Friday, February 23, 2024
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ
HomeUncategorizedಫೆ.7 ರಂದು ಸರ್ಕಾರಿ ನೌಕರರ ಧರಣಿ

ಫೆ.7 ರಂದು ಸರ್ಕಾರಿ ನೌಕರರ ಧರಣಿ

ಮಂಡ್ಯ :-ಏಳನೇ ವೇತನ ಆಯೋಗದ ವರದಿಯನ್ನು ಶೇಕಡ 40 ರಷ್ಟು ವೇತನ ಪುರಸ್ಕರಣೆಯೊಂದಿಗೆ ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜ 7 ರಂದು ಬೃಹತ್ ಪ್ರತಿಭಟನಾ ಧರಣಿಗೆ ಎಂದು ರಾಜ್ಯ ಸರ್ಕಾರದ ವಿವಿಧ ಇಲಾಖಾ ಹಾಗೂ ವೃಂದ ಸಂಘಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಸಂಚಾಲಕ ಟಿ ಎಸ್ ಸುನಿಲ್ ಕುಮಾರ್,7ನೇ ವೇತನ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಮುಂದೂಡಿಕೆ ಮಾಡಿರುವುದ ರಿಂದ ವರದಿ ಜಾರಿ ವಿಳಂಬವಾಗುತ್ತಿದೆ, ಸರ್ಕಾರದ ಇಂತಹ ನಿರ್ಲಕ್ಷ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅಂದಿನ ಧರಣಿಯಲ್ಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಶೇ. 40 ರಷ್ಟು ಹೆಚ್ಚಳದೊಂದಿಗೆ 7ನೇ ವೇತನ ಪರಿಷ್ಕರಣೆಯನ್ನು ಕೂಡಲೇ ಜಾರಿಗೊಳಿಸಬೇಕು ರಾಜ್ಯದ ಎಲ್ಲಾ ನೌಕರರಿಗೂ ಪಿಎಫ್ಆರ್‌ಡಿಎ ಕಾಯ್ದೆ, ಹೊಸ ಪಿಂಚಣಿ ಪದ್ದತಿ ರದ್ದುಪಡಿಸಿ ಹಳೇಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು,ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿಮಾಡಬೇಕು.
ಗುತ್ತಿಗೆ,ಹೊರಗುತ್ತಿಗೆ ಅರೆಕಾಲಿಕ ನೇಮಕಾತಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು,ಇವರ ವೇತನವನ್ನು ಸರ್ಕಾರಿಂದ ನೇರವಾಗಿ ಖಾತೆಗೆ ಜಮಾ ಮಾಡುವುದು. ಅಲ್ಲದೆ ನೇರ ನೇಮಕಾತಿಗಳಲ್ಲಿ ಖಾಯಂಗೊಳಿಸ ಬೇಕು ಎಂದು ಒತ್ತಾಯಿಸಿದರು
ಇನ್ನು ಮುಂದೆ ಗುತ್ತಿಗೆ,ಹೊರಗುತ್ತಿಗೆ ನೇಮಕಾತಿಯನ್ನು ಕೈಬಿಟ್ಟು ಖಾಯಂ ನೇಮಕಾತಿ ಮಾಡಿಕೊಳ್ಳಲು ಮುಂದಾಗಬೇಕು, ಕೋವಿಡ್ ನೆಪದಲ್ಲಿ ತಡೆಹಿಡಿಯಲಾಗಿರುವ 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ ಮಾಡಬೇಕು,ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಶೀಘ್ರ ಪರಿಷ್ಕರಣೆ ಮಾಡಿ, ಜೇಷ್ಠತಾ ಪಟ್ಟಿ ಸಿದ್ಧಪಡಿ ನಿಯಮಾನುಸಾರ ಪದೋನ್ನತಿ ನೀಡಲು ಸರ್ಕಾರ ಮುಂದಾಗಬೇಕು,ಆಡಳಿತ ಸುಧಾರಣೆಗಳ ನೆಪದಲ್ಲಿ ಇಲಾಖೆಗಳ ವಿಲೀನ,ನೌಕರರ ಸಂಖ್ಯೆ ಕಡಿತ, ಸಾರ್ವಜನಿಕ ಉದ್ದಿಮೆ,ಸರ್ಕಾರದ ಯೋಜನೆಗಳ ಖಾಸಗೀಕರಣ, ಹೊರಗುತ್ತಿಗೆ ನೇಮಕಾತಿ ಪ್ರಸ್ತಾವನೆಗಳನ್ನು ಕೈಬಿಡ ಬೇಕು,ಬಡ್ತಿ ಮೀಸಲಾತಿ ಕಾಯ್ದೆ ಸಂಪೂರ್ಣ ಅನುಷ್ಠಾನಗೊಂಡು ಬ್ಯಾಕ್ ಲಾಗ್‌ ಹುದ್ದೆ ಭರ್ತಿ ಮಾಡಬೇಕು,ರಾಜ್ಯದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲಿನ ಕೆಲಸದ ಒತ್ತಡ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲುತಜ್ಞರ ಸಮಿತಿ ನೇಮಕ ಮಾಡಲು ಮುಂದಾಗಬೇಕು,ಎಲ್ಲಾ ನೌಕರರಿಗೂ ಹಾಗೂ ಎಲ್ಲಾ ನಿವೃತ್ತರಿಗೂ ನಗದು ರಹಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಬೇಕು,ಮಹಿಳಾ ನೌಕರರ ಮೇಲಿನ ದೌರ್ಜನ್ಯ ತಡೆಗಟ್ಟಲು ಮುಂದಾಗಬೇಕು, ಅನುದಾನಿತ ಶಾಲಾ,ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 60
ಬೋಧಕ,ಭೋದಕೇತರ ನಿಶ್ಚಿತ ಪಿಂಚಣಿ ಸೌಲಭ್ಯ ಮರುಸ್ಥಾಪಿಸಬೇಕು,ಕರ್ನಾಟಕ ರಾಜ್ಯ ನಾಗರೀಕ ಸೇವಾ (ನಡತೆ) ನಿಯಮ(2021) ಗಳಲ್ಲಿನ ನೌಕರ-ವಿರೋಧಿ ಅಂಶಗಳನ್ನು ಕೈಬಿಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ,ಮಹದೇವ ಎನ್, ಜಿ.ವಿ ಶಿವಕುಮಾರ್.ಟಿ.ಎ ಪ್ರಶಾಂತ್ ಬಾಬು,ರೇಣುಕಾ, ಶೈಲಜಾ ಎಂ.ಎಸ್,ಸಿದ್ದರಾಜು ಇತರರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

- Advertisment -
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ

Most Popular

Recent Comments