8.7 C
New York
Thursday, November 14, 2024

Buy now

spot_img

ಅಂಗವಿಕಲ ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿ

ಮಂಡ್ಯ :- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸ್ಸು ಯಥಾವತ್ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘ ಮನವಿ ಸಲ್ಲಿಸಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಚ್ಎಲ್ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲ ನೌಕರರು ಸುಗಮವಾಗಿ ಕರ್ತವ್ಯ ನಿರ್ವಹಿಸಲು ಅಂಗವಿಕಲ ಸ್ನೇಹಿ ವಾತಾವರಣ ನಿರ್ಮಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಏಳನೇ ವೇತನದ ಆಯೋಗದ ಶಿಫಾರಸ್ಸಿನಂತೆ ಶೇ 6 ರಷ್ಟು ಪ್ರಯಾಣ ಭತ್ಯೆ ನೀಡಬೇಕು, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ ಎ ಬಿ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಬಡ್ತಿ ಮೀಸಲಾತಿ ಜಾರಿ ಮಾಡಿರುವ ಮಾದರಿಯಲ್ಲಿ ರಾಜ್ಯ ಸರ್ಕಾರವು ಎ ಮತ್ತು ಬಿ ವೃಂದದ ಹುದ್ದೆಗಳಿಗೂ ಬಡ್ತಿ ಮೀಸಲಾತಿ ನೀಡಬೇಕು,ಶಾಲಾ – ಕಾಲೇಜುಗಳಲ್ಲಿ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ಅಂಗವಿಕಲ ನೌಕರರಿಗೆ ಸೇವಾವಧಿಯಲ್ಲಿ ಒಂದು ಬಾರಿ ವರ್ಗಾವಣೆ ಪ್ರಕ್ರಿಯೆ ಕೈಬಿಟ್ಟು ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಬಾರಿಯಾದರೂ ವರ್ಗಾವಣೆ ಪಡೆಯಲು ಮುಕ್ತ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿಕಲಚೇತನರಿಗೆ ಮೀಸಲಿರಿಸಿದ್ದ ಹುದ್ದೆಗಳನ್ನು ಭರ್ತಿ ಮಾಡದೆ ಬಾಕಿ ಉಳಿಸಿಕೊಂಡಿದ್ದು, ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ನೇರ ನೇಮಕಾತಿ ಮಾಡಿಕೊಳ್ಳಬೇಕು,ನಿರುದ್ಯೋಗಿ ವಿಕಲಚೇತನರಿಗೆ ನೀಡಲಾಗುತ್ತಿರುವ ಪೋಷಣಾ ಭತ್ಯೆಯನ್ನು ಮಾಸಿಕ 5,000 ರೂ ನೀಡಬೇಕು,ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ವಿಶೇಷ ಚೇತನ ಕಾರ್ಯಕರ್ತರ ಸೇವೆ ಖಾಯಂ ಮಾಡಬೇಕು ಇವರಿಗೆ ಉದ್ಯೋಗ ಭದ್ರತೆ ನೀಡಬೇಕು ಇಲ್ಲದಿದ್ದರೆ, ಕನಿಷ್ಠ ವೇತನ ಜಾರಿಮಾಡಿ ಜೀವನ ಭದ್ರತೆ ಒದಗಿಸುವುದು ಎಂದು ಮನವಿ ಮಾಡಿದರು.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ವಿಕಲಚೇತನರ ಮೇಲಾಗುತ್ತಿರುವ ಶೋಷಣೆ ತಪ್ಪಿಸಲು ಅಂಗವಿಕಲ ವ್ಯಕ್ತಿಗಳ ಅಧಿನಿಯಮ 2016ರ ಅನ್ವಯ ಕಠಿಣ ಕ್ರಮ ಕೈಗೊಳ್ಳಬೇಕು, ವಿಕಲ ಚೇತನರ ರಿಯಾಯಿತಿ ಬಸ್ ಪಾಸ್ ಪ್ರಯಾಣಕ್ಕೆ ನಿಗದಿ ಮಾಡಿರುವ 199 ಕಿ ಮೀ ಮಿತಿಯನ್ನು ಕೈ ಬಿಟ್ಟು ಶಕ್ತಿ ಯೋಜನೆ ಮಾದರಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು, ಸರ್ಕಾರಿ ಕಚೇರಿಗಳಲ್ಲಿ ವಿಕಲ ಚೇತನರ ಸ್ನೇಹಿ ವಾತಾವರಣ ನಿರ್ಮಿಸಿ ಲಿಫ್ಟ್,,ರಾಂಪ್, ಶೌಚಾಲಯ ದಂತಹ ಮೂಲ ಸೌಕರ್ಯ ಕಲ್ಪಿಸಬೇಕು,ನಿಗಮ ಮಂಡಳಿ, ಪರಿಷತ್, ವಿಶ್ವವಿದ್ಯಾನಿಲಯ ಹಾಗೂ ಸ್ವಾಯತ್ತ ಸಂಸ್ಥೆಗಳ ಸಮಿತಿಗಳಿಗೆ ವಿಕಲಚೇತನ ಪ್ರತಿಭಾನ್ವಿತರು, ನಿವೃತ್ತ ನೌಕರರನ್ನು ನಾಮನಿರ್ದೇಶನ ಮಾಡಲು ಶೇ 5 ರಷ್ಟು ಮೀಸಲಾತಿ ಕಲ್ಪಿಸಿ ಸೂಕ್ತ ನಿಯಮಾವಳಿ ರೂಪಿಸಬೇಕು,ವಿಕಲಚೇತನರ ಸಬಲೀಕರಣಕ್ಕಾಗಿ ಅಂಗವಿಕಲರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಅದೇ ರೀತಿ ವಿಶ್ವವಿದ್ಯಾಲಯಗಳಲ್ಲಿ ವಿಕಲಚೇತನರ ಸಂಪನ್ಮೂಲ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಬೇಕು, ಅಂಗವಿಕಲರ ಮೀಸಲು ಪ್ರಮಾಣವನ್ನು ಶೇ 5 ರಿಂದ 15ಕ್ಕೆ ಹೆಚ್ಚಿಸಬೇಕು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುವ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಕಲ ಚೇತನರ ಸಂಘ ಸಂಸ್ಥೆಗಳಿಗೆ ಶೇ 5 ರಷ್ಟು ಪ್ರತ್ಯೇಕ ಅನುದಾನ ಮೀಸಲಿಸಬೇಕು, ಇದೇ ಮಾದರಿಯಲ್ಲಿ ಮಾದರಿಯಲ್ಲಿ ಕ್ರೀಡಾ ಚಟುವಟಿಕೆಗೆ ಪ್ರತ್ಯೇಕ ಅನುದಾನ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್ ಶಂಕರಯ್ಯ,ಪ್ರಧಾನ ಕಾರ್ಯದರ್ಶಿ ಜಿ.ಎಸ್ ಸಿದ್ದರಾಜು,ಖಜಾಂಚಿ ಬಿ ಬಸವರಾಜು ಇತರರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles