Friday, February 23, 2024
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ
HomeUncategorizedಕೆರಗೋಡು l ಸರ್ಕಾರಿ ಶಾಲೆಯ ಗಣರಾಜ್ಯೋತ್ಸವದಲ್ಲಿ ಆರ್ ಎಸ್ ಎಸ್ ಮುಖಂಡ ಧ್ವಜಾರೋಹಣ,ಜೈ ಶ್ರೀರಾಮ್...

ಕೆರಗೋಡು l ಸರ್ಕಾರಿ ಶಾಲೆಯ ಗಣರಾಜ್ಯೋತ್ಸವದಲ್ಲಿ ಆರ್ ಎಸ್ ಎಸ್ ಮುಖಂಡ ಧ್ವಜಾರೋಹಣ,ಜೈ ಶ್ರೀರಾಮ್ ಮುದ್ರಿತ ಲಾಡು ಪ್ಯಾಕೇಟ್ ವಿತರಣೆ

ಮಂಡ್ಯ :- ಕೆರಗೋಡು ಹನುಮದ್ವಜ ಪ್ರಕರಣ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲಿ ಗಣರಾಜ್ಯೋತ್ಸವ ದಿನದಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಮಕ್ಕಳನ್ನು ವಿವಾದಿತ ಸ್ಥಳಕ್ಕೆ ಕರೆದೊಯ್ದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ಧ್ವಜಾರೋಹಣ ದಲ್ಲಿ ಭಾಗಿಯಾಗಿರುವುದು ಮತ್ತು ಅದೇ ದಿನ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಆರ್ ಎಸ್ ಎಸ್ ಸಂಚಾಲಕರಿಂದ ಧ್ವಜಾರೋಹಣ ಮಾಡಿಸಿದ್ದಲ್ಲದೆ ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂದು ಪ್ರತಿಜ್ಞಾವಿಧಿ ಬೋಧಿಸಿ ಜೈ ಶ್ರೀ ರಾಮ್ ಚಿಹ್ನೆ ಮುದ್ರಿತ ಇರುವ ಕವರ್ ನಲ್ಲಿ ಲಾಡು ವಿತರಿಸಿರುವುದು ಬೆಳಕಿಗೆ ಬಂದಿದೆ.

