್ರಹಾಸ್ ,ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ ಎಸ್ ಸೀತಾಲಕ್ಷ್ಮೀ ,ವಿಶ್ವಜ್ಞಾನಿ ನೌಕರರ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬುದ್ಧ ಹಾಗೂ ಅಂಬೇಡ್ಕರ್ ಅನುಯಾಯಿಗಳ ಹೆಚ್ಚಿನ ಸಂಖ್ಯೆಯಲ್ಲಿ ಬುದ್ಧ ಪೂರ್ಣಿಮೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಲಿಂಗರಾಜಮ್ಮ,ಗುರುಶಂಕರ್,,ಎಂ ಕುಮಾರ್,ರಾಜೇಶ್,ಜಯಶಂಕರ್, ಮುರುಗನ್ ಇತರರಿದ್ದರು.