ಮಳವಳ್ಳಿ :- ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರ ತಂದೆ ಪಿ.ಎಲ್.ಮಲ್ಲಯ್ಯ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.
ಮೃತರು ಪತ್ನಿ ಮಹದೇವಮ್ಮ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಸ್ವಗ್ರಾಮ ಮಳವಳ್ಳಿ ತಾಲೂಕಿನ ಪೂರಿಗಾಲಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಪಿ.ಎಲ್ ಮಲ್ಲಯ್ಯ ರವರು ತಾಲ್ಲೂಕು ಬೋರ್ಡ್ ಸದಸ್ಯರಾಗಿ, ಪೂರಿಗಾಲಿ ಗ್ರಾಮ ಪಂಚಾಯತಿ, ಹಾಲು ಉತ್ಪಾದಕರ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.