Friday, February 23, 2024
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ
Homeರಾಜಕೀಯಲೋಕಸಭಾ ಚುನಾವಣೆಯಲ್ಲಿ ತಟಸ್ಥ : ಮಧು ಜಿ.ಮಾದೇಗೌಡ

ಲೋಕಸಭಾ ಚುನಾವಣೆಯಲ್ಲಿ ತಟಸ್ಥ : ಮಧು ಜಿ.ಮಾದೇಗೌಡ

ಮಂಡ್ಯ :- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಟಸ್ಥನಾಗಿ ಉಳಿಯಲು ನಿರ್ಧರಿಸಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಘೋಷಿಸಿದರು.
ನಗರದ ಪಿ ಎಲ್ ಡಿ ಬ್ಯಾಂಕ್ ನಲ್ಲಿ ಜಿ. ಮಾದೇಗೌಡ ಸಭಾಂಗಣ ಲೋಕಾರ್ಪಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಇದೆ, ನಾನಂತೂ ತಟಸ್ಥವಾಗಿರಲು ನಿರ್ಧರಿಸಿದ್ದೇನೆ.ಇದಕ್ಕೆ ಸೂಕ್ತ ಕಾಲದಲ್ಲಿ ಉತ್ತರ ನೀಡಲಿದ್ದೇನೆ ಎಂದು ಹೇಳಿದರು.
ಸುಮಲತಾ ಅಂಬರೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರಾ ಎಂಬ ಪ್ರಶ್ನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದೆ, ಗೊಂದಲ ಇರುವುದರಿಂದ ನಾನು ತಟಸ್ಥವಾಗಿರುತ್ತೇನೆ ಎಂದು ಉತ್ತರಿಸಿದರು.
ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ತಲೆ ಸರಿ ಇಲ್ಲ ಆತನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯ ಇಲ್ಲ, ನಮ್ಮೂರಲ್ಲೂ ರಾಮ ಮಂದಿರ ಇದೆ, ನಾನು ಅಲ್ಲಿಯ ಪೂಜೆ ಮಾಡಿ ಕೊಳ್ಳುತ್ತೇನೆ, ಚುನಾವಣೆ ಗೋಸ್ಕರ ಬಿಜೆಪಿ ಪಕ್ಷದವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುತ್ತಿದ್ದಾರೆ, ಚುನಾವಣೆ ಬರುತ್ತಿದೆ ಎಂದರೆ ಪುಲ್ವಾಮಾ ದಾಳಿ ಕೂಡ ನಡೆಯುತ್ತೆ, ರಾಮ ಮಂದಿರವೂ ಉದ್ಘಾಟನೆ ಆಗುತ್ತೆ ಎಂದರು.
ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಯಾಗಿ ಮುಂದುವರೆಯಲಿದ್ದಾರೆ ಎಂಬ ಯತೀಂದ್ರ ಅವರ ಹೇಳಿಕೆಗೆ ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ, ಅದು ಅವರ ವೈಯಕ್ತಿಕ ಅಭಿಪ್ರಾಯ, ಅದರ ಹಿಂದೆ ಏನು ಅಡಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ

Most Popular

Recent Comments