8.4 C
New York
Thursday, November 21, 2024

Buy now

spot_img

ಕನ್ನಡ ರಾಜ್ಯೋತ್ಸವ ನಾಡು,ನುಡಿಯ ಪ್ರೀತಿಯ ಸಂಕೇತ

ಮಂಡ್ಯ :- ಕನ್ನಡ ರಾಜ್ಯೋತ್ಸವವು ನಾಡು ನುಡಿಯ ಬಗೆಗಿನ ಪ್ರೀತಿ, ಅಭಿಮಾನವನ್ನು ಸದಾ ನಮಗೆ ನೆನಪಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ನಗರದ ಸರ್ ಎಂವಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜರೋಹಣ ನೆರವೇರಿಸಿ ಮಾತನಾಡಿ ನಮ್ಮ ನಾಡನ್ನು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಬೆಯ ನಾಡು, ಎಂಬೆಲ್ಲಾ ಹೆಸರುಗಳಿಂದ ಕರೆಯಲಾಗುತ್ತದೆ. ಹರಿದು ಹಂಚಿಹೋಗಿದ್ದ ಕನ್ನಡ ನಾಡಿನ ಏಕೀಕರಣಕ್ಕಾಗಿ ಆಲೂರು ವೆಂಕಟರಾಯರು ಅನೇಕ ಸಮ್ಮೇಳನಗಳನ್ನು ನಡೆಸಿ ಹೋರಾಟ ಪ್ರಾರಂಭಿಸಿದರು. 1924ರಲ್ಲಿ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಹುಯಿಲಗೊಳ ನಾರಾಯಣ ರಾಯರು: ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂಬ ಗೀತೆಯನ್ನು ಹಾಡಿ ಎಲ್ಲರ ಗಮನ ಸೆಳೆದರು. 1950 ರಲ್ಲಿ ಭಾರತವು ಗಣರಾಜ್ಯವಾದ ನಂತರ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳು ನವೆಂಬರ್ 1, 1956ರಲ್ಲಿ ರಚನೆಯಾದವು. ಇದು ವಿಶಾಲ ಮೈಸೂರು ರಾಜ್ಯದ ಉದಯಕ್ಕೆ ಕಾರಣವಾಯಿತು ಎಂದರು.
ಕರ್ನಾಟಕ ರಾಜ್ಯದ ಏಕೀಕರಣಕ್ಕೆ ಹಲವಾರು ವ್ಯಕ್ತಿಗಳು ಕಾರಣ ಕರ್ತರಾಗಿದ್ದಾರೆ. ಅವರಲ್ಲಿ ಡೆಪ್ಯೂಟಿ ಚನ್ನಬಸಪ್ಪ, ಎನ್.ಎಸ್. ಹರ್ಡಿಕರ್ ಮಂಜಪ್ಪ, ಗಂಗಾಧರ ರಾವ್ ದೇಶಪಾಂಡೆ, ಆರ್.ಆರ್.ದಿವಾಕರ್, ಸಕ್ಕರಿ ಬಾಳಾಚಾರ್ಯ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ.ಶಿವರಾಮ್ ಕಾರಂತ, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ. ಶ್ರೀಕಂಠಯ್ಯ ಹಾಗೂ ಇನ್ನೂ ಹಲವು ಮಹನೀಯರ ಹೋರಾಟವನ್ನು ಮರೆಯಲಾಗದು ಎಂದರು.
