ಮಂಡ್ಯ :- ವಿಧಾನಪರಿಷತ್ ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಜಿಲ್ಲೆಯಲ್ಲಿ ಶೇ 91.60 ರಷ್ಟು ನಡೆದಿದೆ
ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ಸಂಪೂರ್ಣ ಶಾಂತಿಯುತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.
ಜಿಲ್ಲೆಯಲ್ಲಿ 5403 ಮತದಾರರ ಪೈಕಿ 4949 ಮತದಾರರು ಹಕ್ಕು ಚಲಾಯಿಸಿದ್ದು ಅತ್ಯಧಿಕ ಮತದಾನ ನಡೆದಿದೆ.
ಜಿಲ್ಲೆಯ 9 ಮತಗಟ್ಟೆಗಳಲ್ಲಿ ಬೆಳಿಗ್ಗೆ
ಮತದಾನ ಆರಂಭದ ಸಂದರ್ಭದಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು. ಹೊತ್ತು ಕಳೆದಂತೆ ಮತಗಟ್ಟೆಯತ್ತ ಮತದಾರರು ಆಗಮಿಸಿ ಹಕ್ಕು ಚಲಾಯಿಸಿದರು,
ಮತಗಟ್ಟೆಯ ಹೊರಭಾಗದಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ನಿರತರಾಗಿ ಮತಯಾಚಿಸಿದರು,
ಜಿಲ್ಲಾ ಕೇಂದ್ರ ಮಂಡ್ಯ ನಗರದ ತಾಲೂಕು ಕಚೇರಿಯ ಎರಡು ಮತ ಕೇಂದ್ರ ಮತ್ತು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತೆರೆದಿರುವ ಮತಗಟ್ಟೆಯಲ್ಲಿ
ಪ್ರೌಢಶಾಲೆಗಳ ಶಿಕ್ಷಕರು, ಪಿಯು ಹಾಗೂ ಪದವಿ ಕಾಲೇಜುಗಳ ಉಪನ್ಯಾಸಕರು, ಪ್ರಾಧ್ಯಾಪಕರು, ವಿಶ್ವವಿದ್ಯಾಲಯಗಳ ಬೋಧಕರು ತಮ ಪ್ರಾಶಸ್ತ್ರದ ಮತ ಹಾಕಿದರು.
ತಾಲೂಕು ಕೇಂದ್ರಗಳಾದ ಮಳವಳ್ಳಿ, ಮದ್ದೂರು, ನಾಗಮಂಗಲ, ಪಾಂಡವಪುರ ಕೆ ಆರ್ ಪೇಟೆ ಹಾಗೂ ಶ್ರೀರಂಗಪಟ್ಟಣದ ಮಿನಿ ವಿಧಾನಸೌಧದ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು,ಸುಶಿಕ್ಷಿತ ಮತದಾರರು ಮತಗಟ್ಟೆಗಳ ಎದುರು ಸರದಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುವ ಮೂಲಕ ಮತದ ಮಹತ್ವ ಸಾರಿದ್ದಾರೆ.
ಕ್ಷೇತ್ರ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ಒಟ್ಟಾರೆ 11,998 ಪುರುಷರು, 9,550 ಮಹಿಳೆಯರು, ಒಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 21,549 ಮತದಾರರು ಇದ್ದು ಈ ಪೈಕಿ ಮೈಸೂರು-10,439, ಚಾಮರಾಜನಗರ-2,181, ಹಾಸನ- 3,526, ಮಂಡ್ಯ ಜಿಲ್ಲೆಯಲ್ಲಿ 5403 ಸುಶಿಕ್ಷಿತರು ಮತ ಹಕ್ಕು ಹೊಂದಿದ್ದರು,
ಕಾಂಗ್ರೆಸ್‌ನ ಮರಿತಿಬ್ಬೇಗೌಡ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ, ನಾಗೇಂದ್ರ ಬಾಬು (ಕೆಜೆಪಿ), ಮಾಜಿ ಶಾಸಕ ವಾಟಾಳ್ ನಾಗರಾಜ್ (ಕನ್ನಡ ಚಳವಳಿ ವಾಟಾಳ್ ಪಕ್ಷ), ಹಾಗೂ ಪಕ್ಷೇತರರಾದ ಅನಿಲ್ ಕುಮಾರ್, ಅಂಬರೀಷ್, ನಿವೃತ್ತ ಡಿಡಿಪಿಯು ನಾಗಮಲ್ಲೇಶ್, ನಿಂಗರಾಜು ಎಸ್, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ, ಬಿಎಸ್ಪಿ ಬೆಂಬಲಿತ ಅಭ್ಯರ್ಥಿ ಆರ್. ಮಹೇಶ್, ರಾಜು ಕೆ.ರವರ ರಾಜಕೀಯ ಭವಿಷ್ಯದ ಹಣೆಬರಹ ಬರೆದಿದ್ದು, ಜೂನ್ 6 ರಂದು ಫಲಿತಾಂಶ ಹೊರ ಬಿಳಲಿದೆ.