Friday, February 23, 2024
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ
Homeರಾಜಕೀಯಪಾಂಡವಪುರ l ಕಾಂಗ್ರೆಸ್ ಕಾರ್ಯಕರ್ತರನ್ನ ಮರೆತ ಪಕ್ಷದ ನಾಯಕರ ವಿರುದ್ಧ ಆಕ್ರೋಶ

ಪಾಂಡವಪುರ l ಕಾಂಗ್ರೆಸ್ ಕಾರ್ಯಕರ್ತರನ್ನ ಮರೆತ ಪಕ್ಷದ ನಾಯಕರ ವಿರುದ್ಧ ಆಕ್ರೋಶ

ಪಾಂಡವಪುರ :- ವಿಧಾನಸಭೆ ಚುನಾವಣೆ ಮುಗಿದ ನಂತರ ಪಕ್ಷದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸ್ವಪಕ್ಷೀಯ ನಾಯಕರ ವಿರುದ್ಧ ಆಕ್ರೋಶಿಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಮಾಡಲಾಗುವುದು ಎಚ್ಚರಿಸಿದರು.
ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಅನುಷ್ಠಾನ ಸಮಿತಿ‌ ರಚನೆಗಾಗಿ ನಡೆದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವರ್ತನೆ ವಿರುದ್ಧ ಕಿಡಿಕಾರಿದರು.
ಚುನಾವಣೆ ಸಮಯದಲ್ಲಿ ಮಾತ್ರ ಕಾರ್ಯಕರ್ತರನ್ನು ನೆನಪಿಸಿಕೊಳ್ಳುವ ನಾಯಕರು ಆನಂತರದ ದಿನಗಳಲ್ಲಿ ಕಾರ್ಯಕರ್ತರು ಇದ್ದಾರೆ ಎಂಬುದನ್ನ ಮರೆತು ಬಿಡುತ್ತಾರೆ, ಯಾವುದೇ ಸ್ಥಾನಮಾನ ಕಲ್ಪಿಸುವುದಿಲ್ಲ, ಮತ್ತೆ ಚುನಾವಣೆ ಬಂದಾಗ ಮಾತ್ರ ಕಾರ್ಯಕರ್ತರ ನೆನಪಿಗೆ ಬರುತ್ತಾರೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಮ್ಮುಖದಲ್ಲಿ ಆಕ್ರೋಶ ಹೊರಹಾಕಿದರು
ಕಾಂಗ್ರೆಸ್ ಮುಖಂಡ ಚಿಕ್ಕಾಡೆ ಕೃಷ್ಣೇಗೌಡ ಮಾತನಾಡಿ, ವಿಧಾನಸಭೆ ಚುನಾವಣೆ ಮುಗಿದು ಏಳು ತಿಂಗಳು ಕಳೆದಿದೆ. ಈವರೆಗೂ ಪಕ್ಷದಿಂದ ಕೃತಜ್ಞತಾ ಸಭೆ ನಡೆಸಿಲ್ಲ. ಜತೆಗೆ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಕಾರ್ಯಕರ್ತರಿಗೆ ನಾಮನಿರ್ದೇಶನ ಸೇರಿದಂತೆ ಯಾವುದೇ ಅಧಿಕಾರ ನೀಡಿಲ್ಲ. ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಚುನಾವಣೆ ಬಂದಾಗ ಮಾತ್ರ ಕಾರ್ಯಕರ್ತರ ಅವಶ್ಯಕತೆ ಬೇಕಿದೆ ಎಂದು ಅಸಮಾಧಾನ ಹೊರಹಾಕಿದರಲ್ಲದೇ, ಪಾಂಡವಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬಂದಾಗ ಘೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಇನ್ನೂ ನಾಲ್ಕುವರೆ ವರ್ಷಗಳ ಕಾಲ ಅಧಿಕಾರದಲ್ಲಿ ಇರಲಿದೆ ಹೀಗಾಗಿ ಪಕ್ಷಕ್ಕೆ ನಿಷ್ಠೆಯಿಂದ ದುಡಿದವರಿಗೆ ನಾಮ ನಿರ್ದೇಶನ ಸೇರಿದಂತೆ ಹಲವು ಅವಕಾಶಗಳು ದೊರೆಯಲಿದೆ. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬಹುಮತ ಕೊಡಿಸುವ ನಿಟ್ಟಿನಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳು ಜನರಿಗೆ ಪ್ರಾಮಾಣಿಕವಾಗಿ ತಲುಪಿದೆಯೇ, ಇಲ್ಲ ಏನಾದರೂ ಲೋಪದೋಷವಾಗಿದೆಯೇ ಎಂಬುದನ್ನು ಮನೆ ಮನೆಗೆ ತೆರಳಿ ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ರಚಿಸಲು ತೀರ್ಮಾನ ಮಾಡಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಹೋಬಳಿವಾರು ನಿಷ್ಠಾವಂತ ಕಾರ್ಯಕರ್ತರನ್ನು ಸಮಿತಿಗೆ ಗುರುತಿಸಿ ಪಟ್ಟಿ ಸಿದ್ದಪಡಿಸಿಕೊಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪಕ್ಷದ ಕಿಸಾನ್ ಘಟಕದ ಸಿ.ಆರ್.ರಮೇಶ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಟೌನ್ ಅಧ್ಯಕ್ಷ ಕೆ.ಉಮಾಶಂಕರ್, ಪುರಸಭೆ ಮಾಜಿ‌ ಅಧ್ಯಕ್ಷ ಹಾರೋಹಳ್ಳಿ ಡಿ.ಹುಚ್ಚೇಗೌಡ, ಕಾಂಗ್ರೆಸ್ ಮುಖಂಡರಾದ ಸಿದ್ದಲಿಂಗಯ್ಯ, ಎಂ.ಕೆ.ಸತ್ಯೇಂದ್ರಕುಮಾರ್, ಚಿಕ್ಕಬ್ಯಾಡರಹಳ್ಳಿ ಧರ್ಮಣ್ಣ, ಎಚ್.ಎನ್.ದಯಾನಂದ, ಹರಳಹಳ್ಳಿ ದಯಾನಂದ, ಶ್ಯಾದನಹಳ್ಳಿ‌ ನರೇಂದ್ರಬಾಬು, ಮೋಹನ್ ಕುಮಾರ್, ಯೋಗಣ್ಣ, ಮಹ್ಮದ್ ಹನೀಫ್ (ಪಾಪು), ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಂತನಹಳ್ಳಿ‌ ಬಸವರಾಜು ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ

Most Popular

Recent Comments