ಆದಿ ಕವಿ ಪಂಪನಿಂದ ಇಲ್ಲಿಯವರೆಗೂ ಅನೇಕ ಕವಿ,ಸಾಹಿತಿಗಳು ನಾಡು ನುಡಿ ಹಾಗೂ ಕನ್ನಡ ನಾಡಿನ ಕಲೆ, ಸಂಸ್ಕೃತಿಯ ಬಗ್ಗೆ ಸಮೃದ್ಧ ಸಾಹಿತ್ಯ ರಚಿಸಿದ್ದಾರೆ. ಮಂಡ್ಯದ ನೆಲವು ಹಲವು ಕವಿ, ಸಾಹಿತಿಗಳು ಹಾಗೂ ಕಲಾವಿದರಿಗೆ ಜನ್ಮ ನೀಡಿದ್ದು, ಅವರ ಕನ್ನಡದ ಸೇವೆಯನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ. ಬಿ.ಎಂ.ಶ್ರೀ ,ಪು.ತಿ.ನ, ಕೆ.ಎಸ್. ನರಸಿಂಹಸ್ವಾಮಿ, ಎ.ಎನ್.ಮೂರ್ತಿರಾಯರು, ಹೆಚ್.ಎಲ್.ನಾಗೇಗೌಡ ಇನ್ನೂ ಮೊದಲಾದ ಮಹನೀಯರನ್ನು ನಾವೆಲ್ಲರೂ ನೆನೆಯಬೇಕಿದೆ. ಭಾರತೀಯ ಭಾಷೆಗಳಲ್ಲಿಯೇ ಅತೀ ಹೆಚ್ಚಿನ ಜ್ಞಾನಪೀಠ ಪ್ರಶಸ್ತಿಗಳು ನಮ್ಮ ಕನ್ನಡ ಭಾಷೆಯ ಸಾಹಿತಿಗಳಿಗೆ ಬಂದಿರುವುದು ಹೆಮ್ಮೆಯ ಸಂಗತಿ ಎಂದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. 20,21 ಮತ್ತು 22 ರಂದು ಮೂರು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ಬಹಳ ವಿಜೃಂಭಣೆಯಿAದ ಅಚರಿಸಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಜಿಲ್ಲಾಡಳಿತ ವ್ಯವಸ್ಥಿತವಾಗಿ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಿದೆ. ಜಿಲ್ಲೆಯ ಎಲ್ಲಾ ಶಾಸಕರೂ ಈ ಕಾರ್ಯದಲ್ಲಿ ಕೈಜೋಡಿಸಿರುವುದು ಮತ್ತಷ್ಟು ಶಕ್ತಿ ತುಂಬಿದೆ ಎಂದರು.
ಈ ಹಿಂದೆ ಮೊದಲ ಬಾರಿಗೆ 48ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 1974 ರಲ್ಲಿ ಮತ್ತು ಎರಡನೇ ಬಾರಿಗೆ 63ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 1994ರಲ್ಲಿ ಜರುಗಿದ್ದು, ಹೆಮ್ಮೆಯ ಸಂಗತಿ. ಅದೇ ರೀತಿ ಮೂರನೇ ಬಾರಿಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸಲು ನಮ್ಮ ಜಿಲ್ಲೆಗೆ ಅವಕಾಶ ಸಿಕ್ಕಿರುವುದು, ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಇದನ್ನು ನಾವು ಹಬ್ಬದಂತೆ ಆಚರಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಗ್ಗೂಡಿ ಸಹಕಾರ ಮತ್ತು ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.
ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಸದರಿ ಯೋಜನೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್-2024 ರ ಅಂತ್ಯಕ್ಕೆ 4,43,376 ಕುಟುಂಬಗಳ ಪೈಕಿ 14,59,087 ಫಲಾನುಭವಿಗಳು ಇದರ ಸದುಪಯೋಗ ಪಡೆಯುತ್ತಿದ್ದಾರೆ ಹಾಗೂ 5 ಕೆ.ಜಿ. ಅಕ್ಕಿಗೆ ಪರ್ಯಾಯವಾಗಿ ನಗದು ರೂಪದಲ್ಲಿ ನೇರ ನಗದು ವರ್ಗಾವಣೆ ಮಾಡಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೆ ರೂ.307ಕೋಟಿ ಹಣವನ್ನು ಕುಟುಂಬಗಳಿಗೆ ವರ್ಗಾಯಿಸಲಾಗಿರುತ್ತದೆ ಎಂದರು.
ಎಲ್ಲಾ ವರ್ಗದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದಾಗಿ ಶಕ್ತಿಯೋಜನೆಯನ್ನು ಜಾರಿಗೆ ತಂದಿದ್ದು, ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಕ್ಟೋಬರ್-2024ರ ಅಂತ್ಯಕ್ಕೆ ಸುಮಾರು 9.20 ಕೋಟಿ ಮಹಿಳೆಯರು ಉಚಿತವಾಗಿ ಶಕ್ತಿ ಯೋಜನೆಯಡಿ ಪ್ರಯಾಣಿಸಿರುತ್ತಾರೆ. ಇದರ ಮೊತ್ತ ರೂ 232 ಕೋಟಿಗಳಾಗಿರುತ್ತದೆ ಎಂದರು.
ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಪರಿಕಲ್ಪನೆಯನ್ವಯ ಗೃಹಜ್ಯೋತಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಸುಮಾರು 4,82,155(ನಾಲ್ಕು ಲಕ್ಷದ ಎಂಭತ್ತೆರೆಡು ಸಾವಿರದ ಒಂದು ನೂರ ಐವತ್ತೆöÊದು) ಗ್ರಾಹಕರು ಸದುಪಯೋಗ ಪಡೆದುಕೊಂಡಿರುತ್ತಾರೆ. ಇದರಿಂದ ರೂ. 226 ಕೋಟಿ ಮೊತ್ತದ ವಿದ್ಯುತ್ ಬಿಲ್ಲನ್ನು ಉಚಿತವಾಗಿ ನೀಡಲಾಗಿರುತ್ತದೆ.
ಮಹಿಳೆ ಮನೆಯೊಳಗೆ ಆರ್ಥಿಕವಾಗಿ ಶಕ್ತಿವಂತಳಾದರೆ ಸಮಾಜದ ಅಭಿವೃದ್ದಿಗೂ ಪೂರಕವಾಗುತ್ತದೆ ಎಂಬ ದೃಷ್ಠಿಯಿಂದ ಮಹಿಳೆಯ ‘ಆರ್ಥಿಕ ಸಬಲೀಕರಣ’ಕ್ಕಾಗಿ ಪ್ರತಿ ತಿಂಗಳು ರೂ 2,000(ಎರಡು ಸಾವಿರ ರೂ) ನೀಡಲಾಗುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಆಗಸ್ಟ್ -2024ರ ಅಂತ್ಯಕ್ಕೆ ಒಟ್ಟು 4,51,354 ಅರ್ಹ ಫಲಾನುಭವಿಗಳಿಗೆ ರೂ.1109ಕೋಟಿ ಮೊತ್ತವನ್ನು ಈ ಯೋಜನೆಯಲ್ಲಿ ಪಾವತಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಯುವಕರಿಗೆ ಉದ್ಯೋಗ ಅರಸುವಾಗ ನಿರಾಶಾಭಾವನೆ ಮೂಡದಿರಲಿ ಎಂಬ ಉದ್ದೇಶದಿಂದ ಅವರಿಗೆ ಅನುಕೂಲಕರವಾಗುವಂತೆ ನಿರುದ್ಯೋಗದ ಸಮಯದಲ್ಲಿ ಪ್ರಯೋಜನವಾಗುವ ಉದ್ದೇಶದಿಂದ ‘ಯುವನಿಧಿ ಯೋಜನೆ’ಯನ್ನು ಜಾರಿಗೊಳಿಸಿದ್ದು, ಮಂಡ್ಯ ಜಿಲ್ಲೆಯಲ್ಲಿ ಸೆಪ್ಟಂಬರ್ -2024 ರ ಅಂತ್ಯಕ್ಕೆ 10,124 ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆ ರೂ 3.00ಕೋಟಿಗಳನ್ನು ಪಾವತಿಸಲಾಗಿದೆ ಎಂದರು ಮೈ-ಷುಗರ್ ಕಾರ್ಖಾನೆಯನ್ನು ಪುನಾರಂಭ ಮಾಡಿ ಇದುವರೆಗೂ 1.70 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ. ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಲು ಘೋಷಣೆ ಮಾಡಲಾಗಿರುತ್ತದೆ. ಇದರಂತೆ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲಾಗಿದೆ. ಮಂಡ್ಯ ಜಿಲ್ಲೆಯ ರೈತ ಮುಖಂಡರು ಹಾಗೂ ಕಬ್ಬು ಬೆಳಗಾರರ ಜೊತೆ ಸಮಾಲೋಚನೆ ನಡೆಸಿ, ಹೊಸ ಕಾರ್ಖಾನೆ ನಿರ್ಮಾಣ ಅಥವಾ ಪುನಃಶ್ಚೇತನಗೊಳಿಸುವ ಸಂಬAಧ ತೀರ್ಮಾನಿಸಲಾಗುವುದು ಎಂದರು.
ಒಂದೇ ಸೂರಿನಡಿ ಕೃಷಿ ಮತ್ತು ಕೃಷಿ ಸಂಬAಧಿತ ಎಲ್ಲಾ ಯೋಜನೆಗಳು ರೈತರಿಗೆ ತಲುಪಿಸಬೇಕೆಂಬ ಸದುದ್ದೇಶದಿಂದ ಜಿಲ್ಲೆಯಲ್ಲಿ 13 ನಿವೇಶನಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 08 ರೈತ ಸಂಪರ್ಕÀ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಮಂಡ್ಯ ಹಾಗೂ ನಾಗಮಂಗಲ ತಾಲ್ಲೂಕಿನಲ್ಲಿ ಸೆಂಟರ್ ಆಫ್ ಎಕ್ಸ ಲೆನ್ಸ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ಎಲ್ಲಾ ಇಲಾಖೆಗಳಿಗೂ ಮಾತೃ ಇಲಾಖೆಯಂತಿರುವ ಕಂದಾಯ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಬಾಕಿ ಇದ್ದ ಸುಮಾರು 12 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ ಎಂದರು.
ಕೃಷಿ ಜಮೀನುಗಳಿಗೆ ಸಂಬಂಧಿಸಿದಂತೆ ವ್ಯಾಜ್ಯಗಳನ್ನು ತಪ್ಪಿಸುವ ದೃಷ್ಠಿಯಿಂದ ಕಂದಾಯ ದಾಖಲೆಗಳಲ್ಲಿ ನಿಖರತೆಗಳನ್ನು ತರಲು ಎಲ್ಲಾ ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ನಡೆಯುತ್ತಿದೆ. ಒಟ್ಟು 22 ಲಕ್ಷ ಖಾತೆದಾರರ ಪೈಕಿ ಸುಮಾರು 13 ಲಕ್ಷ ಖಾತೆದಾರರ ಆಧಾರ್ ಜೋಡಣೆ ಮಾಡಲಾಗಿದೆ ಎಂದರು.
ಪ್ರವಾಹ ಮತ್ತು ಬರಗಾಲದಂತಹ ಹವಾಮಾನ ಸಂಬAಧಿತ ಬೆಳೆ ನಷ್ಟಗಳಿಗೆ ಆರ್ಥಿಕ ರಕ್ಷಣೆ ಒದಗಿಸುವ ಉದ್ದೇಶದಿಂದ ಬೆಳೆ ವಿಮೆ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಕಳೆದ ವರ್ಷ 2023ನೇ ಸಾಲಿನಲ್ಲಿ ವಿಮಾ ಯೋಜನೆಯಡಿಯಲ್ಲಿ ಈವರೆಗೂ ರಾಜ್ಯದಲ್ಲಿ ರೂ.2000 ಕೋಟಿ ವಿಮಾ ಪರಿಹಾರ ಧನವನ್ನು ರೈತರಿಗೆ ವಿತರಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 85,960 ರೈತರು ನೋಂದಣಿ ಮಾಡಿಸಿಕೊಂಡಿದ್ದು, ರೂ.38.92 ಕೋಟಿ ಪರಿಹಾರ ವಿಮಾ ಮೊತ್ತವನ್ನು ಪಾವತಿಸಲಾಗಿದೆ ಎಂದು ವಿವರಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ನದಿ ನೀರಿನಿಂದ ಸಮರ್ಪಕ ಕುಡಿಯುವ ನೀರು ಪೂರೈಸಲು ‘ಬಹು ಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ’ ಅಡಿಯಲ್ಲಿ ಮೊದಲ ಹಂತದಲ್ಲಿ ರೂ. 943ಕೋಟಿ ಹಾಗೂ 2ನೇ ಹಂತದಲ್ಲಿ ರೂ.885ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಅದೇ ರೀತಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗಾಗಿ ಈ ವರ್ಷ ರೂ 14 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ. ಕಾಮಗಾರಿ ಅನುಷ್ಠಾನಕ್ಕೆ ಕ್ರಮವಹಿಸಲಾಗಿದೆ. ಇದೇ ರೀತಿ ಅಲ್ಪ ಸಂಖ್ಯಾತರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗೂ ಸಹ ಈ ವರ್ಷ ನಮ್ಮ ಸರ್ಕಾರದಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು ರೂ 35 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮತ್ತು ಆಧುನೀಕಣಗೊಳಿಸುವ ನಿಟ್ಟಿನಲ್ಲಿ, ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅSಖ ಅಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ 20 ಶಾಲೆಗಳನ್ನು ಅನುದಾನದಿಂದ ಅಭಿವೃದ್ದಿ ಪಡಿಸಲು ಯೋಜಿಸಲಾಗಿದೆ ಹಾಗೂ 04 ಶಾಲೆಗಳನ್ನು ಗ್ರೀನ್ ಫೀಲ್ಡ್ ಯೋಜನೆಯಡಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿ ಪಡಿಸಲು ಯೋಜಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
2024 ನೇ ಸಾಲಿನ ನಾಡಹಬ್ಬ ಮೈಸೂರು ದಸರಾ ದಲ್ಲಿ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಟೆಯಾದ ವಿಶ್ವವಿಖ್ಯಾತ ಕೆ.ಆರ್.ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ದಸರಾ ಮೆರವಣೆಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು. ಈ ಸ್ತಬ್ಧ ಚಿತ್ರಕ್ಕೆ ಜಿಲ್ಲೆಗೆ ಪ್ರಥಮ ಸ್ಥಾನ ದೊರಕಿರುವುದು ಹೆಮ್ಮೆಯ ವಿಷಯವಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಡಾ. ಬಾಬು ಜಗಜೀವನ್ ರಾಂ ಭವನವನ್ನು 200*100 ವಿಸ್ತೀರ್ಣದ ನಿವೇಶನದಲ್ಲಿ ರೂ 380.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಶಂಕುಸ್ಥಾಪನೆ ಮಾಡಲಾಗಿದೆ ಎಂದರು.
ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದ ಅವರು ಕನ್ನಡಿಗರಿಗೂ ನಾಡು, ನುಡಿಯ ಬಗೆಗೆ ಪ್ರೀತಿ, ಅಭಿಮಾನ ಬೆಳೆಸಿಕೊಳ್ಳಬೇಕು. ನಾಡು ನುಡಿಗಾಗಿ ಶ್ರಮಿಸಿದ ಮಹನೀಯರು, ಕವಿಗಳನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಇಂದಿನ ಯುವ ಪೀಳಿಗೆ ಇವರ ಆದರ್ಶಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕು. ಆ ಮೂಲಕ ನಾಡಿಗೆ, ದೇಶÀಕ್ಕೆ ಕೀರ್ತಿ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಕನ್ನಡ ನಾಡು, ಕನ್ನಡ ನುಡಿ, ಕನ್ನಡದ ಸಂಸ್ಕೃತಿ, ಒಗ್ಗಟ್ಟಿನ ಭಾವನೆಗಳನ್ನು ಪ್ರತಿಯೊಬ್ಬ ಕನ್ನಡಿಗನ ಮನೆ ಮನಗಳಲ್ಲಿ ಭಿತ್ತಿ ಬೆಳೆಸಲು ಎಲ್ಲರೂ ಶ್ರಮಿಸೋಣ,ಜನಪರ ಆಡಳಿತ ಮತ್ತು ಆಡಳಿತವನ್ನು ಜನ ಸಾಮಾನ್ಯರ ಬಳಿ ಕೊಂಡೊಯ್ಯುವುದು ನಮ್ಮ ಸರ್ಕಾರದ ಆಶಯವಾಗಿದೆ. ಸರ್ಕಾರ ರೂಪಿಸುವ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಎಲ್ಲರ ಸಹಕಾರ ಮತ್ತು ಬದ್ಧತೆ ಅಗತ್ಯವಾಗಿದೆ. ಸರ್ವರ ಒಳಿತಿಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಇದೇ ವೇಳೆ ಜಿಲ್ಲೆಯ ವಿವಿಧ ಕ್ಷೇತ್ರದ 21 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಶಾಸಕ ಪಿ.ರವಿಕುಮಾರ್, ದಿನೇಶ್ ಗೂಳಿಗೌಡ, ಮುಡಾ ಅಧ್ಯಕ್ಷ ನಯೀಮ್, ನಗರಸಭೆ ಅದ್ಯಕ್ಷ ನಾಗೇಶ್, ಉಪಾಧ್ಯಕ್ಷ ಅರುಣ್, ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles