0.5 C
New York
Tuesday, January 14, 2025

Buy now

spot_img

ಪರಿಶಿಷ್ಟರಿಗೆ ಸಂವಿಧಾನಬದ್ದ ಹಕ್ಕು ನಿರಾಕರಣೆ : ಭೀಮಸೇನೆ ಕರ್ನಾಟಕ ಪ್ರತಿಭಟನೆ

ಮಂಡ್ಯ :- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರನ್ನು ಅಮಾನುಷವಾಗಿ ನಡೆಸಿಕೊಂಡು ಸಂವಿಧಾನ ಬದ್ದ ಹಕ್ಕು ನಿರಾಕರಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿ ಭೀಮಸೇನೆ ಕರ್ನಾಟಕ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಸಮುದಾಯದ ಜನರನ್ನು ಅಮಾನುಷವಾಗಿ ನಡೆಸಿಕೊಳ್ಳುತ್ತಿರುವವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆ ಯಡಿ ಮೊಕದ್ದಮ್ಮೆ ದಾಖಲು ಮಾಡುವಂತೆ ಒತ್ತಾಯಿಸಿದರು.
ಕಬ್ಬನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜನತೆಗೆ ನಿವೇಶನ ದೊರಕಿಸಿಕೊಡಲು ಗರೀಬಿ ಸೈಟಿಗಾಗಿ ಮೀಸಲಿರಿಸಿದ್ದ 7 ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು ಜಿಲ್ಲಾಡಳಿತ ಈ ಕೂಡಲೇ ಒತ್ತುವರಿ ತೆರವು ಗೊಳಿಸಿ ವಶಕ್ಕೆಪಡೆಯಬೇಕು, ಸಾರ್ವಜನಿಕ ಸ್ಮಶಾನ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ಜಯಪುರ ಗ್ರಾಮದಲ್ಲಿ ಪರಿಶಿಷ್ಟರು ಓಡಾಡುತ್ತಿದ್ದ ರಸ್ತೆಗೆ ತಡೆಗೋಡೆ ನಿರ್ಮಿಸುವವರ ವಿರುದ್ಧ ಕಾನೂನು ಕ್ರಮವಹಿಸಿ ತಡೆಗೋಡೆ ತೆರವುಗೊಳಿಸಬೇಕು, ಮಳೆಯಿಂದ ಕುಸಿದಿರುವ ನಾಲ್ಕು ಮನೆಗಳ ಮಾಲೀಕರಿಗೆ ಪರಿಹಾರ ನೀಡಬೇಕು, ಸೀತಾಪುರ ಗ್ರಾಮದಲ್ಲಿ ವಾಸಿಸುತ್ತಿರುವ ವಾಲ್ಮೀಕಿ ಸಮುದಾಯದ ಜನತೆಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣ ಪತ್ರ ನೀಡದೆ ವಂಚನೆ ಮಾಡಿರುವ ತಾಲೂಕು ಆಡಳಿತ ಅಧಿಕಾರಿಗಳ ವಿರುದ್ಧ ಮೊಕದ್ದಮ್ಮೆ ದಾಖಲಿಸಿ ಜಾತಿ ಪ್ರಮಾಣ ಪತ್ರ ನೀಡಬೇಕು, ಜಿಲ್ಲೆಯ ಪರಿಶಿಷ್ಟರು ವಾಸಿಸುವ ಗ್ರಾಮಗಳಲ್ಲಿ ಸ್ಮಶಾನ ಕಾಯ್ದಿರಿಸುವಂತೆ ತಾಲೂಕು ಆಡಳಿತಕ್ಕೆ ನಿರ್ದೇಶನ ನೀಡಬೇಕು, ಪರಿಶಿಷ್ಟ ಪಂಗಡ ಸಮುದಾಯದ ಜನರ ಸಮಸ್ಯೆ ನಿವಾರಣೆಗೆ ಸಮುದಾಯದ ಮುಖಂಡರ ಸಭೆ ಕರೆದು ಚರ್ಚಿಸಿ ಪರಿಹಾರ ರೂಪಿಸಬೇಕು ಎಂದು ಒತ್ತಾಯಿಸಿದರು.
ಸೇನೆಯ ರಾಜ್ಯಾಧ್ಯಕ್ಷ ಪ್ರಸನ್ನ ಜೆ, ಲವ ಕೆ ಎಚ್, ಸುಂದರಿ, ಸುನಿಲ್ ಕೆ ಸಿ, ಮಹೇಶ್ ಕೆ ಪಿ, ಕುಳ್ಳ ನಿಂಗಯ್ಯ, ಪ್ರವೀಣ್ ಕೆ ಎಸ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles