Friday, February 23, 2024
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ
HomeUncategorizedಮಂಡ್ಯ l ಆಫೆ ಆಟೋ ಚಾಲಕರ ಪ್ರತಿಭಟನೆ

ಮಂಡ್ಯ l ಆಫೆ ಆಟೋ ಚಾಲಕರ ಪ್ರತಿಭಟನೆ

ಮಂಡ್ಯ :- ಅಫೆ ಆಟೋಗಳಿಗೆ ಮಂಡ್ಯ ನಗರ ಪ್ರವೇಶ ನಿರ್ಬಂಧ ಮಾಡದೆ ಎಲ್ಲಾ ಮಾದರಿ ಆಟೋದವರಿಗೆ ಒಂದೇ ರೀತಿಯ ನ್ಯಾಯ ದೊರಕಿಸಿಕೊಡಬೇಕು ಎಂದು ಆಫೆ ಆಟೋ ಚಾಲಕರು ಮತ್ತು ಮಾಲೀಕರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ಜಯ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ನಗರದ ಮೈಶುಗರ್ ವೃತದಿಂದ ಆಫೆ ಪ್ರಯಾಣಿಕರ ಆಟೋ ಚಾಲಕರು ಮೆರವಣಿಗೆ ಹೊರಟು ನೀವು ಬದುಕಿ ನಮ್ಮನ್ನು ಬದುಕಲು ಬಿಡಿ ಎಂಬ ಘೋಷಣೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸಿದ ನಂತರ ಆಟೋ ನಂಬಿ ಬದುಕುತ್ತಿದ್ದ ಚಾಲಕರು ಮತ್ತು ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಡ್ಯ ನಗರದಲ್ಲಿ ಸಂಚರಿಸುವ ಪ್ರಯಾಣಿಕರ ಆಟೋದವರು ಆಫೆ ಆಟೋ ದವರು ನಗರ ಪ್ರದೇಶದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಸಂಚಾರ ಮಾಡುತ್ತಾರೆ ಎಂದು ತಪ್ಪಾಗಿ ಭಾವಿಸಿದ್ದಾರೆ, ಇದು ಸರಿಯಲ್ಲ,ಆಫೆ ಆಟೋಗಳು ಗ್ರಾಮೀಣ ಪ್ರದೇಶದಲ್ಲಿ ಪ್ರಯಾಣಿಕರನ್ನು ಹೊತ್ತಿಸಿಕೊಂಡು ಮಂಡ್ಯದ ಬಸ್ ನಿಲ್ದಾಣ, ರೈಲು ನಿಲ್ದಾಣ ಹತ್ತಿರ ಇಳಿಸಿ ಮತ್ತೆ ಗ್ರಾಮೀಣ ಪ್ರದೇಶಕ್ಕೆ ಖಾಲಿ ಹೋಗುತ್ತಿವೆ ಎಂದು ಹೇಳಿದರು.
ಮಂಡ್ಯ ನಗರ ಪ್ರದೇಶದ ಸುತ್ತಳತೆ ಕೇವಲ ಮೂರು ಕಿಲೋಮೀಟರ್ ಇದೆ, ಪ್ರಯಾಣಿಕರ ಆಟೋಗೆ 12 ಕಿ. ಮೀ. ಆಫೆ ಆಟೋದವರಿಗೆ ಎಂಟು ಕಿ.ಮೀ ಸಂಚರಿಸಲು ಪರ್ಮಿಟ್ ನೀಡಲಾಗಿದೆ, ಹಳ್ಳಿಗಳಿಂದ ನಗರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಆಫೆ ಆಟೋಗಳು ಬರುತ್ತಿವೆ ಹೊರತು ನಗರದಲ್ಲಿ ಬಾಡಿಗೆ ಹೊಡೆಯುತ್ತಿಲ್ಲ, ನಗರದ ಸಂಚರಿಸುವ ಆಟೋಗಳು ಪ್ರಯಾಣಿಕರು, ಶಾಲಾ ಮಕ್ಕಳು ಹಾಗೂ ಸರಕು ತುಂಬಿಕೊಂಡು ಹಳ್ಳಿಗಳಿಗೆ ಬರುತ್ತಾರೆ ಮತ್ತೆ ಅಲ್ಲಿಂದ ಪ್ರಯಾಣಿಕರನ್ನು ತುಂಬಿಕೊಂಡು ನಗರಕ್ಕೆ ಬರುತ್ತಾರೆ ನಾವು ಕಂಡರೂ ಸಹ ಪ್ರಶ್ನಿಸಿಲ್ಲ ಎಂದು ತಿಳಿಸಿದರು.
ಎಲ್ಲರೂ ಸಹ ಸಾಲ ಮಾಡಿ ಆಟೋ ಖರೀದಿ ಮಾಡಿರುತ್ತಾರೆ, ಯಾರ ಆದಾಯಕ್ಕೂ ಕತ್ತರಿ ಬೀಳಬಾರದು ಎಂಬ ಮನೋಭಾವ ನಮ್ಮದು, ನಾವೆಲ್ಲರೂ ಒಗ್ಗೂಡಿ ಸಹಜೀವನ ನಡೆಸಬೇಕು, ನಮ್ಮ ಜೀವನಕ್ಕೆ ನಾವು ಕಲ್ಲು ಹಾಕಿಕೊಳ್ಳಬಾರದು, ಈಗಾಗಲೇ ಸಾಲ ತೀರಿಸಲು ಸಾಧ್ಯವಾಗದೆ ಆಫೆ ಆಟೋದ ಏಳು ಚಾಲಕರು ನೇಣಿಗೆ ಕೊರಳೋಡ್ಡಿದ್ದಾರೆ, ನಮ್ಮ ಪರಿಸ್ಥಿತಿಯನ್ನು ಕೂಡ ಅರಿತುಕೊಂಡು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ನಗರ ಪ್ರದೇಶದಲ್ಲಿ ಆಫೆ ಆಟೋ ಗಳಿಗೆ ದಂಡ ಹಾಕುತ್ತಿರುವುದನ್ನು ನಿಲ್ಲಿಸಬೇಕು, ಎಲ್ಲಾ ಮಾದರಿ ಆಟೋಗಳಿಗೆ ಒಂದೇ ರೀತಿಯ ನ್ಯಾಯ ದೊರಕಿಸಿಕೊಡಿ ಇಲ್ಲದಿದ್ದರೆ ದಯಾಮರಣ ಕಲ್ಪಿಸಿ ಎಂದು ಒತ್ತಾಯಿಸಿದರು.
ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಯೋಗಣ್ಣ, ಕಾಂಗ್ರೆಸ್ ಮುಖಂಡ ವಿಶ್ವನಾಥ್, ಆಟೋ ಚಾಲಕರ ಮುಖಂಡರಾದ ಪುನೀತ್, ಕಾಂತರಾಜ್, ಮಧುಕುಮಾರ್ ಉಮ್ಮಡಹಳ್ಳಿ, ಕಾಶಿ ಹೆಗಡೆ, ವೆಂಕಟೇಶ್, ಚೇತನ್, ಪ್ರದೀಪ್, ಅಭಿ ನೇತೃತ್ವ ವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ

Most Popular

Recent Comments