Friday, February 23, 2024
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ
Homeರಾಜಕೀಯದೇಶದಲ್ಲಿ ನರೇಂದ್ರ ಮೋದಿ ಗ್ಯಾರಂಟಿ ಮಾತ್ರ ನಡೆಯೋದು

ದೇಶದಲ್ಲಿ ನರೇಂದ್ರ ಮೋದಿ ಗ್ಯಾರಂಟಿ ಮಾತ್ರ ನಡೆಯೋದು

ಮಂಡ್ಯ :- ದೇಶಕ್ಕೆ ನರೇಂದ್ರ ಮೋದಿ ಅವರೇ ಗ್ಯಾರಂಟಿ. ಅವರ ಗ್ಯಾರಂಟಿ ನಡೆಯುತ್ತಿದೆಯೇ ಹೊರತು ಇನ್ಯಾವ ಗ್ಯಾರಂಟಿ ಕೂಡ ನಡೆಯುವುದಿಲ್ಲ ಎಂದು
ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ರವರಲ್ಲಿ ವಿಶ್ವಾಸವಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಹೆಚ್ಚಿನ ಸ್ಥಾನ ಗೆಲ್ಲಲಿದೆ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಅನುಕೂಲವಾಗಲಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ. ಹರಿಯಾಣದಲ್ಲಿ ಗೆಲುವು ಸಾಧಿಸಿದ್ದಂತೆ ಕರ್ನಾಟಕದಲ್ಲೂ ಎಲ್ಲಾ 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲ್ಲುವ ವಿಶ್ವಾಸವಿದೆ ಎಂದರು.
ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಸಮಯ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾಗುತ್ತದೆ.
ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಒಳ್ಳೆಯದೇ ಆಗಿದೆ ಹೊರತು ಕೆಟ್ಟದಾಗಿಲ್ಲ
ಕರ್ನಾಟಕದಲ್ಲಿ 28 ಸ್ಥಾನವನ್ನು ಗೆಲ್ಲಲು ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಕಾಂಗ್ರೆಸ್‌ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಕಾಂಗ್ರೆಸ್‌ ಜತೆ ಯಾವ ಪಕ್ಷದವರೂ ಕೂಡ ಸೇರುತ್ತಿಲ್ಲ. ಇದರಿಂದ ಏಕಾಂಗಿ ಕಾಂಗ್ರೆಸ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಅದೇ ರೀತಿ ಮನೆ ಮನೆಗೆ ಮಂತ್ರಾಕ್ಷತೆ ವಿತರಿಸಿದ ವೇಳೆ ಮಾತನಾಡಿದ ಸಚಿವರು,
ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರು ಬರುವುದಿಲ್ಲ ಎಂದಿದ್ದಾರೆ. ಈ ಮೂಲಕ ಸನಾತನ ಧರ್ಮ ವಿರೋಧ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ನಿರ್ಮೂಲನೆ ಆಗಲಿದೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ. ಸನಾತನ ಧರ್ಮವನ್ನು ವಿರೋಧ ಮಾಡುವ ಮೂಲಕ ಕಾಂಗ್ರೆಸ್‌ ತನ್ನಿಂದ ತಾನೇ ಪತನವಾಗುತ್ತಿದೆ. ಅವರ ವಿನಾಶವನ್ನು ಅವರೇ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಬಿಜೆಪಿ ಕಾರ್ಯಕ್ರಮವಲ್ಲ. ಸಾಧು-ಸಂತರ ಕಾರ್ಯಕ್ರಮ. ಕಾರ್ಯಕ್ರಮಕ್ಕೆ ಬಿಜೆಪಿ ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್‌ ಪಕ್ಷದ ವರಿಷ್ಠರು ಹಾಗೂ ನಾಯಕರು ಗೈರಾಗುವುದಾಗಿ ತಿಳಿಸಿದ್ದಾರೆ. ಇದು ನಮ್ಮ ಮನೆಯ ಕಾರ್ಯಕ್ರಮವಲ್ಲ, ಇಡೀ ದೇಶದ ಹಿಂದುಗಳ ಕಾರ್ಯಕ್ರಮವಾಗಿದೆ. ಆದ್ದರಿಂದ ಕಾಂಗ್ರೆಸ್‌ ನಾಯಕರನ್ನು ಬಿಜೆಪಿ ನಾಯಕರು ಆಹ್ವಾನಿಸುವ ಅವಶ್ಯಕತೆ ಇಲ್ಲ ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ್‌ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತಾಪ ಪಡುತ್ತಾರೆ ಹಿಂದೂ ಗಳನ್ನ ನಿರ್ಲಕ್ಷಿಸಿ ಒಂದು ಜನಾಂಗದ ಪರ ನಿಂತಿದ್ದರಿಂದಲೇ ಇತ್ತೀಚೆಗೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಯುವಂತಾಗಿದೆ ಎಂಬುದನ್ನ ಅರಿಯಬೇಕೆಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್‌, ರಾಜ್ಯಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ, ಅಶೋಕ್‌ ಜಯರಾಂ, ಡಾ.ಎನ್.ಎಸ್.ಇಂದ್ರೇಶ್, ಪ.ನಾ.ಸುರೇಶ್‌, ಸಿ.ಟಿ.ಮಂಜುನಾಥ್ ಇದ್ದರು.

 

RELATED ARTICLES

LEAVE A REPLY

Please enter your comment!
Please enter your name here

- Advertisment -
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ

Most Popular

Recent Comments