Img 20240205 140356

Img 20240205 Wa0147

Img 20240205 Wa0146

ಕೆರಗೋಡು ಗ್ರಾಮದ ಸರ್ಕಾರ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಶೀಲಮ್ಮ ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಒಂದು ಧರ್ಮದ ಪರ ಒಲವು ತೋರಿದ ಬಗ್ಗೆ ಶಾಲೆಯ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು ಶಾಲಾ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದಾರೆ.
ಇಲಾಖೆಯ ಉಪನಿರ್ದೇಶಕರು, ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರಾದ ಸಂತೋಷ್ ಕುಮಾರ್ ಕೆ.ಎಂ, ಲೋಕೇಶ್,ಕೆ.ಸಿ ಉಮಾಶಂಕರ್ ಸೇರಿದಂತೆ ಹಲವರು ದೂರು ಸಲ್ಲಿಸಿ ಶಿಕ್ಷಕಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕೆರಗೋಡು ಗ್ರಾಮದ ಸರ್ಕಾರ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸುಶೀಲಮ್ಮ ಇಲಾಖಾ ನಿಯಮ ಉಲ್ಲಂಘಿಸಿ ಜ.26 ರಂದು 75 ನೇ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರಸ್ತುತ ಎಸ್ ಡಿ ಎಂ ಸಿ ಅಧ್ಯಕ್ಷರು ಲಭ್ಯವಿದ್ದರೂ ಕೂಡ ಅವರನ್ನು ಪರಿಗಣಿಸದೆ ಉದ್ದೇಶಪೂರ್ವಕವಾಗಿ ಧ್ವಜಾರೋಹಣವನ್ನು ತಾಲ್ಲೂಕು ಆರ್.ಎಸ್.ಎಸ್ ಸಂಚಾಲಕ, ಪಂಚೆಗೌಡನ ದೊಡ್ಡಿ ಗ್ರಾಮದ ಗ್ರಾಪಂ ಸದಸ್ಯರು ಆದ ಮಹೇಶ್ ಕೆ.ಜಿ ಅವರಿಂದ ಮಾಡಿಸಿ ಸರ್ಕಾರಿ ಶಾಲೆಯಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದರೂ ಶಿಕ್ಷಕಿ ಒಂದು ಧರ್ಮದ ಕಡೆಗೆ ಹೆಚ್ಚು ಒಲವನ್ನು ಮೂಡಿಸಿ. ನಾವೆಲ್ಲಾ ಹಿಂದೂ ನಾವೆಲ್ಲ ಒಂದು ಎಂದು ಪ್ರತಿಜ್ಞಾವಿಧಿ ಮಾಡಿಸಿದ್ದಾರೆ.
ಇದೇ ವೇಳೆ ಜ. 22 ರಂದು ಅಯೋಧ್ಯೆ ರಾಮ ಮಂದಿರ ಪ್ರತಿಷ್ಠಾಪನೆಗೆ ತಯಾರಿಸಿದ್ದ ಜೈ ಶ್ರೀ ರಾಮ್ ಚಿಹ್ನೆ ಮುದ್ರಿತ ಇರುವ ಲಾಡನ್ನು ಗಣರಾಜ್ಯೋತ್ಸವ ದಿನದಂದು ಶಾಲೆಯ ಮಕ್ಕಳಿಗೆ ಸಿಹಿ ವಿತರಿಸಿದ್ದಾರೆ. ಮಕ್ಕಳ ಗಮನ ಸೆಳೆಯಲು ಜೈಶ್ರೀರಾಮ್ ಚಿಹ್ನೆ ಮುದ್ರಿತ ಲಾಡ್ ಪ್ಯಾಕೇಟ್ ನ್ನು ವಿತರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಶಾಲಾ ಅಭಿವೃದ್ಧಿ ಸಮಿತಿಯಲ್ಲಿ ಚರ್ಚಿಸಿದೆ ಪೋಷಕರ ಒಪ್ಪಿಗೆ ಪಡೆಯದೆ ಇಲಾಖೆ ಅನುಮತಿ ಪಡೆಯದೆ ಶಾಲೆಯಲ್ಲಿನ ಗಣರಾಜ್ಯೋತ್ಸವ
ಕಾರ್ಯಕ್ರಮದ ಮಧ್ಯಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳೊಡನೆ ಪ್ರಸ್ತುತ ವಿವಾದಿತ ಸ್ಥಳದಲ್ಲಿರುವ ಬಸ್‌ ನಿಲ್ದಾಣದ ಮುಂಭಾಗದ ಆವರಣದಲ್ಲಿ ಗೌರಿಶಂಕರ ಸೇವಾ ಟ್ರಸ್ಟನ ಧ್ವಜಾರೋಹಣ ಕಾರ್ಯ ಕ್ರಮಕ್ಕೆ ಒಂದು ಧರ್ಮದ ಪರವಾಗಿ ಏಕಾ-ಏಕಿಯಾಗಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ತನ್ನ ಶಾಲಾ ವಿದ್ಯಾರ್ಥಿಗಳೊಡನೆ ಭಾಗಿಯಾಗಿ ಸರ್ಕಾರಿ ನಿಯಮಗಳನ್ನು ಮಿರಿ ಸರ್ವಾಧಿಕಾರಿ ಧೋರಣೆ ತೋರಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸುಶೀಲಮ್ಮ ಕೆರಗೋಡಿನಲ್ಲಿ ಬದಲಾವಣೆಗೆ ಕಾರಣರಾಗಿ, ಆರ್.ಎಸ್.ಎಸ್ ಸಂಚಾಲಕರ ಜೊತೆ ನಿರಂತರವಾಗಿ, ಶಾಲೆಯಲ್ಲಿ ಹಿಂದೂಧರ್ಮದ ಪರವಾಗಿ ಮಕ್ಕಳ ಮನಸ್ಸಿನಲ್ಲಿ ಹಿಂದೂತ್ವವನ್ನು ಬಿತ್ತಿ ಗೊಂದಲ ಮೂಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಲೆಕ್ಕಿಸದೆ ಪ್ರತ್ಯೇಕ್ಷವಾಗಿ ಶಾಲಾ ಶಿಕ್ಷಣ ಇಲಾಖೆಗೆ ಅವಮಾನ ಮಾಡಿದ್ದಾರೆ. ಹಾಗೂ ಸಮುದಾಯ ಮತ್ತು ಶಾಲೆಯಲ್ಲಿ ಒಡಕು ಮೂಡಿಸಿದ್ದಾರೆ. ಹೀಗಾಗಿ ಮುಖ್ಯ ಶಿಕ್ಷಕರ ಮೇಲೆ ಶಿಸ್ತು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ

Most Popular

Recent Comments