ಮಂಡ್ಯ :- ರಾಜ್ಯ ಕಾಂಗ್ರೆಸ್ ಸರ್ಕಾರ ಸಕಾಲದಲ್ಲಿ ಅನುದಾನ ಒದಗಿಸಿದ ಹಿನ್ನೆಲೆಯಲ್ಲಿ ಮೈಷುಗರ್ ಕಾರ್ಖಾನೆ ಸುಸ್ಥಿತಿಯಲ್ಲಿ ಮುನ್ನಡೆಯುತ್ತಿದ್ದರು ಕಾರ್ಖಾನೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಪಕ್ಷದ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಪಕ್ಷದ ಕಿಸಾನ್ ಘಟಕದ ಆಶ್ರಯದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಮೈಷುಗರ್ ಉಳಿಸಿ ರೈತರ ಹಿತ ಕಾಪಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಜಿಲ್ಲೆಗೆ ಸಿಹಿ ನೀಡಿದೆ ಎಂದು ಸಕ್ಕರೆ ತಿನ್ನುವ ಮೂಲಕ ಸಂಭ್ರಮಿಸಿದರು.
ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ನಿರಂತರವಾಗಿ ಸಾಗಿದ್ದು,ಸಕಾಲದಲ್ಲಿ ಒಪ್ಪಿಗೆ ಕಬ್ಬನ್ನು ಕಟಾವು ಮಾಡಲಾಗುತ್ತಿದೆ ಆದರೆ ಖಾಸಗಿ ಕಂಪನಿಗಳ ಜೊತೆ ಶಾಮೀಲಾಗಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು ಎರಡು ದಿನ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಸ್ಥಗಿತ ಮಾಡಿದ್ದನ್ನು ನೆಪ ಮಾಡಿಕೊಂಡು ಕಾರ್ಖಾನೆ ವಿರುದ್ಧ ಅಪಪ್ರಚಾರ ಮಾಡಿದ್ದಾರೆ, ಬೇವಿನ ಸೊಪ್ಪು ತಿಂದು ರೈತರಿಗೆ ಕಹಿ ನೀಡಲಾಗಿದೆ ಎಂದು ಜನರನ್ನು ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾರ್ಖಾನೆಯನ್ನು ಮುಚ್ಚಲು ಪ್ರಯತ್ನ ಮಾಡಿದ್ದರು ಅಷ್ಟೇ ಅಲ್ಲದೆ ಖಾಸಗಿಕರಣ ಮಾಡುವ ಹುನ್ನಾರ ಮಾಡಿದ್ದರು ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಕೋಟಿ ಅನುದಾನ ನೀಡಿ ಕಾರ್ಖಾನೆ ಆರಂಭಕ್ಕೆ ನಾಂದಿ ಹಾಡಿದರು ಅಲ್ಲದೆ ನಿರಂತರವಾಗಿ ಕಾರ್ಖಾನೆಗೆ ಅನುದಾನ ನೀಡುತ್ತಾ ಬಂದಿದ್ದಾರೆ, ಕಾರ್ಖಾನೆ ಅಭಿವೃದ್ಧಿಗೆ ಕಂಕಣಬದ್ಧರಾಗಿದ್ದಾರೆ, ಇದನ್ನು ಸಹಿಸದ ಬಿಜೆಪಿ ಅಪಪ್ರಚಾರದಲ್ಲಿ ನಿರತವಾಗಿದೆ ಎಂದು ಹೇಳಿದರು.
2008 ರಲ್ಲಿ ಬಿ.ಎಸ್ ಯಡಿಯೂರಪ್ಪಮುಖ್ಯಮಂತ್ರಿ ಆಗಿದ್ದಾಗ ಮೈಷುಗರ್ ಅಧ್ಯಕ್ಷರನ್ನಾಗಿ ನಾಗರಾಜಪ್ಪ ರನ್ನ ಅಧ್ಯಕ್ಷರನ್ನಾಗಿ ಮಾಡಿದ್ದರು ಅವರು 121 ಕೋಟಿ ಹಣವನ್ನು ನುಂಗಿ ಹಾಕಿದ್ದಾರೆ, ಈ ಬಗ್ಗೆ ಲೋಕಾಯುಕ್ತ ತನಿಖೆ ಕೂಡ ಆಗಿದೆ, ಆ ಹಣವನ್ನು ಬಿಜೆಪಿ ನಾಯಕರು ವಸೂಲಿ ಮಾಡಿಕೊಡಲಿ ಎಂದು ಆಗ್ರಹಿಸಿದರು.
ಕಾರ್ಖಾನೆಯನ್ನು ಮುಚ್ಚಿಹಾಕುವ ಹುನ್ನಾರವನ್ನು ಬಿಜೆಪಿ ಮಾಡುತ್ತಾ ಬಂದಿದೆ ಹಾಗಾಗಿ ಸಣ್ಣಪುಟ್ಟ ವಿಷಯದಲ್ಲಿ ಕಾರ್ಖಾನೆ ವಿರುದ್ಧ ಅಪಪ್ರಚಾರ ಮಾಡುತ್ತಾ ಬಂದಿದೆ, ನಿಜಕ್ಕೂ ಕಾಂಗ್ರೆಸ್ ಸರ್ಕಾರ ಐನೂರಕ್ಕೂ ಹೆಚ್ಚು ಕೋಟಿ ಅನುದಾನವನ್ನು ನೀಡುವ ಮೂಲಕ ಜಿಲ್ಲೆಯ ರೈತರ ಹಿತ ಕಾಪಾಡಿದೆ, ಇದನ್ನು ಸಹಿಸದೆ ಅಪಪ್ರಚಾರ ಮಾಡಿ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯನ್ನು ಮುಚ್ಚಿ ಹಾಕಲು ಹುನ್ನಾರ ಮಾಡಿದೆ ಎಂದು ಕಿಡಿಕಾರಿದರು.
ಪಕ್ಷದ ಮುಖಂಡರಾದ ಮೋಹನ್ ಕುಮಾರ್, ಶಿವಾನಂಜು, ಅಂಜನಾ ಶ್ರೀಕಾಂತ್, ಸಿ ಎಂ ದ್ಯಾವಪ್ಪ,ಸುಂಡಹಳ್ಳಿ ಮಂಜುನಾಥ್, ಎಚ್.ಡಿ ಜಯರಾಮ್, ಚಂದಗಾಲು ವಿಜಯಕುಮಾರ್, ಪ್ರಕಾಶ್ ನೇತೃತ್ವ ವಹಿಸಿದ್ದರು.
ಮೈಷುಗರ್ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Recent Comments
Hello world!
on