Friday, February 23, 2024
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ
HomeUncategorizedಕೇಂದ್ರದ ಅಧಿಕಾರ ದುರ್ಬಳಕೆ, ಹಸ್ತಕ್ಷೇಪದ ವಿರುದ್ಧ ಸಿಪಿಐಎಂ ಪ್ರತಿಭಟನೆ

ಕೇಂದ್ರದ ಅಧಿಕಾರ ದುರ್ಬಳಕೆ, ಹಸ್ತಕ್ಷೇಪದ ವಿರುದ್ಧ ಸಿಪಿಐಎಂ ಪ್ರತಿಭಟನೆ

ಮಂಡ್ಯ :- ರಾಜ್ಯ ಸರ್ಕಾರಗಳ ಮೇಲೆ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ದೇಶದ ಒಕ್ಕೂಟ ಸರ್ಕಾರ ನಿಲ್ಲಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್ ವಾದಿ ), ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸರ್ ಎಂ ವಿ ಪ್ರತಿಮೆಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯಲು ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು, ಕರ್ನಾಟಕ ರಾಜ್ಯಕ್ಕೆ ಬರಗಾಲದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು, ಒಕ್ಕೂಟ ಸರ್ಕಾರ ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವಂತೆ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯಪ್ರವೇಶ ಮಾಡಬಾರದು, ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿ ಇ.ಡಿ,ಸಿಬಿಐ, ಆದಾಯ ತೆರಿಗೆ ವಿಭಾಗಗಳನ್ನ ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು, ರಾಜ್ಯ ಸರ್ಕಾರಗಳ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಸಂವಿಧಾನಾತ್ಮಕ ಸ್ಥಾನದ ದುರುಪಯೋಗ ತಡೆಯಬೇಕು, ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ತಡೆಯಬೇಕು, ರಾಜ್ಯದ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು ಹಾಗೂ ವಿಳಂಬ ಮಾಡದೆ ಸಹಿ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಕೃಷಿ ಕೂಲಿಕಾರ ಸಂಘದ ರಾಜ್ಯಾಧ್ಯಕ್ಷ ಎಂ ಪುಟ್ಟಮಾದು. ಸಿಪಿಎಂ ಪಕ್ಷದ ಸಿ. ಕುಮಾರಿ,ಬಿ ಹನುಮೇಶ್. ಬಿ.ಎಂ ಶಿವಮಲ್ಲಯ್ಯ, ಸರೋಜಮ್ಮ, ಎಸ್. ಸುರೇಂದ್ರ, ಅಮಾಸಯ್ಯ, ಆರ್.ರಾಜು, ಅಬ್ದುಲ್ಲಾ, ಕಪನಿ ಗೌಡ ನೇತೃತ್ವ ವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
ಅತೀ ಕಡಿಮೆ ಬೆಲೆಯಲ್ಲಿ ವೆಬ್ ಸೈಟ್‌ ಮಾಡಿಕೊಡಲಾಗುತ್ತದೆ

Most Popular

Recent Comments